ಬೆಂಗಳೂರು: ಸ್ಯಾಂಡಲ್ವುಡ್ನ ನಟ ಕಂ ನಿರ್ಮಾಪಕನೊಬ್ಬ ಹಿರಿತೆರೆಯ ಸಹ ನಟಿಗೆ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.
'ಮಿಷನ್ 2023' ಚಿತ್ರದ ನಾಯಕ ಹರ್ಷವರ್ಧನ್ ಅಲಿಯಾಸ್ ವಿಜಯ್ ಭಾರ್ಗವ್ ಎನ್ನುವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಸಂಬಂಧ ಅವರನ್ನು ಬಂಧಿಸಿ, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿನಿಮಾಗಳಲ್ಲಿ ಪಾತ್ರ ಮಾಡುತ್ತಿದ್ದ ನಟಿಯೊಬ್ಬರು ಇವರ ವಿರುದ್ಧ ದೂರು ನೀಡಿದ್ದರು. ಸುಮಾರು 2 ವರ್ಷಗಳಿಂದ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ, ದೈಹಿಕವಾಗಿ ಬಳಸಿಕೊಂಡು ಮೋಸ ಮಾಡಿದ್ದಾನೆ ಎಂದು ಆರೋಪಿಸಿದ್ದರು.
ಮೇಲ್ನೋಟಕ್ಕೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಹರ್ಷವರ್ಧನ್ ವಿರುದ್ಧ ಐಪಿಸಿ ಸೆಕ್ಷನ್ 417, 376, 504, 506 ಗಳ ಅಡಿ ಪ್ರಕರಣ ದಾಖಲಿಸಲಾಗಿದೆ. ನಟಿಗೆ ಮೆಡಿಕಲ್ ಟೆಸ್ಟ್ ನಡೆಸಲಾಗುತ್ತಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಅವಾಚ್ಯ ಶಬ್ಧಗಳಿಂದ ನಿಂದನೆ, ಕೊಲೆ ಬೆದರಿಕೆ: ನೀನೇ ನನ್ನ ಹೆಂಡತಿ ಎಂದು ಹೇಳಿ ನಂಬಿಸಿ ಹಲವು ರೀತಿಯಲ್ಲಿ ವಂಚನೆ ಮಾಡಿದ್ದಾನೆ. ಮದುವೆ ಮಾಡಿಕೊಳ್ಳಲು ಕೇಳಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಮಾಡಿಸುವುದಾಗಿ ಹರ್ಷವರ್ಧನ್ ಬೆದರಿಕೆ ಹಾಕಿದ್ದ ಎಂದು ನಟಿ ಆರೋಪಿಸಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