ಪುನೀತ್ ರಾಜ್‌ಕುಮಾರ್ ಒಡೆತನದ ಪಿಆರ್ಕೆ ಸಿನಿಮಾ ನಿರ್ಮಾಣ ಸಂಸ್ಥೆ ನಿರ್ಮಿಸುತ್ತಿರುವ ಮಾಯಾ ಬಜಾರ್ ಸಿನಿಮಾ ರಿಲೀಸ್ಗೂ ಮೊದಲೇ ಸದ್ದು ಮಾಡುತ್ತಿದೆ. ಈ ಚಿತ್ರದಲ್ಲಿ ಪುನೀತ್‌ರಾಜ್ ಕುಮಾರ್ ಕೂಡ ಒಂದು ಹಾಡಿಗೆ ಹೆಜ್ಜೆ ಹಾಕಿರೋದು ವಿಶೇಷ.
- View this post on Instagram
Bookings opens now - link in bio 👍 Thank you for your wishes @thenameisyash #Mayabazar2016 #Feb28
">
ಮಾಯಾ ಬಜಾರ್ ಸಿನಿಮಾ ಇದೇ 28ಕ್ಕೆ ರಿಲೀಸ್ ಆಗುತ್ತಿದೆ. ರಾಕಿಂಗ್ ಸ್ಟಾರ್ ಯಶ್ ಮಾಯಾ ಬಜಾರ್ ಚಿತ್ರಕ್ಕೆ ಮತ್ತು ಪುನೀತ್ ರಾಜ್ಕುಮಾರ್ಗೆ ಆಲ್ ದಿ ಬೆಸ್ಟ್ ಹೇಳಿದ್ದಾರೆ. ಸಿನಿಮಾವನ್ನು ನೀವೆಲ್ಲರೂ ನೋಡಿ ಎಂದು ಅಭಿಮಾನಿಗಳಲ್ಲಿ ವಿನಂತಿಸಿಕೊಂಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಯಶ್, ನಮ್ಮ ಪ್ರೀತಿಯ ಪುನೀತ್ ರಾಜ್‌ಕುಮಾರ್ ಅವರ ಪಿಆರ್ಕೆ ಬ್ಯಾನರ್ನಡಿ ಮಾಯಾಬಜಾರ್ ಸಿನಿಮಾ ಬರುತ್ತಿದೆ. ಅವರು ಅಷ್ಟು ದೊಡ್ಡ ಸ್ಟಾರ್ ಆಗಿದ್ದು ಬೇರೆ ಬೇರೆ ಕಲಾವಿದರಿಗೆ ಪ್ರೋತ್ಸಾಹ ಕೊಡುತ್ತಿರುವುದು ನನಗೆ ಖುಷಿಯಾಗಿದೆ ಎಂದಿದ್ದಾರೆ.