ಪ್ರೇಮಿಗಳ ದಿನದಂದು ಬಿಡುಗಡೆ ಆದ ಪೋಸ್ಟರ್ನಿಂದಲೇ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಗಮನ ಸೆಳೆದ ‘ಪ್ರೆಸೆಂಟ್ ಪ್ರಪಂಚ 0% ಲವ್’ ಶೂಟಿಂಗ್, ಪೋಸ್ಟ್ ಪ್ರೊಡಕ್ಷನ್ ಎಲ್ಲವನ್ನೂ ಮುಗಿಸಿಕೊಂಡು ಈಗ ಸೆನ್ಸಾರ್ ಬಳಿ ಹೋಗಲು ಪ್ರಥಮ ಪ್ರತಿಯನ್ನು ಸಿದ್ಧಮಾಡಿಕೊಂಡಿದೆ. ಸೆನ್ಸಾರ್ ಸರ್ಟಿಫಿಕೇಟ್ ದೊರೆತ ಕೂಡಲೇ ಸಿನಿಮಾ ಬಿಡುಗಡೆಗೆ ಪ್ಲ್ಯಾನ್ ಮಾಡಲಾಗುವುದು ಎಂದು ಚಿತ್ರತಂಡ ಹೇಳಿದೆ.
ಈ ವರ್ಷದ ವಾರ್ಷಿಕ ಪರೀಕ್ಷೆಗಳು ಮುಗಿದ ನಂತರ ಸಿನಿಮಾವನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ. ಫ್ರೆಂಡ್ಸ್ ಮೀಡಿಯಾ ಪ್ರೊಡಕ್ಷನ್ ಬ್ಯಾನರ್ ಅಡಿ ಈ ಸಿನಿಮಾ ನಿರ್ಮಾಣವಾಗುತ್ತಿದೆ. ಕೃಷ್ಣಮೂರ್ತಿ ಹಾಗೂ ರವಿಕುಮಾರ್. ಹೆಚ್ ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ‘ಸಂಯುಕ್ತ 2’ ಚಿತ್ರವನ್ನು ನಿರ್ದೇಶಿಸಿರುವ ಅಭಿರಾಮ್ ಈ ಸಿನಿಮಾ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಕಾಮಿಡಿ, ಲವ್, ಸೆಂಟಿಮೆಂಟ್ ಹಾಗೂ ಕೌಟುಂಬಿಕ ಕಥಾ ವಸ್ತು ಪ್ರತಿಯೊಂದೂ ಈ ಚಿತ್ರದಲ್ಲಿದೆ. ಅಭಿರಾಮ್ ಅವರೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಸಿದ್ಧಪಡಿಸಿದ್ದಾರೆ. ಕೆ.ವಿ. ರವಿ ಚಿತ್ರದ ಮೂರು ಹಾಡುಗಳಿಗೆ ರಾಗ ಸಂಯೋಜನೆ ಮಾಡಿದ್ದಾರೆ. ಈಶ್ವರಿ ಸುರೇಶ್ ಛಾಯಾಗ್ರಹಣ, ವೆಂಕಿ ಸಂಕಲನ, ಕುಂಗ್ ಫೂ ಚಂದ್ರು, ಅಲ್ಟಿಮೇಟ್ ಶಿವು ಸಾಹಸ, ಹರಿಕೃಷ್ಣ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ವಿ. ನಾಗೇಂದ್ರ ಪ್ರಸಾದ್ ಚಿತ್ರದ ಹಾಡುಗಳನ್ನು ಬರೆದಿದ್ದಾರೆ.
'ಸಂಯುಕ್ತ-2' ಹಾಗೂ 'ಕೆಮಿಸ್ಟ್ರಿ ಆಫ್ ಕರಿಯಪ್ಪ ' ಸಿನಿಮಾ ನಿರ್ಮಾಪಕ ಅರ್ಜುನ್ ಮಂಜುನಾಥ್ ಈ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದಾರೆ. ಇವರೊಂದಿಗೆ ಯಶಸ್ ಅಭಿ, ಸಂಭ್ರಮ ಶ್ರೀ, ಅಕ್ಷತ, ತಬಲಾ ನಾಣಿ, ಎಸ್. ನಾರಾಯಣ್, ಓಂ ಪ್ರಕಾಶ್ ರಾವ್, ಚಂದನ್ ಆಚಾರ್, ಸಂಜನ, ಗೋವಿಂದೇ ಗೌಡ ಹಾಗೂ ಇನ್ನಿತರರು ಚಿತ್ರದ ತಾರಾಗಣದಲ್ಲಿದ್ದಾರೆ.