ಬೆಂಗಳೂರು: ಲವ್ ಯೂ ರಚ್ಚು ಸಿನಿಮಾದ ಚಿತ್ರೀಕರಣ ವೇಳೆ ನಡೆದ ವಿದ್ಯುತ್ ಅವಘಡದಲ್ಲಿ ಮೃತ ಪಟ್ಟಿದ್ದ ಫೈಟರ್ ವಿವೇಕ್ ಅಂತ್ಯ ಸಂಸ್ಕಾರವನ್ನು ಚಾಮರಾಜಪೇಟೆಯ ಹಿಂದೂ ರುದ್ರಭೂಮಿಯಲ್ಲಿ ನಡೆಸಲಾಯಿತು.
ನಟ ಅಜಯ್ ರಾವ್ ರಾಜರಾಜೇಶ್ವರಿ ನಗರದಲ್ಲಿರೋ ವಿವೇಕ್ ಮನೆಗೆ ತೆರಳಿ ಅಂತಿಮ ದರ್ಶನ ಪಡೆದರು. ಕುಟುಂಬ ಹಾಗೂ ಸಂಬಂಧಿಕರ ವರ್ಗದ ಉಪಸ್ಥಿತಿಯಲ್ಲಿ ಚಾಮರಾಜಪೇಟೆಯಲ್ಲಿ ಹಿಂದೂ ಸಂಪ್ರದಾಯದಲ್ಲಿ ವಿವೇಕ್ ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ಘಟನೆ ವಿವರ
ಜಿಲ್ಲೆಯ ಬಿಡದಿಯ ಜೋಗಿನದೊಡ್ಡಿ ಬಳಿ 'ಲವ್ ಯೂ ರಚ್ಚು' ಸಿನಿಮಾ ಶೂಟಿಂಗ್ ವೇಳೆ ವಿದ್ಯುತ್ ಅವಘಡ ಸಂಭವಿಸಿ ತಮಿಳುನಾಡು ಮೂಲದ ಫೈಟರ್ ವಿವೇಕ್ (28) ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಶಂಕರ್ ರಾಜ್, ಸಾಹಸ ನಿರ್ದೇಶಕ ವಿನೋದ್ ಕುಮಾರ್ ಹಾಗೂ ಕ್ರೇನ್ ಆಪರೇಟರ್ಗೆ, ರಾಮನಗರ ಹೆಚ್ಚುವರಿ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಈ ಎಲ್ಲ ಬೆಳವಣಿಗೆ ಬಳಿಕ ನಟ ಅಜಯ್ ರಾವ್, ವಿವೇಕ್ ಕುಟುಂಬಕ್ಕೆ ಪರಿಹಾರ ನೀಡುವುದಾಗಿ ಹೇಳಿದ್ದಾರೆ.