ಬೆಂಗಳೂರು: ಕನ್ನಡ ಚಿತ್ರರಂಗದ ಮತ್ತೊಂದು ಹಿರಿಯ ಕೊಂಡಿ ಇಂದು ಕಳಚಿದೆ. ಸ್ಯಾಂಡಲ್ವುಡ್ನಲ್ಲಿ ಶಿವರಾಮಣ್ಣ ಎಂದು ಗುರುತಿಸಿಕೊಂಡಿದ್ದ ನಟ ಶಿವರಾಮ್(83) ಇಂದು ಕೊನೆಯುಸಿರೆಳೆದಿದ್ದಾರೆ. ಇವರ ನಿದಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ.
ಕಳೆದ ಮೂರು ದಿನಗಳ ಹಿಂದೆ ಪೂಜೆ ಮಾಡುತ್ತಿದ್ದ ವೇಳೆ ತಲೆ ತಿರುಗಿ ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಇವರನ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿತ್ತು. ಆದರೆ ಇಂದು ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿತ್ತು. ಇದರ ಬೆನ್ನಲ್ಲೇ ಇಹಲೋಕ ತ್ಯಜಿಸಿದ್ದಾರೆ.
ಇದನ್ನೂ ಓದಿರಿ: ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಮ್ ಇನ್ನಿಲ್ಲ
ಹಿರಿಯ ನಟನ ನಿಧನಕ್ಕೆ ಕಂಬನಿ ಮಿಡಿದಿರುವ ಮುಖ್ಯಮಂತ್ರಿಗಳು ಟ್ವೀಟ್ ಮಾಡಿದ್ದು, ಕನ್ನಡ ಚಿತ್ರರಂಗದ ಹೆಸರಾಂತ ಹಿರಿಯ ಕಲಾವಿದ ಶಿವರಾಮ್ ಅವರ ನಿಧನ ತುಂಬಾ ದುಃಖದ ವಿಷಯ. ಶಿವರಾಮ್ ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ಕರುಣಿಸಲೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
-
ಕನ್ನಡ ಚಿತ್ರರಂಗದ ಹೆಸರಾಂತ ಹಿರಿಯ ಕಲಾವಿದ ಶಿವರಾಂ ಅವರ ನಿಧನ ತುಂಬಾ ದುಃಖದ ವಿಷಯ. ಶಿವರಾಂ ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ಕರುಣಿಸಲೆಂದು ಪ್ರಾರ್ಥಿಸುತ್ತೇನೆ. pic.twitter.com/U5X3ccsNoD
— Basavaraj S Bommai (@BSBommai) December 4, 2021 " class="align-text-top noRightClick twitterSection" data="
">ಕನ್ನಡ ಚಿತ್ರರಂಗದ ಹೆಸರಾಂತ ಹಿರಿಯ ಕಲಾವಿದ ಶಿವರಾಂ ಅವರ ನಿಧನ ತುಂಬಾ ದುಃಖದ ವಿಷಯ. ಶಿವರಾಂ ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ಕರುಣಿಸಲೆಂದು ಪ್ರಾರ್ಥಿಸುತ್ತೇನೆ. pic.twitter.com/U5X3ccsNoD
— Basavaraj S Bommai (@BSBommai) December 4, 2021ಕನ್ನಡ ಚಿತ್ರರಂಗದ ಹೆಸರಾಂತ ಹಿರಿಯ ಕಲಾವಿದ ಶಿವರಾಂ ಅವರ ನಿಧನ ತುಂಬಾ ದುಃಖದ ವಿಷಯ. ಶಿವರಾಂ ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ಕರುಣಿಸಲೆಂದು ಪ್ರಾರ್ಥಿಸುತ್ತೇನೆ. pic.twitter.com/U5X3ccsNoD
— Basavaraj S Bommai (@BSBommai) December 4, 2021
ಸಂಸದ ಬಿವೈ ರಾಘವೇಂದ್ರ ಸಂತಾಪ
ಹಿರಿಯ ನಟನ ನಿಧನಕ್ಕೆ ಸಂಸದ ಬಿವೈ ರಾಘವೇಂದ್ರ ಕೂಡ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದು, ಕನ್ನಡ ಚಿತ್ರರಂಗದ ಹಿರಿಯ ನಟ ಎಸ್. ಶಿವರಾಂ ಅವರ ಅಗಲಿಕೆಯ ಸುದ್ದಿ ತಿಳಿದು ಅತೀವ ದುಃಖವಾಯಿತು. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ಕರುಣಿಸಲೆಂದು ಪ್ರಾರ್ಥಿಸುತ್ತೇನೆ.
