ಕಲರ್ಸ್ ಕನ್ನಡ ವಾಹಿನಿಯಲ್ಲಿ ಚಂದು ಗೌಡ ಸಾರಥ್ಯದಲ್ಲಿ ಮೂಡಿ ಬರುತ್ತಿರುವ 'ಚಾಟ್ ಕಾರ್ನರ್' ಕಾರ್ಯಕ್ರಮ ಕಿರುತೆರೆ ವೀಕ್ಷಕರ ಮನ ಸೆಳೆದಿದೆ. ಪ್ರತಿ ವಾರವೂ ಒಬ್ಬೊಬ್ಬರು ಸೆಲಬ್ರಿಟಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ವೀಕ್ಷಕರಿಗೆ ಮನರಂಜನೆ ನೀಡುತ್ತಿದ್ದಾರೆ. 'ಅಶ್ವಿನಿ ನಕ್ಷತ್ರ' ಖ್ಯಾತಿಯ ಮಯೂರಿ ಕ್ಯಾತರಿ ಈ ವಾರದ ಅತಿಥಿಯಾಗಿ ಭಾಗವಹಿಸಲಿದ್ದಾರೆ.
- " class="align-text-top noRightClick twitterSection" data="
">
ಇದನ್ನೂ ಓದಿ: 'ಸಲಾರ್' ಚಿತ್ರದಲ್ಲಿ ಪ್ರಭಾಸ್ ಎಂಟ್ರಿ ಹೇಗಿರಲಿದೆ ಗೊತ್ತಾ...?
ಮಯೂರಿ ಕ್ಯಾತರಿ ಗರ್ಭಿಣಿ ಆದರೂ ಲವಲವಿಕೆಯಿಂದ ಚಿತ್ರೀಕರಣದಲ್ಲಿ ಪತಿಯೊಂದಿಗೆ ಭಾಗವಹಿಸಿದ್ದಾರೆ. ಪ್ರೋಮೋ ಬಿಡುಗಡೆಯಾಗಿದ್ದು ಕಾರ್ಯಕ್ರಮವನ್ನು ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಸದ್ಯದಲ್ಲೇ ಪೋಷಕರಾಗಲಿರುವ ಈ ಜೋಡಿ ತಮ್ಮ ಲವ್ ಸ್ಟೋರಿ ಹಾಗೂ ಇನ್ನಿತರ ವಿಚಾರಗಳನ್ನು ಈ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ. ಇಬ್ಬರ ಭೇಟಿ ಹೇಗಾಯಿತು...? ಇಬ್ಬರಲ್ಲಿ ಮೊದಲು ಪ್ರಪೋಸ್ ಮಾಡಿದ್ದು ಯಾರು...? ಎಂಬ ವಿಚಾರವನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳಲಿದ್ದಾರೆ. ಶೋನಲ್ಲಿ ಗೇಮ್ಗಳನ್ನು ಆಡಿ ಅಡುಗೆ ಕೂಡಾ ಮಾಡಲಿದ್ದಾರೆ. ಕಳೆದ ವರ್ಷ ಜೂನ್ನಲ್ಲಿ ಮಯೂರಿ ತಮ್ಮ ಗೆಳೆಯ ಅರುಣ್ ಅವರನ್ನು ವರಿಸಿದ್ದರು. ದೀಪಾವಳಿ ಹಬ್ಬದಂದು ತಾವು ತಾಯಿ ಆಗುತ್ತಿರುವ ವಿಚಾರವನ್ನು ಮಯೂರಿ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದರು. ಕಂದನ ಆಗಮನಕ್ಕಾಗಿ ಕಾಯುತ್ತಿರುವ ಮಯೂರಿ ಕೆಲವು ದಿನಗಳ ಹಿಂದೆ ಸುವರ್ಣ ಸೂಪರ್ ಸ್ಟಾರ್ ಹಾಗೂ ಬೊಂಬಾಟ್ ಭೋಜನ ಕಾರ್ಯಕ್ರಮದಲ್ಲಿ ಕೂಡಾ ಭಾಗವಹಿಸಿದ್ದರು.