ಕನ್ನಡ ಹಾಗೂ ತಮಿಳು ಭಾಷೆಯಲ್ಲಿ ಮನ್ನಣೆ ಪಡೆದಿರುವ ಖ್ಯಾತ ನಟ ರಮೇಶ್ ಅರವಿಂದ್ ಹಾಗೂ ಅರ್ಚನಾ ದಂಪತಿಯ ಮಗಳು ನಿಹಾರಿಕಾ ಇಂದು ಶುಭ ಲಗ್ನದಲ್ಲಿ ಅಕ್ಷಯ್ ಜೊತೆ ಸಪ್ತಪದಿ ತುಳಿದಿದ್ದಾರೆ.
ನಿಹಾರಿಕಾ ಹಾಗೂ ಅಕ್ಷಯ್ ಒಂದೇ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇವರ ವಿವಾಹ ಮಹೋತ್ಸವವನ್ನು ಎರಡು ಕುಟಂಬಗಳ ಸದಸ್ಯರ ಸಮ್ಮುಖದಲ್ಲಿ, ಖಾಸಗಿ ಹೋಟೆಲ್ವೊಂದಲ್ಲಿ ನಡೆದಿದೆ. ಮದುವೆಗೆ ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಆಗಮಿಸಿ ಮಧು-ವರರಿಗೆ ಶುಭ ಹಾರೈಸಿದ್ದಾರೆ.
ಕೋವಿಡ್-19 ಹಿನ್ನೆಲೆ ಹೆಚ್ಚಾಗಿ ಯಾರನ್ನು ಮದುವೆಗೆ ಆಹ್ವಾನಿಸದೆ ಕುಟುಂಬಸ್ಥರು ಮತ್ತು ಬಂಧು ಮಿತ್ರರ ಸಮ್ಮುಖದಲ್ಲಿ ವಿವಾಹ ನೆರವೇರಿಸಲಾಯಿತು. ಇನ್ನು, ಚಿತ್ರರಂಗದ ಸ್ನೇಹಿತರು ಮತ್ತು ಅಭಿಮಾನಿಗಳಿಗಾಗಿ ಜನವರಿ ಎರಡನೇ ವಾರದಲ್ಲಿ ಆರತಕ್ಷತೆ ಕಾರ್ಯಕ್ರಮ ಆಯೋಜಿಸಲಾಗಿದೆ.