-
ಕನ್ನಡ ಚಿತ್ರರಂಗದ ಹಿರಿಯ ನಟ ಎಸ್. ಶಿವರಾಂ ಅವರ ಅಗಲಿಕೆಯ ಸುದ್ದಿ ತಿಳಿದು ಅತೀವ ದುಃಖವಾಯಿತು.
— B Y Raghavendra (@BYRBJP) December 4, 2021 " class="align-text-top noRightClick twitterSection" data="
ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ಕರುಣಿಸಲೆಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿ. 🙏 pic.twitter.com/GaQh14rLMl
">ಕನ್ನಡ ಚಿತ್ರರಂಗದ ಹಿರಿಯ ನಟ ಎಸ್. ಶಿವರಾಂ ಅವರ ಅಗಲಿಕೆಯ ಸುದ್ದಿ ತಿಳಿದು ಅತೀವ ದುಃಖವಾಯಿತು.
— B Y Raghavendra (@BYRBJP) December 4, 2021
ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ಕರುಣಿಸಲೆಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿ. 🙏 pic.twitter.com/GaQh14rLMlಕನ್ನಡ ಚಿತ್ರರಂಗದ ಹಿರಿಯ ನಟ ಎಸ್. ಶಿವರಾಂ ಅವರ ಅಗಲಿಕೆಯ ಸುದ್ದಿ ತಿಳಿದು ಅತೀವ ದುಃಖವಾಯಿತು.
— B Y Raghavendra (@BYRBJP) December 4, 2021
ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ಕರುಣಿಸಲೆಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿ. 🙏 pic.twitter.com/GaQh14rLMl
ಸಿನಿ ಚಿತ್ರರಂಗದಲ್ಲಿ ಪ್ರಮುಖವಾಗಿ ವಿಷ್ಣುವರ್ಧನ್, ಡಾ. ರಾಜ್ ಕುಮಾರ್, ಅಂಬರೀಶ್ ಸೇರಿದಂತೆ ಎಲ್ಲ ದಿಗ್ಗಜರ ಜೊತೆ ನಟನೆ ಮಾಡಿರುವ ಇವರು, ಇತ್ತೀಚಿನ ಕಲಾವಿದರ ಜೊತೆ ಸಹ ಬಣ್ಣ ಹಚ್ಚಿದ್ದರು.
ಕಂಬನಿ ಮಿಡಿದ ಸಚಿವ ಗೋವಿಂದ್ ಕಾರಜೋಳ
ಶಿವರಾಮ್ ಕನ್ನಡ ಚಿತ್ರರಂಗದ ದಂತಕಥೆಯಾಗಿದ್ದರು. ಕನ್ನಡ ಚಲನಚಿತ್ರರಂಗದ ಹಿರಿಯ ನಟ ಶ್ರೀ ಶಿವರಾಮ್ ಅವರ ನಿಧನದಿಂದ ಚಂದನವನ ಮತ್ತೊಬ್ಬ ಹಿರಿಯ ಕಲಾವಿದನನ್ನು ಕಳೆದುಕೊಂಡು ಅನಾಥವಾಗಿದೆ. ಕನ್ನಡ ಚಲನಚಿತ್ರರಂಗದ ಹಿರಿಯಣ್ಣನಂತಿದ್ದ ಶಿವರಾಮ್ ಅವರು ಪುಟ್ಟಣ್ಣ ಕಣಗಾಲ್ ಅವರ ನಿರ್ದೇಶನದಿಂದ ಹಿಡಿದು ಇತ್ತೀಚಿನ ತಲೆಮಾರಿನ ನಿರ್ದೇಶಕರ ಚಿತ್ರಗಳಲ್ಲಿಯೂ ನಟಿಸಿ ಕನ್ನಡ ಚಿತ್ರರಂಗದ ದಂತಕಥೆಯಾಗಿದ್ದರು ಎಂದು ಸಚಿವ ಗೋವಿಂದ್ ಕಾರಜೋಳಬ ಹೇಳಿದ್ದಾರೆ.
