ETV Bharat / sitara

ಹಾಸ್ಯ ನಟ ಬಿರಾದಾರ್ ನಟನೆಯ '90 ಹೊಡಿ ಮನೀಗ್ ನಡಿ' ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ತಕರಾರು! - 90 ಹೊಡಿ ಮನೀಗ್ ನಡಿ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ತಕರಾರು

ಈ ಚಿತ್ರದ ಬಹುಭಾಗ ಉತ್ತರ ಕರ್ನಾಟದ ಭಾಗಗಳಲ್ಲೇ ಹೆಚ್ಚಾಗಿ ಚಿತ್ರೀಕರಣಗೊಂಡು, ಆ ಭಾಷಾ ಶೈಲಿಯಲ್ಲೇ ಚಿತ್ರ ಮೂಡಿ ಬಂದಿದೆ. ಅಲ್ಲಿಯ ದೇಸಿ ಸೊಗಡನ್ನೇ ಹೊತ್ತು ತಂದಿದ್ದರಿಂದ, ಸಹಜವಾಗಿಯೇ ಆ ಭಾಗದ ಜನರ ನಿರೀಕ್ಷೆ ತುಸು ಹೆಚ್ಚೇ ಜಾರಿಯಲ್ಲಿದೆ. ಅಮ್ಮ ಟಾಕೀಸ್ ಬ್ಯಾನರಿನಡಿಯಲ್ಲಿ ನಿರ್ಮಾಪಕಿ ರತ್ನಮಾಲಾ ಬಾದರದಿನ್ನಿ ನಿರ್ಮಾಣ ಮಾಡಿದ್ದಾರೆ. ಮೇ ತಿಂಗಳಲ್ಲಿ ಈ‌ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ಸಿದ್ದತೆ ನಡೆಸಿದೆ..

ನಟ ವೈಜನಾಥ್ ಬಿರಾದಾರ್
ನಟ ವೈಜನಾಥ್ ಬಿರಾದಾರ್
author img

By

Published : Mar 30, 2022, 7:02 PM IST

ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಹಾಸ್ಯದ ಮೂಲಕ ಕನ್ನಡಿಗರ ಮನಗೆದ್ದಿರುವವರು ಹಾಸ್ಯ ನಟ ವೈಜನಾಥ್ ಬಿರಾದಾರ್. ಕಾಮಿಡಿ ಪಾತ್ರಗಳಿಂದ ಹೆಚ್ಚು ಪ್ರಸಿದ್ಧಿ ಹೊಂದಿರುವ ಬಿರಾದಾರ್, ಪೂರ್ಣ ಪ್ರಮಾಣದ ನಾಯಕನಾಗಿ ಅಭಿನಯಿಸುತ್ತಿರುವ ಚಿತ್ರ '90 ಹೊಡಿ ಮನೀಗ್ ನಡಿ'. ಇದೀಗ ಈ ಸಿನಿಮಾದ ಟೈಟಲ್ ಸೆನ್ಸಾರ್ ಮಂಡಳಿಯ ಕೆಂಗಣ್ಣಿಗೆ ಗುರಿಯಾಗಿದೆ.

ನಟ ವೈಜನಾಥ್ ಬಿರಾದಾರ್
ನಟ ವೈಜನಾಥ್ ಬಿರಾದಾರ್

90 ಹೊಡಿ ಮನೀಗ್ ನಡಿ ಎಂದರೆ, ಜನರನ್ನು ನೇರವಾಗಿ ಕುಡಿತಕ್ಕೆ ಪ್ರಚೋದಿಸಿದಂತಾಗುತ್ತದೆ ಎಂಬುದು ಮಂಡಳಿಯವರ ಆಕ್ರೋಶವಾಗಿದೆ. ಹೀಗಾಗಿ, ಈ ಚಿತ್ರದ ಶೀರ್ಷಿಕೆ ಬದಲಾಯಿಸಲು ಸೂಚನೆ ನೀಡಿದೆ. ಈ ಬದಲಾವಣೆಗೆ ಒಲ್ಲದ ಮನಸ್ಸಿನಿಂದಲೇ ಒಪ್ಪಿಕೊಂಡ ಸಿನಿ ತಂಡ, ತಮ್ಮ ಶೀರ್ಷಿಕೆಯನ್ನ 90 ಬಿಡಿ ಮನೀಗ್ ನಡಿ ಎಂದು ಬದಲಾಯಿಸಿಕೊಂಡಿದೆ.

