ETV Bharat / sitara

ಮುಂಬೈನ ರೆಸ್ಟೋರೆಂಟ್​ನಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್ ದೇವರಕೊಂಡ- ರಶ್ಮಿಕಾ ಮಂದಣ್ಣ - ರೆಸ್ಟೋರೆಂಟ್​ನಲ್ಲಿ ವಿಜಯ್ ದೇವರಕೊಂಡ ರಶ್ಮಿಕಾ ಮಂದಣ್ಣ

ಮುಂಬೈನ ಬಾಂದ್ರಾದಲ್ಲಿರುವ ರೆಸ್ಟೋರೆಂಟ್​ನಲ್ಲಿ ಭೋಜನ ಸವಿದು ಹೊರ ಬರುತ್ತಿರುವ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್​ ವೈರಲ್​ ಆಗಿದೆ.

mumbai
ವಿಜಯ್ ದೇವರಕೊಂಡ - ರಶ್ಮಿಕಾ ಮಂದಣ್ಣ
author img

By

Published : Dec 20, 2021, 3:18 PM IST

ಮುಂಬೈ (ಮಹಾರಾಷ್ಟ್ರ): 'ಗೀತ ಗೋವಿಂದಂ' ಮತ್ತು 'ಡಿಯರ್ ಕಾಮ್ರೇಡ್' ಸಿನಿಮಾಗಳಲ್ಲಿ ತೆರೆ ಹಂಚಿಕೊಂಡಿದ್ದ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಜೋಡಿ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ಬ್ಯಾಕ್​ ಟು ಬ್ಯಾಕ್​​ ಸಿನಿಮಾಗಳನ್ನು ಮಾಡುತ್ತಾ ಬ್ಯುಸಿಯಾಗಿರುವ ಇವರು ಮುಂಬೈನ ರೆಸ್ಟೋರೆಂಟ್​ವೊಂದರಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.

mumbai
ವಿಜಯ್ ದೇವರಕೊಂಡ - ರಶ್ಮಿಕಾ ಮಂದಣ್ಣ

ಮುಂಬೈನ ಬಾಂದ್ರಾದಲ್ಲಿರುವ ರೆಸ್ಟೋರೆಂಟ್​ನಲ್ಲಿ ಭೋಜನ ಸವಿದು ಹೊರಬರುತ್ತಿರುವ ಇವರು ಪಾಪರಾಜಿಗಳ ಕ್ಯಾಮೆರಾದಲ್ಲಿ ಸೆರೆಯಾಗಿದ್ದಾರೆ. ವಿಜಯ್ ದೇವರಕೊಂಡ ಟೈಗರ್ ಪ್ರಿಂಟ್ ಟಿ-ಶರ್ಟ್ ಧರಿಸಿದ್ದರೆ, ಕಪ್ಪು ಬಟ್ಟೆಯಲ್ಲಿ ರಶ್ಮಿಕಾ ಸಖತ್​ ಆಗಿ ಕಾಣುತ್ತಿದ್ದರು. ಈ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

ಇದನ್ನೂ ಓದಿ: ಕನ್ನಡ ಮರೆತರಾ ನಟಿ ರಶ್ಮಿಕಾ ಮಂದಣ್ಣ?

ಇವರಿಬ್ಬರು ಪ್ರೀತಿಸುತ್ತಿದ್ದಾರೆ ಎಂಬ ವದಂತಿ ಹರಡುತ್ತಿದ್ದರೂ, ನಾವಿಬ್ಬರು ಒಳ್ಳೆಯ ಸ್ನೇಹಿತರು ಮಾತ್ರ ಎಂದು ವಿಜಯ್ - ರಶ್ಮಿಕಾ ಹೇಳಿಕೊಳ್ಳುತ್ತಾ ಬಂದಿದ್ದಾರೆ. ಆದರೆ ನಿಜ ಜೀವನದಲ್ಲೂ ಇವರಿಬ್ಬರನ್ನು ದಂಪತಿಯಾಗಬೇಕೆಂಬುದು ಅಭಿಮಾನಿಗಳ ಆಸೆಯಾಗಿದೆ.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.