ETV Bharat / sitara

'ಬ್ಯಾಡ್​ ಮ್ಯಾನರ್ಸ್​'ಗೆ ಎಂಟ್ರಿ ಕೊಟ್ಟ ರಚಿತಾ ರಾಮ್​ - 'Bad Manners' kannada film

ರೆಬೆಲ್ ಸ್ಟಾರ್ ಅಂಬರೀಶ್ ಅವರ ಪುತ್ರ ಅಭಿಷೇಕ್ ನಟನೆಯ ಎರಡನೇ ಸಿನಿಮಾ 'ಬ್ಯಾಡ್ ಮ್ಯಾನರ್ಸ್'ನಲ್ಲಿ ನಾಯಕಿಯಾಗಿ ಡಿಂಪಲ್ ಕ್ವೀನ್ ರಚಿತಾ ರಾಮ್ ಕಾಣಿಸಿಕೊಂಡಿದ್ದಾರೆ.

ರಚಿತಾ ರಾಮ್​
ರಚಿತಾ ರಾಮ್​
author img

By

Published : Feb 10, 2021, 3:25 PM IST

ರೆಬೆಲ್​ ಸ್ಟಾರ್​ ಅಂಬರೀಶ್​ ಅವರ ಮಗ ಅಭಿಷೇಕ್​ ಅಂಬರೀಶ್​ ಅಭಿನಯದ ಎರಡನೇ ಚಿತ್ರ 'ಬ್ಯಾಡ್​ ಮ್ಯಾನರ್ಸ್​' ಕಳೆದ ತಿಂಗಳು ಪ್ರಾರಂಭವಾಗಿ ಮಂಡ್ಯದಲ್ಲಿ ಒಂದು ಹಂತದ ಚಿತ್ರೀಕರಣ ಸಹ ಮುಗಿದಿದೆ. ಇದೀಗ ಲೆಟೆಸ್ಟ್ ಅಪ್ಡೇಟ್ ಅಂದ್ರೆ ಡಿಂಪಲ್ ಕ್ವೀನ್ ರಚಿತಾ ರಾಮ್ ಕೂಡ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ.

ಹೌದು, ಒಂದು ಹಂತದ ಚಿತ್ರೀಕರಣ ಮುಗಿಸಿರುವ 'ಬ್ಯಾಡ್​ ಮ್ಯಾನರ್ಸ್​' ಎರಡನೇ ಹಂತದ ಚಿತ್ರೀಕರಣವನ್ನು ಸದ್ಯದಲ್ಲೇ ಪ್ರಾರಂಭಿಸಲಿದೆ. ಇದುವರೆಗೆ ಚಿತ್ರದಲ್ಲಿ ಅಭಿಷೇಕ್​ ನಟಿಸುತ್ತಿರುವುದನ್ನು ಬಿಟ್ಟರೆ ಮಿಕ್ಕಂತೆ ಯಾವ ಕಲಾವಿದರು ಚಿತ್ರದಲ್ಲಿ ಬಣ್ಣಹಚ್ಚಲಿದ್ದಾರೆ ಎಂದು ಬಹಿರಂಗಪಡಿಸಿರಲಿಲ್ಲ. ಆದರೆ ಇದೀಗ ಚಿತ್ರದಲ್ಲಿ ಚಿತ್ರದಲ್ಲಿ ನಾಯಕಿಯರಾಗಿ ರಚಿತಾ ರಾಮ್​ ಮತ್ತು ಪ್ರಿಯಾಂಕಾ ನಟಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಪ್ರಿಯಾಂಕಾ ಮೂಲತಃ ಮೈಸೂರಿನವರಾಗಿದ್ದರೂ, ತಮಿಳು ಧಾರಾವಾಹಿಗಳಲ್ಲಿ ನಟಿಸುವ ಮೂಲಕ ಜನಪ್ರಿಯತೆ ಪಡೆದಿದ್ದಾರೆ. ಕಿರುತೆರೆಯಲ್ಲಿ ದೊಡ್ಡ ಹೆಸರು ಮಾಡಿದ್ದ ಪ್ರಿಯಾಂಕಾ, ಈಗ 'ಬ್ಯಾಡ್​ ಮ್ಯಾನರ್ಸ್​' ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಇಬ್ಬರು ನಾಯಕಿಯರು ಚಿತ್ರದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದೆ.

ಈ ಚಿತ್ರವನ್ನು ದುನಿಯಾ ಸೂರಿ ನಿರ್ದೇಶಿಸಿದ್ದಾರೆ. ಜೊತೆಗೆ ಈ ಹಿಂದೆ 'ಪಾಪ್​ಕಾರ್ನ್​ ಮಂಕಿ ಟೈಗರ್​' ಚಿತ್ರ ನಿರ್ಮಿಸಿದ್ದ ಕೆ.ಎಂ. ಸುಧೀರ್​ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.