ಮಂಗಳೂರು : ತುಳು ನಟ ಸುರೇಂದ್ರ ಬಂಟ್ವಾಳರನ್ನು ಚಾಕುವಿನಿಂದ ಇರಿದು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಸ್ತಿಪಡ್ಪುವಿನ ಅಪಾರ್ಟ್ಮೆಂಟ್ನಲ್ಲಿ ಸುರೇಂದ್ರರನ್ನು ಹತ್ಯೆಗೈಯ್ಯಲಾಗಿದೆ. ಸುರೇಂದ್ರ ಬಂಟ್ವಾಳ ಅವರು ಚಾಲಿಪೋಲಿಲು ತುಳು ಚಲನಚಿತ್ರದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಪಾತ್ರ ನಿರ್ವಹಿಸಿದ್ದರು.
ಘಟನೆ ನಿನ್ನೆ ರಾತ್ರಿ ನಡೆದಿದೆ ಎಂದು ಅಂದಾಜಿಸಲಾಗಿದೆ. ಇಂದು ಮಧ್ಯಾಹ್ನದವರೆಗೆ ಮನೆ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಪರಿಶೀಲಿಸಿದಾಗ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.