ನವರಸ ನಾಯಕ ಜಗ್ಗೇಶ್ ಅವರ ಎರಡನೇ ಪುತ್ರ ಯತಿರಾಜ್ ಪ್ರಯಾಣಿಸುತ್ತಿದ್ದ ಬಿಎಂಡಬ್ಲ್ಯೂ ಕಾರು ಚಿಕ್ಕಬಳ್ಳಾಪುರದ ಹೊರವಲಯದಲ್ಲಿ ಅಪಘಾತಕ್ಕೊಳಗಾಗಿದೆ. ಈ ದುರ್ಘಟನೆ ಕುರಿತು ಜಗ್ಗೇಶ್ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ಕೊರೊನಾ ಬಂದಾಗಿನಿಂದ ಹೊರ ಹೋಗಿಲ್ಲಾ, ಹೋಗಿಬರುವೆ ಎಂದು ಅಮ್ಮನಿಗೆ ಹೇಳಿ ಹೊರ ಹೋದ ಮಗ ಯತಿರಾಜ, ಅವನು ಪ್ರತಿ ಬಾರಿ ಅವನ ಇಷ್ಟದ ರಸ್ತೆ ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ಹೋಗಿ ಬರುವಾಗ ಅಡ್ಡ ಬಂದ ನಾಯಿ ರಕ್ಷಿಸಲು ಹೋಗಿ ರಸ್ತೆ ವಿಭಜಕಕ್ಕೆ ಹೊಡೆದು ಕಾರು ಪಕ್ಕದ ರಸ್ತೆಗೆ ಬಿದ್ದಿದೆ. ರಾಯರ ದಯೆ ಹಾಗೂ ನಿಮ್ಮ ಶುಭಹಾರೈಕೆ ಯತಿರಾಜನಿಗೆ ಸಣ್ಣ ಗಾಯವೂ ಆಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
![Jaggesh](https://etvbharatimages.akamaized.net/etvbharat/prod-images/kn-bng-06-magana-car-accident-bhagge-jaggesh-helidenu-7204735_01072021145838_0107f_1625131718_279.jpg)
ಇದನ್ನೂ ಓದಿ: ನಟ ಜಗ್ಗೇಶ್ ಪುತ್ರನ ಕಾರು ಅಪಘಾತ, ಕಾರಿನಲ್ಲಿದ್ದವರು ಸೇಫ್
ಯತಿರಾಜ್ ತಮ್ಮ ಬಿಎಂಡಬ್ಲ್ಯೂ ಕಾರನ್ನು ಚಲಾಯಿಸಿಕೊಂದು ಚಿಕ್ಕಬಳ್ಳಾಪುರ ಸಮೀಪದ ಹೆದ್ದಾರಿಯಲ್ಲಿ ಹೋಗುತ್ತಿರುವಾಗ ಅಪಘಾತ ನಡೆದಿದ್ದು, ಸ್ಥಳಕ್ಕೆ ಚಿಕ್ಕಬಳ್ಳಾಪುರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತವಾದ ಸಂದರ್ಭದಲ್ಲಿ ಯತಿರಾಜ್ ಒಬ್ಬರೇ ಕಾರಿನಲ್ಲಿದ್ದರು ಎನ್ನಲಾಗ್ತಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ ಅಂತ ಜಗ್ಗೇಶ್ ಸೋಷಿಯಲ್ ಮೀಡಿಯಾದಲ್ಲಿ ವಿಷಯ ಹಂಚಿಕೊಂಡಿದ್ದಾರೆ.