ಶರಪಂಜರ, ನಾಗರಹಾವು ಮೊದಲಾದ ಚಿತ್ರಗಳಲ್ಲಿ ಅಮೋಘವಾಗಿ ನಟಿಸಿ ತಮ್ಮ ನಟನಾ ಕೌಶಲ್ಯ ತೋರಿಸಿದ್ದ ಶಿವರಾಂ ಅವರು ತಮ್ಮ ಇಳಿವಯಸ್ಸಿನಲ್ಲೂ ಪಾದರಸದಂತೆ ಕೆಲಸ ಮಾಡುತ್ತಿದ್ದರು. ಇವರ ನಿಧನದಿಂದ ನನ್ನ ಮನಸ್ಸಿಗೆ ತುಂಬಾ ದುಃಖವಾಗಿದೆ. ಇವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಮತ್ತು ಅವರ ಕುಟುಂಬದ ಸದಸ್ಯರಿಗೆ, ಅಪಾರ ಅಭಿಮಾನಿಗಳಿಗೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲೆಂದು ಪ್ರಾರ್ಥಿಸಿದ್ದಾರೆ.
ಇತ್ತ ಸಚಿವ ಅಶ್ವತ್ಥ್ ನಾರಾಯಣ್ ಟ್ವೀಟ್ ಮಾಡಿ, ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಮ್ ಅವರ ಅಗಲಿಕೆಯ ಸುದ್ದಿ ನೋವು ಹಾಗೂ ಆಘಾತ ತಂದಿದೆ. ದಶಕಗಳಿಂದ ಕನ್ನಡ ಕಲಾಸೇವೆಯಲ್ಲಿ ತೊಡಗಿಸಿಕೊಂಡು, ಚಿತ್ರರಂಗದ ಹೊಸ ತಲೆಮಾರಿನ ಕಲಾವಿದರಿಗೆ ಮಾರ್ಗದರ್ಶಕರಾಗಿದ್ದ ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬ-ಹಿತೈಷಿ ವರ್ಗಕ್ಕೆ ಈ ನೋವು ಭರಿಸುವ ಶಕ್ತಿ ದೊರಕಲಿ ಎಂದು ಕಂಬನಿ ಮಿಡಿದಿದ್ದಾರೆ.
ಕನ್ನಡ ಹಾಗೂ ಸಂಸ್ಕೃತಿ ಸಚಿವ ಕಂಬನಿ ಮಿಡಿದು, ಕನ್ನಡ ಚಿತ್ರರಂಗದ ಹಿರಿಯ ನಟರಾದ ಶಿವರಾಂ ಅವರ ನಿಧನದ ಸುದ್ದಿ ಕೇಳಿ ಅತೀವ ದುಃಖವಾಯಿತು. ಅವರ ಅಗಲಿಕೆಯಿಂದ ಕನ್ನಡ ಸಾಂಸ್ಕೃತಿಕ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಅವರಿಗೆ ಸದ್ಗತಿ ಸಿಗಲೆಂದು ಹಾಗೂ ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲೆಂದು ಪ್ರಾರ್ಥಿಸಿದ್ದಾರೆ.
