ಹೈದರಾಬಾದ್: ಕೊರೊನಾ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಟಾಲಿವುಡ್ ನಟಿ ತಮನ್ನಾ ಭಾಟಿಯಾ 2 ದಿನಗಳ ಚಿಕಿತ್ಸೆ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ವೈದ್ಯರ ಸಲಹೆ ಮೇರೆಗೆ ಮನೆಯಲ್ಲೇ ಐಸೋಲೇಟ್ ಆಗಿ ಅವರು ಸೂಚಿಸುವ ಆಹಾರ ಹಾಗೂ ಮೆಡಿಸನ್ ತೆಗೆದುಕೊಳ್ಳುವುದಾಗಿ ತಮನ್ನಾ ತಿಳಿಸಿದ್ದಾರೆ.
- " class="align-text-top noRightClick twitterSection" data="
">
ನಿನ್ನೆ ಸಂಜೆ ತಮನ್ನಾ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ತಾವು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ವಿಚಾರವನ್ನು ಬರೆದುಕೊಂಡಿದ್ದಾರೆ. "ಕಳೆದ ವಾರ ಶೂಟಿಂಗ್ನಲ್ಲಿ ಭಾಗವಹಿಸಿದ್ದ ವೇಳೆ ನನಗೆ ಸಣ್ಣದಾಗಿ ಜ್ವರ ಕಾಣಿಸಿಕೊಂಡಿತು. ನಂತರ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಇರುವುದು ತಿಳಿಯಿತು. ಆದ್ದರಿಂದ ಹೈದರಾಬಾದ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಈಗ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದೇನೆ. ಸದ್ಯಕ್ಕೆ ಐಸೋಕೇಷನ್ನಲ್ಲಿರಲು ವೈದ್ಯರು ಸೂಚಿಸಿದ್ದಾರೆ. ನನ್ನ ಆರೋಗ್ಯದ ಬಗ್ಗೆ ಕಾಳಜಿ ತೋರಿದ ನಿಮ್ಮೆಲ್ಲರಿಗೂ ಧನ್ಯವಾದಗಳು. ಎಲ್ಲರೂ ಸೇಫ್ ಆಗಿರಿ, ಆರೋಗ್ಯವಾಗಿರಿ" ಎಂದು ತಮನ್ನಾ ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ.
ಆಗಸ್ಟ್ನಲ್ಲಿ ತಮನ್ನಾ ತಂದೆ-ತಾಯಿಗಳಿಗೆ ಕೊರೊನಾ ಸೋಂಕು ತಗುಲಿತ್ತು. ಈ ವಿಚಾರವನ್ನು ತಮನ್ನಾ ಸೋಷಿಯಲ್ ಮೀಡಿಯಾ ಮೂಲಕ ಹೇಳಿಕೊಂಡಿದ್ದರು. ಆದರೆ ಆ ಸಮಯದಲ್ಲಿ ತಮನ್ನಾಗೆ ಯಾವುದೇ ತೊಂದರೆಯಾಗಿರಲಿಲ್ಲ. ತಮನ್ನಾ ಹಾಗೂ ಕುಟುಂಬದ ಇತರ ಸದಸ್ಯರ ವರದಿ ನೆಗೆಟಿವ್ ಬಂದಿತ್ತು.
ಇನ್ನು ತಮನ್ನಾ ಕರಿಯರ್ ವಿಚಾರಕ್ಕೆ ಬರುವುದಾದರೆ ಹಿಂದಿಯ 'ಅಂಧಾದುನ್' ಚಿತ್ರದಲ್ಲಿ ಅವರು ಬ್ಯುಸಿಯಾಗಿದ್ದಾರೆ. ಇದರೊಂದಿಗೆ ನವಾಜುದ್ದೀನ್ ಸಿದ್ದಿಕಿ ಅವರೊಂದಿಗೆ 'ಬೋಲೆ ಚೂಡಿಯ' ಚಿತ್ರದಲ್ಲಿ ಕೂಡಾ ನಟಿಸುತ್ತಿದ್ದಾರೆ.