ದುನಿಯಾ ವಿಜಯ್ ನಟಿಸಿ, ನಿರ್ದೇಶನ ಮಾಡಿರುವ 'ಸಲಗ' ಸಿನಿಮಾ ರಾಜ್ಯಾದ್ಯಂತ 300 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಔಟ್ ಅಂಡ್ ಔಟ್ ರೌಡಿಸಂ ಕಥೆ ಆಧರಿಸಿರುವ ಈ ಚಿತ್ರವನ್ನು ಮಾಸ್ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ.
ಸಿನಿಮಾ ಬಿಡುಗಡೆಯಾಗಿ ನಾಲ್ಕು ದಿನ ಆಗಿಲ್ಲ ಒಟಿಟಿಯಲ್ಲಿ ಬಿಡುಗಡೆ ಆಗಲಿದೆ ಅಂತಾ ಸಾಮಾಜಿಕ ಮಾಧ್ಯಮದಲ್ಲಿ ಗಾಳಿ ಸುದ್ದಿ ಹರಿದಾಡುತ್ತಿತ್ತು. ಈ ವಿಷಯ ತಿಳಿದ ನಟ ಹಾಗು ನಿರ್ದೇಶಕ ದುನಿಯಾ ವಿಜಯ್ ಪ್ರತಿಕ್ರಿಯೆ ನೀಡಿದ್ದು, 'ಸಲಗ' ಸಿನಿಮಾ ಚಿತ್ರಮಂದಿರಗಳಲ್ಲಿ ಅದ್ಭುತ ಪ್ರದರ್ಶನ ಕಾಣುತ್ತಿದೆ. ಹೀಗಿರುವಾಗ ಯಾರೋ ನಮಗೆ ಆಗದವರು ಸಿನಿಮಾ ಒಟಿಟಿಯಲ್ಲಿ ಬಿಡುಗಡೆ ಆಗುತ್ತಿದೆ ಅಂತಾ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. 'ಸಲಗ' ಸಿನಿಮಾವನ್ನು ಒಟಿಟಿಯಲ್ಲಿ ಬಿಡುಗಡೆ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
'ಸಲಗ' ಬಿಡುಗಡೆಯಾದ ಎಲ್ಲಾ ಚಿತ್ರಮಂದಿರಗಳಲ್ಲಿ ಸಿನಿ ಪ್ರೇಕ್ಷಕರಿಂದ ಸಖತ್ ರೆಸ್ಪಾನ್ಸ್ ಸಿಗುತ್ತಿದೆ. ಮಾಸ್ ಪ್ರೇಕ್ಷಕರಿಗೆ ಈ ಸಿನಿಮಾ ಇಷ್ಟವಾಗಿದೆ. ಸಿನಿಮಾದಲ್ಲಿ ಡಾಲಿ ಧನಂಜಯ್ ಖಡಕ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದು, ಸಂಜನಾ ಆನಂದ್ ಬೋಲ್ಡ್ ನಟನೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.