ಕೊರೊನಾದಿಂದಾಗಿ ದೇಶದಲ್ಲಿ ಸಿನಿಮಾ ಪ್ರದರ್ಶನ ಇಲ್ಲದೆ ಚಿತ್ರಮಂದಿರದ ಮಾಲೀಕರು ಹಾಗು ಚಿತ್ರಮಂದಿರಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಸಂಕಷ್ಟ ಉಂಟಾಗಿತ್ತು. ಕೆಲ ತಿಂಗಳ ಹಿಂದೆ ಸಿನಿಮಾ ಚಿತ್ರೀಕರಣಕ್ಕೆ ಅನುಮತಿ ನೀಡಿದ ಕೇಂದ್ರ ಸರ್ಕಾರ ಈಗ ಅಕ್ಟೋಬರ್ 1ರಿಂದ ಚಿತ್ರಮಂದಿರಗಳು ಓಪನ್ ಮಾಡೋದಿಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.
ನಿನ್ನೆ ಸೌತ್ ಇಂಡಿಯಾ ಫಿಲ್ಮ್ ಚೇಂಬರ್ ಹಾಗು ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಜೊತೆ ಕೇಂದ್ರ ಗೃಹ ಸಚಿವ ಅಮಿತಾ ಶಾ ಜೂಮ್ ಮೀಟಿಂಗ್ ಮಾಡಿದ್ದರು. ಇದರಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಗುಬ್ಬಿ ಜಯರಾಜ್ ಕೂಡ ಭಾಗವಹಿಸಿದ್ರು.
ಈ ಸಂದರ್ಭದಲ್ಲಿ ಆರು ತಿಂಗಳಿಂದ ಮುಚ್ಚಿರುವ ಚಿತ್ರಮಂದಿರಗಳನ್ನ ಓಪನ್ ಮಾಡೋದಿಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ ಅಂತಾ ಫಿಲ್ಮ್ ಚೇಂಬರ್ ಅಧ್ಯಕ್ಷ ಗುಬ್ಬಿ ಜಯರಾಜ್ ತಿಳಿಸಿದ್ದಾರೆ. ಕೊರೊದಿಂದ ಕನ್ನಡ ಚಿತ್ರರಂಗದಲ್ಲಿ ಎದುರಾಗಿರುವ ಸಮಸ್ಯೆಗಳ ಬಗ್ಗೆ ಸಿ ಎಂ ಯಡಿಯೂರಪ್ಪ ಅವರಿಗೆ ಮನವಿ ಕೊಡುವ ಸಂದರ್ಭದಲ್ಲಿ ಗುಬ್ಬಿ ಜಯರಾಜ್ ಹೇಳಿದ್ದಾರೆ.