ನಟ ವೈಜನಾಥ್ ಬಿರಾದಾರ್
ನಟ ವೈಜನಾಥ್ ಬಿರಾದಾರ್

ಕಾಮಿಡಿ, ಕ್ರೈಮ್ ಥ್ರಿಲ್ಲರ್ ಕಥೆ ಆಧರಿಸಿದ ಈ ಚಿತ್ರಕ್ಕೆ, ಉಮೇಶ್ ಬಾದರದಿನ್ನಿ ಮತ್ತು ನಾಗರಾಜ್ ಅರೆಹೊಳೆ ಜಂಟಿಯಾಗಿ ನಿರ್ದೇಶನ ಮಾಡಿದ್ದಾರೆ‌. ವೈಜನಾಥ್ ಬಿರಾದಾರ್ ಜೊತೆ ನೀತಾ ಮೈಂದರ್ಗಿ, ಪ್ರೀತು ಪೂಜಾ, ಹಿರಿಯ ನಟ ಕರಿಸುಬ್ಬು ಮುಖ್ಯ ಭೂಮಿಕೆಯಲ್ಲಿದ್ದಾರೆ. ಇವರೊಟ್ಟಿಗೆ ಡೇರಿಂಗ್ ಸ್ಟಾರ್ ಧರ್ಮ, ಪ್ರಶಾಂತ್ ಸಿದ್ದಿ, ಅಭಯ್ ವೀರ್, ಆರ್ ಡಿ ಬಾಬು, ವಿವೇಕ್ ಜಂಬಗಿ, ರುದ್ರಗೌಡ ಬಾದರದಿನ್ನಿ, ಮುರುಳಿ ಹೊಸಕೋಟೆ, ರಾಜೇಂದ್ರ ಗುಗ್ವಾಡ, ರವಿದೀಪ್, ಸಂತು ಸೊಕನಾದಗಿ, ಎಲ್ಐಸಿ ಲೋಕೇಶ್ ತೆರೆ ಹಂಚಿಕೊಂಡಿದ್ದಾರೆ. ವಿಶೇಷವಾಗಿ ಅಂತಾರಾಷ್ಟ್ರೀಯ ಪ್ರಶಸ್ತಿ ವಿಜೇತ ನಟ ವೈಜನಾಥ ಬಿರಾದಾರ್ ಅವರ ಅಭಿನಯದ 500ನೇ ಚಿತ್ರ ಆಗಿರುವ ಕಾರಣಕ್ಕೆ ಈ ಸಿನಿಮಾ ಸದ್ದು ಮಾಡುತ್ತಿದೆ.

ಉಳಿದಂತೆ ಡಾ. ನಾಗೇಂದ್ರ ಪ್ರಸಾದ್ ಮತ್ತು ಶಿವು ಬೇರಗಿಯವರ ಸಾಹಿತ್ಯಕ್ಕೆ ಕಿರಣ್ ಶಂಕರ್ ಸಂಗೀತ ನೀಡಿದ್ದು, ವೀರ್ ಸಮರ್ಥ್ ಹಿನ್ನೆಲೆ ಸಂಗೀತದಲ್ಲಿ ಸಾಥ್ ನೀಡಿದ್ದಾರೆ. ಕೃಷ್ಣ ನಾಯ್ಕರ್ ಛಾಯಾಗ್ರಹಣ, ಯುಡಿವಿ ವೆಂಕಟೇಶ್ ಸಂಕಲನ, ರಾಕಿ ರಮೇಶ್ ಸಾಹಸ, ಚುಟು-ಚುಟು ಖ್ಯಾತಿಯ ಭೂಷಣ್ ಕೊರಿಯೋಗ್ರಫಿ ಈ ಚಿತ್ರಕ್ಕಿದೆ.

ಈ ಚಿತ್ರದ ಬಹುಭಾಗ ಉತ್ತರ ಕರ್ನಾಟದ ಭಾಗಗಳಲ್ಲೇ ಹೆಚ್ಚಾಗಿ ಚಿತ್ರೀಕರಣಗೊಂಡು, ಆ ಭಾಷಾ ಶೈಲಿಯಲ್ಲೇ ಚಿತ್ರ ಮೂಡಿ ಬಂದಿದೆ. ಅಲ್ಲಿಯ ದೇಸಿ ಸೊಗಡನ್ನೇ ಹೊತ್ತು ತಂದಿದ್ದರಿಂದ, ಸಹಜವಾಗಿಯೇ ಆ ಭಾಗದ ಜನರ ನಿರೀಕ್ಷೆ ತುಸು ಹೆಚ್ಚೇ ಜಾರಿಯಲ್ಲಿದೆ. ಅಮ್ಮ ಟಾಕೀಸ್ ಬ್ಯಾನರಿನಡಿಯಲ್ಲಿ ನಿರ್ಮಾಪಕಿ ರತ್ನಮಾಲಾ ಬಾದರದಿನ್ನಿ ನಿರ್ಮಾಣ ಮಾಡಿದ್ದಾರೆ. ಮೇ ತಿಂಗಳಲ್ಲಿ ಈ‌ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ಸಿದ್ದತೆ ನಡೆಸಿದೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.