ಕನ್ನಡ ಚಿತ್ರರಂಗ ಅಲ್ಲದೇ ಭಾರತೀಯ ಚಿತ್ರರಂಗದಲ್ಲಿ ಟೈಟಲ್ನಿಂದಲೇ ಹವಾ ಸೃಷ್ಟಿಸಿರೋ ಚಿತ್ರ ಕಬ್ಜ. ಆರ್ ಚಂದ್ರು ನಿರ್ದೇಶನದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ್ ಅಭಿನಯಿಸುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾವಿದು.
ಕೆಲವು ದಿನಗಳ ಹಿಂದಷ್ಟೇ ರಿಯಲ್ ಸ್ಟಾರ್ ಜೋಡಿಯಾಗಿ ಸೌತ್ ಬ್ಯೂಟಿ ಶ್ರೇಯಾ ಸರಣ್ ಆಯ್ಕೆಯಾಗಿ ಅದ್ಧೂರಿ ಚಿತ್ರೀಕರಣದಲ್ಲಿ ಭಾಗವಹಿಸಿದರು. ಇದೀಗ ತೆಲುಗು ಚಿತ್ರರಂಗದ ಇಬ್ಬರು ಬೇಡಿಕೆಯ ನಟರು ಕಬ್ಜ ಸಿನಿಮಾ ಅಡ್ಡಕ್ಕೆ ಬಂದಿದ್ದಾರೆ.
ತೆಲುಗಿನ ಖ್ಯಾತ ನಟರಾರ ಪೊಸನಿ ಕೃಷ್ಣ ಮುರಳಿ ಮತ್ತು ಮುರಳಿ ಶರ್ಮಾ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಈ ವಿಚಾರವನ್ನು ನಿರ್ದೇಶಕ ಆರ್ ಚಂದ್ರು ಖಚಿತಪಡಿಸಿದ್ದಾರೆ.
ಈಗಾಗಲೇ ಉಪೇಂದ್ರ, ಸುದೀಪ್ ಅಲ್ಲದೇ ಐ ಮೂವಿ ಖ್ಯಾತಿಯ ಕಾಮರಾಜನ್, ನವಾಬ್ ಷಾ, ಜಗಪತಿ ಬಾಬು, ರಾಹುಲ್ ಜಗತಪ್, ಅನೂಪ್ ರೇವಣ್ಣ, ಜಾನ್ ಕೊಕ್ಕಿನ್, ರಾಹುಲ್ ದೇವ್, ನವೀನ್, ಕೋಟ ಶ್ರೀನಿವಾಸ್, ಜಯಪ್ರಕಾಶ್, ಕಾಟ್ ರಾಜು, ಸುಬ್ಬರಾಜು ಹೀಗೆ ದೊಡ್ಡ ಕಲಾವಿರ ದಂಡು ಇದೆ. ಇದೀಗ ಪೊಸನಿ ಕೃಷ್ಣ ಮುರಳಿ ಮತ್ತು ಮುರಳಿ ಶರ್ಮಾ ಚಿತ್ರತಂಡಕ್ಕೆ ಸೇರ್ಪಡೆ ಆಗಿದ್ದಾರೆ. ಈ ಮೂಲಕ ಭಾರತೀಯ ಚಿತ್ರರಂಗದ ಹೆಚ್ಚಿನ ಸ್ಟಾರ್ಗಳು ಕಬ್ಜ ಚಿತ್ರದಲ್ಲಿರೋದು ವಿಶೇಷ.
ಇದನ್ನೂ ಓದಿ: 'ಅವತಾರ ಪುರುಷ'ನಾಗಿ ಪ್ರೇಕ್ಷಕರಿಗೆ ಕಿಕ್ ಕೊಡಲು ರೆಡಿಯಾದ ವಿಕ್ಟರಿ ಹೀರೋ..
ಎಂಟಿಬಿ ನಾಗರಾಜ್ ಅರ್ಪಿಸುವ, ಶ್ರೀ ಸಿದ್ದೇಶ್ವರ ಎಂಟರ್ ಪ್ರೈಸಸ್ ಲಾಂಛನದಲ್ಲಿ ಆರ್ ಚಂದ್ರು ನಿರ್ಮಿಸುತ್ತಿರುವ ಕಬ್ಜ ಚಿತ್ರಕ್ಕೆ ಕೆಜಿಎಫ್ ಖ್ಯಾತಿಯ ರವಿ ಬಸ್ರೂರು ಸಂಗೀತ ನಿರ್ದೇಶನವಿದೆ. ಕಾರ್ಯಕಾರಿ ನಿರ್ಮಾಪಕರಾಗಿ ಮುನೀಂದ್ರ ಹಾಗೂ ಲೈನ್ ಪ್ರೊಡ್ಯೂಸರ್ ಆಗಿ ರಾಜಶೇಖರ್ ಕಾರ್ಯ ನಿರ್ವಹಿಸುತ್ತಿದ್ದಾರೆ.
ಎಜೆ ಶೆಟ್ಟಿ ಅವರ ಛಾಯಾಗ್ರಹಣ, ಮಹೇಶ್ ಅವರ ಸಂಕಲನ, ರಾಜು ಸುಂದರಂ, ಗಣೇಶ್, ಶೇಖರ್ ಅವರ ನೃತ್ಯ ನಿರ್ದೇಶನ ಹಾಗೂ ರವಿವರ್ಮ, ವಿಕ್ರಂಮೋರ್, ವಿಜಯ್ ಅವೆ ಸಾಹಸ ನಿರ್ದೇಶನವಿದೆ. ಕರ್ನಾಟಕದಲ್ಲಷ್ಟೇ ಅಲ್ಲದೇ ಇಡೀ ದೇಶಾದ್ಯಂತ ಕಬ್ಜ ಚಿತ್ರ ಸದ್ದು ಮಾಡುತ್ತಿದ್ದು, ಸದ್ಯದಲ್ಲೇ ಟೀಸರ್ ಬಿಡುಗಡೆ ಮಾಡಲು ನಿರ್ದೇಶಕ ಆರ್ ಚಂದ್ರು ಪ್ಲ್ಯಾನ್ ಮಾಡಿದ್ದಾರೆ.