ETV Bharat / sitara

ಪುನೀತ್​​, ಶಿವರಾಂ ನೆನೆದು ಭಾವುಕರಾದ ನಿಖಿಲ್‌ ಕುಮಾರಸ್ವಾಮಿ

'ರೈಡರ್' ಚಿತ್ರದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ನಟ ನಿಖಿಲ್‌ ಕುಮಾರಸ್ವಾಮಿ, ಪುನೀತ್ ರಾಜಕುಮಾರ್ ಹಾಗು ಹಿರಿಯ ನಟ ಶಿವರಾಂ ಅವರನ್ನು ನೆನೆದು ಭಾವುಕರಾದರು.

Ryder film press meet
'ರೈಡರ್' ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಟ ನಿಖಿಲ್‌ ಕುಮಾರಸ್ವಾಮಿ
author img

By

Published : Dec 9, 2021, 8:20 AM IST

'ರೈಡರ್' ಇದು ನಟ ನಿಖಿಲ್ ಕುಮಾರಸ್ವಾಮಿ ಅಭಿನಯದ 4ನೇ ಸಿನಿಮಾ. ಈ ಸಿನಿಮಾದಲ್ಲಿ ಯುವನಟ ಬಾಸ್ಕೆಟ್ ಬಾಲ್ ಆಟಗಾರನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ನಿನ್ನೆ (ಬುಧವಾರ) ಚಿತ್ರದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ನಿಖಿಲ್‌ ಕುಮಾರಸ್ವಾಮಿ, ಕಲಾವಿದರ ಸಂಘಕ್ಕೆ ಮೊದಲ ಬಾರಿಗೆ ಅಂಬರೀಶ್ ಅವರೊಡನೆ ಬಂದಿದ್ದನ್ನು ನೆನಪಿಸಿಕೊಂಡರು.

'ಸೀತಾರಾಮ ಕಲ್ಯಾಣ ಚಿತ್ರದ ಚಿತ್ರೀಕರಣ ನಡೆಯಬೇಕಾದಾಗ ನಿರ್ದೇಶಕ ವಿಜಯ್ ಕುಮಾರ್ ಕೊಂಡ ರೈಡರ್ ಚಿತ್ರದ ಕಥೆ ಹೇಳಿದರು. ನಂತರ ಸುನೀಲ್ ಹಾಗು ಲಹರಿ ಸಂಸ್ಥೆ ಮೂಲಕ ಈ ಚಿತ್ರದ ನಿರ್ಮಾಣ ಆರಂಭವಾಯಿತು. ಅರ್ಜುನ್ ಜನ್ಯ ಅವರ ಸಂಗೀತದಲ್ಲಿ ಮೂಡಿ ಬಂದಿರುವ ಈ ಚಿತ್ರದ ಹಾಡುಗಳು ಹಿಟ್ ಆಗಿರುವುದು ಸಂತೋಷ ತಂದಿದೆ. ಡಿ.24ರಂದು ನಮ್ಮ ಚಿತ್ರ ತೆರೆಗೆ ಬರಲಿದೆ. ನಿಮ್ಮೆಲ್ಲರ ಬೆಂಬಲವಿರಲಿ' ಎಂದು ನಿಖಿಲ್ ಮನವಿ ಮಾಡಿದರು.

'ರೈಡರ್' ಚಿತ್ರ ತಂಡ
'ರೈಡರ್' ಚಿತ್ರ ತಂಡ

ಸಿನಿಮಾದಲ್ಲಿ ರಾಜೇಶ್ ನಟರಂಗ, ಗರುಡ ರಾಮ್, ಚಿಕ್ಕಣ್ಣ, ಶಿವರಾಜ್ ಕೆ.ಆರ್.ಪೇಟೆ, ಮಂಜು ಪಾವಗಡ, ಗಿರೀಶ್, ಅರ್ಜುನ್ ಗೌಡ, ಸಂತು, ಚಿಲ್ಲರ್ ಮಂಜು, ಬೇಬಿ ಪ್ರಾಣ್ಯ ಸೇರಿದಂತೆ ಸಾಕಷ್ಟು ಕಲಾವಿದರು ನಟಿಸಿದ್ದಾರೆ.

'ಒಳ್ಳೆಯ ಸಿನಿಮಾ ಮಾಡಿದ ಖುಷಿ ಇದೆ. ಡಿ. 24 ರಂದು ನಮ್ಮ ಸಿನಿಮಾ ಬಿಡುಗಡೆಯಾಗುತ್ತಿದೆ. ಚಿತ್ರ ಉತ್ತಮವಾಗಿ ಮೂಡಿ ಬರಲು ಸಹಕಾರ ನೀಡಿದ ಇಡೀ ಚಿತ್ರತಂಡಕ್ಕೆ ನನ್ನ ಧನ್ಯವಾದ. ಮೋಜೊ ಆ್ಯಪ್​​ನಲ್ಲಿ ನಮ್ಮ ಚಿತ್ರದ ಹಾಡು 221 ಮಿಲಿಯನ್​​ಗೂ ಅಧಿಕ ವೀಕ್ಷಣೆಯಾಗಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ' ಎಂದು ನಿರ್ಮಾಪಕ ಸುನೀಲ್ ಗೌಡ ಹೇಳಿದರು.

ಗೀತೆ ರಚನೆಕಾರ ಕವಿರಾಜ್, ನೃತ್ಯ ನಿರ್ದೇಶಕ ಭೂಷಣ್ ಹಾಗು ಚೇತನ್ ಸಾಹಸ ಈ ಚಿತ್ರಕ್ಕಿದೆ. ಲಹರಿ ಸಂಸ್ಥೆ ಈ ಹಿಂದೆ ಮಹಾ ಕ್ಷತ್ರಿಯ, ಗಣೇಶನ ಗಲಾಟೆ ಹಾಗು ತೆಲುಗಿನ ರೋಜ ಚಿತ್ರಗಳನ್ನು ನಿರ್ಮಾಣ ಮಾಡಿತ್ತು. ಈಗ ಸುನೀಲ್ ಅವರ ಶಿವನಂದಿ ಎಂಟರ್ ಟೈನ್ ಮೆಂಟ್ ಜತೆಗೂಡಿ ರೈಡರ್ ಚಿತ್ರ ನಿರ್ಮಾಣ ಮಾಡಿದೆ.

ನಿರ್ದೇಶಕ ವಿಜಯ್ ಕುಮಾರ್ ಕೊಂಡ ಚಿತ್ರ ಉತ್ತಮವಾಗಿ ಬರಲು ಸಹಕರಿಸಿದ ತಂಡಕ್ಕೆ ಧನ್ಯವಾದ ತಿಳಿಸಿದರು. 'ರೈಡರ್' ಇದೇ ಡಿ.24 ರಂದು ಸುಮಾರು 250ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಇದನ್ನೂ ಓದಿ: ಯುವರಾಜನ 'ರೈಡರ್' ಸಿನಿಮಾದ ಡವ್ವ ಡವ್ವ ಹಾಡಿನ ಮೇಕಿಂಗ್ ಝಲಕ್!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.