ETV Bharat / sports

ಕಿಡಂಬಿ ಶ್ರೀಕಾಂತ್, ಸೈನಾ ಕನಸಿಗೆ ತಣ್ಣೀರೆರಚಿದ BWF..! - ವಿಶ್ವ ಬ್ಯಾಡ್ಮಿಂಟನ್ ಫೆಡರೇಷನ್

ಟೋಕಿಯೊ ಒಲಿಂಪಿಕ್ಸ್‌ನ ಅರ್ಹತಾ ಅವಧಿ ಜೂನ್ 15ರಂದು ಮುಕ್ತಾಯಗೊಳ್ಳಲಿದೆ. ಆದರೆ ಅದಕ್ಕೂ ಮುನ್ನ ಯಾವುದೇ ಟೂರ್ನಿಯನ್ನು ಆಯೋಜಿಸಲಾಗುವುದಿಲ್ಲ. ರ‍್ಯಾಂಕಿಂಗ್‌ನಲ್ಲಿ ಬದಲಾವಣೆಯೂ ಇಲ್ಲ. ಆದ್ದರಿಂದ ಒಲಿಂಪಿಕ್ಸ್‌ಗೆ ಈಗಿನ ರ‍್ಯಾಂಕಿಂಗ್ ಪ್ರಕಾರವೇ ಆಟಗಾರರನ್ನು ಆಯ್ಕೆ ಮಾಡಬೇಕು ಎಂದು ಬಿಡಬ್ಲ್ಯುಎಫ್‌ (ವಿಶ್ವ ಬ್ಯಾಡ್ಮಿಂಟನ್ ಫೆಡರೇಷನ್) ತಿಳಿಸಿದೆ.

ಕಿದಂಬಿ ಶ್ರೀಕಾಂತ್, ಸೈನಾ ಕನಸಿಗೆ ತಣ್ಣೀರೆರಚಿದ ಬಿಡಬ್ಲ್ಯುಎಫ್‌..!

author img

By

Published : May 28, 2021, 5:21 PM IST

ನವದೆಹಲಿ: ರ‍್ಯಾಂಕಿಂಗ್​​ನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ವಿಶ್ವ ಬ್ಯಾಡ್ಮಿಂಟನ್ ಫೆಡರೇಷನ್ ಘೋಷಿಸಿದೆ. ಇದರೊಂದಿಗೆ, ಒಲಿಂಪಿಕ್ಸ್‌ಗೆ ಅರ್ಹತೆ ಗಳಿಸುವ ಭಾರತದ ಕಿಡಂಬಿ ಶ್ರೀಕಾಂತ್ ಮತ್ತು ಸೈನಾ ನೆಹ್ವಾಲ್ ಆಸೆಗೆ ತಣ್ಣೀರೆರೆಚಿದಂತಾಗಿದೆ.

ಇತ್ತೀಚೆಗಷ್ಟೇ ಒಲಿಂಪಿಕ್ಸ್‌ಗೆ ಅರ್ಹತೆ ಗಳಿಸಲು ಅವಕಾಶವಿದ್ದ ಮೂರು ಟೂರ್ನಿಗಳನ್ನು ಕೊರೊನಾ ಕಾರಣದಿಂದ ರದ್ದುಗೊಳಿಸಲಾಗಿತ್ತು. ಹೀಗಾಗಿ ರ‍್ಯಾಂಕಿಂಗ್​​ನಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿತ್ತು. ಈ ಹಿನ್ನೆಲೆ ಕಿಡಂಬಿ ಶ್ರೀಕಾಂತ್ ಮತ್ತು ಸೈನಾ ನೆಹ್ವಾಲ್ ನಿರೀಕ್ಷೆಯಿಂದ ಕಾಯುತ್ತಿದ್ದರು.

ಟೋಕಿಯೊ ಒಲಿಂಪಿಕ್ಸ್‌ನ ಅರ್ಹತಾ ಅವಧಿ ಜೂನ್ 15ರಂದು ಮುಕ್ತಾಯಗೊಳ್ಳಲಿದೆ. ಆದರೆ, ಅದಕ್ಕೂ ಮುನ್ನ ಯಾವುದೇ ಟೂರ್ನಿಯನ್ನು ಆಯೋಜಿಸಲಾಗುವುದಿಲ್ಲ. ರ‍್ಯಾಂಕಿಂಗ್‌ನಲ್ಲಿ ಬದಲಾವಣೆಯೂ ಇಲ್ಲ. ಆದ್ದರಿಂದ ಒಲಿಂಪಿಕ್ಸ್‌ಗೆ ಈಗಿನ ರ‍್ಯಾಂಕಿಂಗ್ ಪ್ರಕಾರವೇ ಆಟಗಾರರನ್ನು ಆಯ್ಕೆ ಮಾಡಬೇಕು ಎಂದು ಬಿಡಬ್ಲ್ಯುಎಫ್‌ (ವಿಶ್ವ ಬ್ಯಾಡ್ಮಿಂಟನ್ ಫೆಡರೇಷನ್) ತಿಳಿಸಿದೆ.

ಇಂಡಿಯಾ ಓಪನ್, ಮಲೇಷ್ಯಾ ಓಪನ್ ಮತ್ತು ಸಿಂಗಪುರ ಓಪನ್ ಟೂರ್ನಿಗಳನ್ನು ರದ್ದು ಮಾಡಿದ್ದ ಬಿಡಬ್ಲ್ಯುಎಫ್‌ ಅರ್ಹತಾ ಅವಧಿಯನ್ನು ಮೂರು ತಿಂಗಳು ಮುಂದೂಡಿತ್ತು. ಮುಂದಿನ ತಿಂಗಳ 15ರ ವರೆಗೆ ಅರ್ಹತಾ ಅವಧಿ ಇದ್ದರೂ ತಾಂತ್ರಿಕವಾಗಿ ಒಲಿಂಪಿಕ್ಸ್‌ಗೆ ಟಿಕೆಟ್ ಗಳಿಸುವ ಅವಕಾಶ ಈಗಲೇ ಮುಗಿದಿದೆ ಎಂದು ಬಿಡಬ್ಲ್ಯುಎಫ್‌ ಪ್ರಧಾನ ಕಾರ್ಯದರ್ಶಿ ಥಾಮಸ್ ಲೂಂಡ್ ಹೇಳಿದ್ದಾರೆ.

ಇದನ್ನೂ ಓದಿ:Shooting: MQS ಸುತ್ತಿನಲ್ಲಿ ತೇಜಸ್ವಿನಿಗೆ ಅಗ್ರಸ್ಥಾನ

ಭಾರತದ ಪಿ.ವಿ.ಸಿಂಧು, ಬಿ.ಸಾಯಿ ಪ್ರಣೀತ್, ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ ಅವರು ಈಗಾಗಲೇ ಒಲಿಂಪಿಕ್ಸ್‌ಗೆ ಅರ್ಹತೆ ಗಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.