ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಜನುಮದ ಜೋಡಿ ಧಾರಾವಾಹಿಯಲ್ಲಿ ನಾಯಕಿಯಾಗಿ ಕಿರುತೆರೆ ಪಯಣ ಆರಂಭಿಸಿದ ಚೆಂದುಳ್ಳಿ ಚೆಲುವೆಯ ಹೆಸರು ನೇಹಾ ಪಾಟೀಲ್. ಬೆಳ್ಳಿತೆರೆಯಲ್ಲಿ ನಾಯಕಿಯಾಗಿ ನಟಿಸಿ ಸೈ ಎನಿಸಿಕೊಂಡು ನಂತರ ಡ್ಯಾನ್ಸ್ ರಿಯಾಲಿಟಿ ಶೋ ಮೂಲಕ ಕಿರುತೆರೆಗೆ ಕಾಲಿಟ್ಟಿದ್ದರು.
ಜನುಮ ಜೋಡಿ ಧಾರಾವಾಹಿಯಲ್ಲಿ ನಾಯಕಿಯಾಗುವ ಮೂಲಕ ಕಿರುತೆರೆ ಪಯಣ ಆರಂಭಿಸಿದ ನೇಹಾ ಮೊದಲ ಧಾರಾವಾಹಿಯಲ್ಲಿಯೇ ಕಿರುತೆರೆ ಪ್ರಿಯರ ಮನ ಸೆಳೆಯುವಲ್ಲಿ ಯಶಸ್ವಿಯೂ ಆದರು. ತದ ನಂತರ ಬೆಳ್ಳಿತೆರೆಯತ್ತ ಕಾಲಿಟ್ಟ ಮುದ್ದು ಮುಖದ ಚೆಲುವೆ, ಕಳೆದ ವರುಷವಷ್ಟೇ ಪ್ರಣವ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಇದೀಗ ಮತ್ತೆ ಕಿರುತೆರೆ ಪಯಣ ಆರಂಭಿಸಲಿದ್ದಾರೆ. ಅಂದ ಹಾಗೇ ಅವರು ಯಾವ ಧಾರಾವಾಹಿಯಲ್ಲೂ ನಟಿಸುತ್ತಿಲ್ಲ. ಬದಲಿಗೆ ನಿರೂಪಕಿಯಾಗಿ ಕಿರುತೆರೆಯಲ್ಲಿ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡಲಿದ್ದಾರೆ.
ಖಾಸಗಿ ವಾಹಿನಿಯೊಂದರಲ್ಲಿ ಇದೇ ಸೋಮವಾರದಿಂದ ಆರಂಭವಾಗಲಿರುವ ಹೊಚ್ಚ ಹೊಸ ಕಿಚನ್ ಶೋ ಕಾರ್ಯಕ್ರಮದಲ್ಲಿ ನಿರೂಪಕಿಯಾಗಿ ನೇಹಾ ಕಾಣಿಸಿಕೊಳ್ಳಲಿದ್ದಾರೆ.