ಇಂದಿನಿಂದ ಗೋವಾದಲ್ಲಿ ಶುರುವಾಗಿರುವ 51ನೇ ಅಂತಾರಾಷ್ಟ್ರೀಯ ಸಿನಿಮಾ ಉತ್ಸವಕ್ಕೆ (IFFI) ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.
ತಮ್ಮ ನಟನೆ ಮೂಲಕ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿರುವ ನಟ ಸುದೀಪ್, ಗೋವಾದಲ್ಲಿ ಆಯೋಜಿಸಿರುವ ಪ್ರತಿಷ್ಠಿತ ಅಂತಾರಾಷ್ಟ್ರೀಯ ಫಿಲ್ಮ್ ಉತ್ಸವದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುತ್ತಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರವಾಗಿದೆ.
ಗೋವಾದ ಪಣಜಿಯ ಶ್ಯಾಮ್ ಪ್ರಸಾದ್ ಮುಖರ್ಜಿ ಒಳಾಂಗಣ ಕ್ರೀಡಾಂಗಣದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಿಲಾಗಿದ್ದು, ಕಾರ್ಯಕ್ರಮ ಜನವರಿ 24ರವರೆಗೆ ನಡೆಯಲಿದೆ.
ಏಷ್ಯಾದಲ್ಲಿಯೇ ಅತಿದೊಡ್ಡ ಸಿನಿ ಉತ್ಸವಾಗಿದ್ದು, ಈ ಉತ್ಸವದಲ್ಲಿ ವಿವಿಧ ದೇಶಗಳ 224 ಸಿನಿಮಾಗಳು ಪ್ರದರ್ಶನಗೊಳ್ಳಲಿವೆ.