ಕಟೀಲ್, ಬಿಎಸ್ ವೈ ಕಂಬನಿ
-
ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಶಿವರಾಂ ಅವರು ನಿಧನರಾದ ಸುದ್ದಿ ಅತೀವ ನೋವನ್ನುಂಟು ಮಾಡಿದೆ. ಕನ್ನಡದ ದಿಗ್ಗಜ ಕಲಾವಿದರೊಂದಿಗೆ ನಟಿಸಿ ಸೈ ಎನಿಸಿಕೊಂಡಿದ್ದ ಅವರು, ನಿರ್ದೇಶಕ, ನಿರ್ಮಾಪಕರಾಗಿಯೂ ಕೆಲಸ ಮಾಡಿದ್ದರು. ಕಿರುತೆರೆಯ ಹಲವು ಧಾರಾವಾಹಿಗಳಲ್ಲಿಯೂ ಅಭಿನಯಿಸಿದ್ದರು. (1/2) pic.twitter.com/RgcCtQMovV
— B.S. Yediyurappa (@BSYBJP) December 4, 2021 " class="align-text-top noRightClick twitterSection" data="
">ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಶಿವರಾಂ ಅವರು ನಿಧನರಾದ ಸುದ್ದಿ ಅತೀವ ನೋವನ್ನುಂಟು ಮಾಡಿದೆ. ಕನ್ನಡದ ದಿಗ್ಗಜ ಕಲಾವಿದರೊಂದಿಗೆ ನಟಿಸಿ ಸೈ ಎನಿಸಿಕೊಂಡಿದ್ದ ಅವರು, ನಿರ್ದೇಶಕ, ನಿರ್ಮಾಪಕರಾಗಿಯೂ ಕೆಲಸ ಮಾಡಿದ್ದರು. ಕಿರುತೆರೆಯ ಹಲವು ಧಾರಾವಾಹಿಗಳಲ್ಲಿಯೂ ಅಭಿನಯಿಸಿದ್ದರು. (1/2) pic.twitter.com/RgcCtQMovV
— B.S. Yediyurappa (@BSYBJP) December 4, 2021ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಶಿವರಾಂ ಅವರು ನಿಧನರಾದ ಸುದ್ದಿ ಅತೀವ ನೋವನ್ನುಂಟು ಮಾಡಿದೆ. ಕನ್ನಡದ ದಿಗ್ಗಜ ಕಲಾವಿದರೊಂದಿಗೆ ನಟಿಸಿ ಸೈ ಎನಿಸಿಕೊಂಡಿದ್ದ ಅವರು, ನಿರ್ದೇಶಕ, ನಿರ್ಮಾಪಕರಾಗಿಯೂ ಕೆಲಸ ಮಾಡಿದ್ದರು. ಕಿರುತೆರೆಯ ಹಲವು ಧಾರಾವಾಹಿಗಳಲ್ಲಿಯೂ ಅಭಿನಯಿಸಿದ್ದರು. (1/2) pic.twitter.com/RgcCtQMovV
— B.S. Yediyurappa (@BSYBJP) December 4, 2021
ಕನ್ನಡ ಚಿತ್ರರಂಗದ ಖ್ಯಾತ ಪೋಷಕ ನಟರಾಗಿದ್ದ ಶಿವರಾಂ ಅವರು ಇಹಲೋಕ ತ್ಯಜಿಸಿದ್ದಾರೆ. ಅವರ ಆತ್ಮಕ್ಕೆ ಸದ್ಗತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ, ಹಿತೈಷಿಗಳಿಗೆ ದು:ಖ ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಾರ್ಥಿಸಿದ್ದಾರೆ.
ಇದೇ ವೇಳೆ ಕಂಬನಿ ಮಿಡಿದ ಮಾಜಿ ಸಿಎಂ ಯಡಿಯೂರಪ್ಪ, ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಶಿವರಾಂ ಅವರು ನಿಧನರಾದ ಸುದ್ದಿ ಅತೀವ ನೋವನ್ನುಂಟು ಮಾಡಿದೆ. ಕನ್ನಡದ ದಿಗ್ಗಜ ಕಲಾವಿದರೊಂದಿಗೆ ನಟಿಸಿ ಸೈ ಎನಿಸಿಕೊಂಡಿದ್ದ ಅವರು, ನಿರ್ದೇಶಕ, ನಿರ್ಮಾಪಕರಾಗಿಯೂ ಕೆಲಸ ಮಾಡಿದ್ದರು. ಕಿರುತೆರೆಯ ಹಲವು ಧಾರಾವಾಹಿಗಳಲ್ಲಿಯೂ ಅಭಿನಯಿಸಿದ್ದರು ಎಂದು ಸ್ಮರಿಸಿದ್ದಾರೆ.
ಅವರ ನಿಧನದಿಂದ ನಾಡು ಹಿರಿಯ ಕಲಾವಿದರನ್ನು ಕಳೆದುಕೊಂಡಂತಾಗಿದೆ. ಅನೇಕ ಸಂದರ್ಭಗಳಲ್ಲಿ ಅವರನ್ನು ಭೇಟಿ ಮಾಡಿದ್ದು, ಅವರು ಇಂದು ನಮ್ಮೊಂದಿಗೆ ಇಲ್ಲ ಎನ್ನುವುದು ಅತೀವ ನೋವನ್ನು ತಂದಿದೆ. ಅವರ ಆತ್ಮಕ್ಕೆ ಸದ್ಗತಿ ಪ್ರಾರ್ಥಿಸುತ್ತಾ, ಕುಟುಂಬ, ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಕೋರಿದ್ದಾರೆ.