ಕಳೆದ ವರ್ಷದ ಸೂಪರ್ ಹಿಟ್ ಚಿತ್ರ ಎನಿಸಿಕೊಂಡ 'ಲವ್ ಮಾಕ್ಟೇಲ್' ಸಿನಿಮಾ ತೆಲುಗಿಗೆ ರೀಮೇಕ್ ಆಗುತ್ತಿರುವುದು ತಿಳಿದ ವಿಚಾರ. 'ಗುರ್ತುಂದಾ ಶೀತಕಾಲಂ' ಹೆಸರಿನ ಚಿತ್ರವನ್ನು ಭಾವನಾ ರವಿ ನಿರ್ಮಿಸುತ್ತಿದ್ದು ರಾಜಶೇಖರ್ ನಿರ್ದೇಶಿಸುತ್ತಿದ್ದಾರೆ. ಚಿತ್ರೀಕರಣ ಕೂಡಾ ಬಿರುಸಿನಿಂದ ಸಾಗುತ್ತಿದೆ.

ಇದನ್ನೂ ಓದಿ: ಅವಕಾಶ ಸಿಕ್ಕರೆ ಖಂಡಿತಾ ಕನ್ನಡ ಚಿತ್ರಗಳಲ್ಲಿ ನಟಿಸುವೆ: ಈಟಿವಿ ಭಾರತ ಜತೆ 'ರಾಧೆಶ್ಯಾಮ್' ನಟಿ ಪೂಜಾ ಹೆಗ್ಡೆ ಮಾತು!
ತೆಲುಗಿನ ನೇಟಿವಿಟಿಗೆ ತಕ್ಕಂತೆ ಸಿನಿಮಾವನ್ನು ಚಿತ್ರೀಕರಿಸಲಾಗುತ್ತಿದೆ. ಸಿನಿಮಾದಲ್ಲಿ ಹಿರಿಯ ನಟಿ ಸುಹಾಸಿನಿ ಕೂಡಾ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂದು ಚಿತ್ರತಂಡ ತಿಳಿಸಿದೆ. ಶೀಘ್ರದಲ್ಲೇ ಸಿನಿಮಾ ಟ್ರೇಲರನ್ನು ಕೂಡಾ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಮಾಹಿತಿ ನೀಡಿದೆ. ಹದಿ ಹರಯ, ಕಾಲೇಜು ವಿದ್ಯಾಭ್ಯಾಸದ ಸಮಯದಲ್ಲಿ ಹಾಗೂ ನಂತರ ಪ್ರತಿಯೊಬ್ಬರ ಜೀವನದಲ್ಲಿ ನಡೆಯುವ ಕೆಲವೊಂದು ಘಟನೆಗಳನ್ನು ಎಂದಿಗೂ ಕೂಡಾ ಮರೆಯಲು ಸಾಧ್ಯವಿಲ್ಲ. ಇಂತಹ ಸನ್ನಿವೇಶಗಳನ್ನು ಈ ಚಿತ್ರದಲ್ಲಿ ಪ್ರೇಕ್ಷಕರ ಕಣ್ಣಿಗೆ ಸುಂದರವಾಗಿ ಕಟ್ಟಿಕೊಡುವ ಪ್ರಯತ್ನ ಮಾಡಲಾಗಿದೆ. ಸುಹಾಸಿನಿ ಈ ಚಿತ್ರದಲ್ಲಿ ಯಾವ ಪಾತ್ರ ಮಾಡುತ್ತಿದ್ದಾರೆ ಎಂಬ ವಿಚಾರ ಇಂದೂ ತಿಳಿದುಬಂದಿಲ್ಲ. ತಮನ್ನಾ, ಸತ್ಯದೇವ್ ಜೊತೆಗೆ ಮೇಘ ಆಕಾಷ್, ಕಾವ್ಯಶೆಟ್ಟಿ, ಪ್ರಿಯದರ್ಶಿ ಹಾಗೂ ಇನ್ನಿತರರು ಚಿತ್ರದಲ್ಲಿ ನಟಿಸುತ್ತಿದ್ದಾರೆ. ಶೀಘ್ರವೇ ಚಿತ್ರಕ್ಕೆ ಸಂಬಂಧಿಸಿದ ಹೆಚ್ಚಿನ ವಿಚಾರ ಚಿತ್ರತಂಡದಿಂದ ಹೊರಬರಲಿದೆ.