ಗಾಲ್ವಾನ್ ಕಣಿವೆಯಲ್ಲಿ ನಮ್ಮ ಸೈನಿಕರ ಮೇಲೆ ದಾಳಿ ಮಾಡಿ 20 ಯೋಧರನ್ನು ಬಲಿ ಪಡೆದ ಚೀನಾ ಮೇಲೆ ಭಾರತೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಡುವೆ ಕೇಂದ್ರ ಸರ್ಕಾರ ಷೇರ್ ಇಟ್, ಕ್ಯಾಮ್ ಸ್ಕ್ಯಾನರ್, ಟಿಕ್ಟಾಕ್ ಸೇರಿದಂತೆ ಚೀನಾದ ಸುಮಾರು 59 ಮೊಬೈಲ್ ಆ್ಯಪ್ಗಳನ್ನು ಬ್ಯಾನ್ ಮಾಡಿದೆ.
ಟಿಕ್ಟಾಕ್ ಬ್ಯಾನ್ ಮಾಡಿರುವುದಕ್ಕೆ ಕೆಲವರು ಬೇಸರ ವ್ಯಕ್ತಪಡಿಸಿದ್ದರೆ, ಮತ್ತೆ ಕೆಲವರು ಸಂತೋಷ ವ್ಯಕ್ತಪಡಿಸಿದ್ದಾರೆ. ಸಿನಿಮಾ, ಕಿರುತೆರೆ ನಟ-ನಟಿಯರೂ ಕೂಡಾ ಇದಕ್ಕೂ ಮುನ್ನ ಟಿಕ್ಟಾಕ್ ಡಿಲೀಟ್ ಮಾಡಿ ದೇಶಕ್ಕೆ ಬೆಂಬಲ ವ್ಯಕ್ತಪಡಿಸಿದ್ದರು. ಉದಯ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ನಂದಿನಿ' ಧಾರಾವಾಹಿಯಲ್ಲಿ ನಾಯಕ ವಿರಾಟ್ ಪಾತ್ರಕ್ಕೆ ಜೀವ ತುಂಬುತ್ತಿರುವ ನಟ ವಿನಯ್ ಗೌಡ ಕೂಡಾ ತಮ್ಮ ಟಿಕ್ಟಾಕ್ ಅಕೌಂಟ್ ಡಿಲೀಟ್ ಮಾಡಿದ್ದಾರೆ. ಆ ಮೂಲಕ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಮಹತ್ತರವಾದ ನಿರ್ಧಾರಕ್ಕೆ ತಮ್ಮ ಬೆಂಬಲ ಸೂಚಿಸಿದ್ದಾರೆ.