ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನ ಅರ್ಧದಲ್ಲೇ ರದ್ದುಗೊಳಿಸಲಾಗಿದೆ.
ಇಂದು ಬೆಳಗ್ಗೆ ಜಿಮ್ನಲ್ಲಿ ಪುನೀತ್ ರಾಜ್ ಕುಮಾರ್ ಕಸರತ್ತು ಮಾಡುತ್ತಿವಾಗ ಲಘು ಹೃದಯಾಘಾತವಾಗಿದ್ದು, ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಹಿನ್ನೆಲೆ ಇಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನ ಅರ್ಧಕ್ಕೆ ನಿಲ್ಲಿಸಲಾಗಿದೆ.
ಬೆಂಗಳೂರಿನ ನವರಂಗ್ ಚಿತ್ರಮಂದಿರದಿಂದ ಸಿನಿಮಾ ವೀಕ್ಷಿಸುತ್ತಿದ್ದ ಪ್ರೇಕ್ಷಕರು ಅರ್ಧದಲ್ಲೇ ಥಿಯೇಟರ್ನಿಂದ ಹೊರ ಬಂದಿದ್ದಾರೆ.
ಬಿಗಿ ಭದ್ರತೆ:
ಅಪ್ಪು ಅಭಿಮಾನಿಗಳು ಜಮಾಯಿಸಿದ ಹಿನ್ನೆಲೆ ಪುನೀತ್ ರಾಜ್ಕುಮಾರ್ ಮನೆ, ವಿಕ್ರಂ ಆಸ್ಪತ್ರೆ ಮುಂಭಾಗ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ.