ತೆಲುಗು ಹಿರಿಯ ನಟ ನಂದಮೂರಿ ಬಾಲಕೃಷ್ಣ ಅವರ ಬಲ ಭುಜಕ್ಕೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ಹೈದರಾಬಾದ್ ಕೇರ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಆರು ತಿಂಗಳಿಂದ ಬಲ ಭುಜದ ನೋವಿನಿಂದ ಬಳಲುತ್ತಿದ್ದ ಬಾಲಯ್ಯ ಅವರನ್ನು ಅಕ್ಟೋಬರ್ 31ರಂದು ಹೈದರಾಬಾದ್ನಲ್ಲಿರುವ ಬಂಜಾರಾ ಹಿಲ್ಸ್ ಕೇರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ವೈದ್ಯರು ತಿಳಿಸಿದ್ದಾರೆ.
ಬಾಲಯ್ಯ ಅವರಿಗೆ ಬಲಗೈ ಎತ್ತಲು ಸಾಧ್ಯವಾಗುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಕೇರ್ ಆಸ್ಪತ್ರೆಯ ಭುಜದ ಶಸ್ತ್ರಚಿಕಿತ್ಸಕ ಡಾ.ರಘುವೀರ್ ರೆಡ್ಡಿ ಮತ್ತು ಡಾ.ಬಿ.ಎನ್.ಪ್ರಸಾದ್ ನೇತೃತ್ವದ ತಂಡ ಸುಮಾರು ನಾಲ್ಕು ಗಂಟೆಗಳ ಕಾಲ ಬಾಲಯ್ಯ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಿತು ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.
ಇಂದು ಅವರ ಆರೋಗ್ಯ ಸ್ಥಿರವಾಗಿದ್ದರಿಂದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.