ETV Bharat / sitara

ಈ ಪರಿಸ್ಥಿತಿಯಲ್ಲೂ ಗೆದ್ದುಬರುವ ಶಕ್ತಿ ಯುವರತ್ನ ಚಿತ್ರತಂಡಕ್ಕೆ ಸಿಗಲಿ: ಕಿಚ್ಚನ ಆಶಯ

author img

By

Published : Apr 3, 2021, 1:06 PM IST

ಬಿಬಿಎಂಪಿ ವ್ಯಾಪ್ತಿ ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಕಲಬುರ್ಗಿ, ದಕ್ಷಿಣ ಕನ್ನಡ, ಉಡುಪಿ, ಬೀದರ್‌ ಮತ್ತು ಧಾರವಾಡ ಜಿಲ್ಲೆಗಳ ಸಿನಿಮಾ ಮಂದಿರಗಳಲ್ಲಿ ಗರಿಷ್ಠ ಶೇ 50 ವೀಕ್ಷಕರಿಗೆ ಮಾತ್ರ ಅವಕಾಶ ನೀಡಿ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿತ್ತು.

Sudeep
ಕಿಚ್ಚ ಸುದೀಪ್

ಕರ್ನಾಟಕದಲ್ಲಿ ಮಹಾಮಾರಿ ಕೊರೊನಾ ಎರಡನೇ ಅಲೆ ಹೆಚ್ಚಾದ ಹಿನ್ನೆಲೆಯಲ್ಲಿ, ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ರಾಜ್ಯದ 8 ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ಗರಿಷ್ಠ ಶೇ. 50 ಪ್ರೇಕ್ಷಕರಿಗಷ್ಟೇ ಅವಕಾಶ ನೀಡುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ನಟ ಸುದೀಪ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿ ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಕಲಬುರ್ಗಿ, ದಕ್ಷಿಣ ಕನ್ನಡ, ಉಡುಪಿ, ಬೀದರ್‌ ಮತ್ತು ಧಾರವಾಡ ಜಿಲ್ಲೆಗಳ ಸಿನಿಮಾ ಮಂದಿರಗಳಲ್ಲಿ ಗರಿಷ್ಠ ಶೇ 50 ವೀಕ್ಷಕರಿಗೆ ಮಾತ್ರ ಅವಕಾಶ ನೀಡಿ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿತ್ತು. ಈ ನಿರ್ಧಾರಕ್ಕೆ ನಟ ಪುನೀತ್‌ ರಾಜ್‌ಕುಮಾರ್‌ ಮತ್ತು ಚಿತ್ರ ತಂಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಯುವರತ್ನ ಚಿತ್ರ ಬಿಡುಗಡೆಯಾಗಿ ಕೇವಲ ಎರಡೇ ದಿನಕ್ಕೆ ಸರ್ಕಾರ ಈ ನಿರ್ಬಂಧ ಹಾಕಿದ್ದು, ಚಿತ್ರತಂಡ ಹಾಗೂ ಚಿತ್ರರಂಗಕ್ಕೆ ದೊಡ್ಡ ಹೊಡೆತ ಬಿದ್ದಿದೆ.

  • Goin bk to 50% theatrical occupancy is surely a shocker to a film tats jus released. Respecting the govts decision too is our duty, keeping in mind its for a reason. I wsh team #Yuvaratna the best of strength to over come this situation and come out victorious. @hombalefilms

    — Kichcha Sudeepa (@KicchaSudeep) April 3, 2021 " class="align-text-top noRightClick twitterSection" data=" ">

ಸುದೀಪ್‌ ನಟನೆಯ ಕೋಟಿಗೊಬ್ಬ-3 ಚಿತ್ರವೂ ಇದೇ ತಿಂಗಳು ಬಿಡುಗಡೆಗೆ ರೆಡಿಯಾಗಿದೆ. ರಾಜ್ಯ ಸರ್ಕಾರದ ಹೊಸ ನಿಯಮ ಹಾಗೂ ಯುವರತ್ನ ಚಿತ್ರದ ಬಗ್ಗೆ ಟ್ವೀಟ್‌ ಮಾಡಿರುವ ಕಿಚ್ಚ, ‘ಈಗಷ್ಟೇ ಬಿಡುಗಡೆಯಾಗಿರುವ ಚಿತ್ರಗಳಿಗೆ ಸರ್ಕಾರದ ಈ ನಿರ್ಧಾರವು ಆಘಾತ ತಂದಿದೆ. ಈ ನಿರ್ಧಾರದ ಹಿಂದೆ ಸೂಕ್ತವಾದ ಕಾರಣ ಇರುವುದರಿಂದಾಗಿ, ಇದನ್ನು ಗೌರವಿಸುವುದೂ ನಮ್ಮ ಕರ್ತವ್ಯ. ಈ ಪರಿಸ್ಥಿತಿಯಲ್ಲೂ ಗೆದ್ದು ಬರುವ ಶಕ್ತಿಯು ಯುವರತ್ನ ಚಿತ್ರತಂಡಕ್ಕೆ ಸಿಗಲಿ ಎಂದು ನಾನು ಆಶಿಸುತ್ತೇನೆ’ ಎಂದು ತಮ್ಮ ಟ್ವೀಟ್​ನಲ್ಲಿ ಬರೆದುಕೊಂಡಿದ್ದಾರೆ.

ಓದಿ : ಚಲನಚಿತ್ರ ಮಂದಿರಗಳಲ್ಲಿ ವೀಕ್ಷಕರ ಸಂಖ್ಯೆಗೆ ಕಡಿವಾಣ: ಸಿಎಂ ಮನೆ ಮುಂದೆ ಧರಣಿ ನಡೆಸಲು ಪುನೀತ್ ಅಭಿಮಾನಿಗಳ ನಿರ್ಧಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.