ಇಂದೋರ್ (ಮಧ್ಯಪ್ರದೇಶ): ಆಸ್ಟ್ರೇಲಿಯಾದ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿದ ಟೀಮ್ ಇಂಡಿಯಾದ ಬ್ಯಾಟರ್ ಸೂರ್ಯಕುಮಾರ್ ಯಾದವ್ ತಮ್ಮ ಏಕದಿನ ಕ್ರಿಕೆಟ್‌ನಲ್ಲಿ ವೃತ್ತಿಜೀವನದ ಅತ್ಯುತ್ತಮ ಇನ್ನಿಂಗ್ಸ್ ಆಡಿದರು. ಆಸ್ಟ್ರೇಲಿಯಾದ ಬೌಲರ್‌ಗಳ ಬೆವರಿಳಿಸಿದ ಅವರು ಅರ್ಧ ಶತಕ ಪೂರೈಸಿದರು.
ಸೂರ್ಯಕುಮಾರ್ ಯಾದವ್ ಅವರ ಇನ್ನಿಂಗ್ಸ್‌ನಲ್ಲಿ ಸಿಕ್ಸರ್ ಮತ್ತು ಬೌಂಡರಿಗಳ ಸುರಿಮಳೆಯೇ ಕಂಡು ಬಂತು. ಸೂರ್ಯ ಕುಮಾರ್ ಯಾದವ್ ತಮ್ಮ ಸ್ಫೋಟಕ ಬ್ಯಾಟಿಂಗ್ನಿಂದ ಪ್ರವಾಸಿ ತಂಡದ ವಿರುದ್ಧ ತಮ್ಮ ಏಕದಿನ ಕ್ರಿಕೆಟ್ನ ವೃತ್ತಿಜೀವನದ ನಾಲ್ಕನೇ ಅರ್ಧಶತಕ ಗಳಿಸಿದರು. ಅಷ್ಟೇ ಅಲ್ಲ ಆಸ್ಟ್ರೇಲಿಯಾದ ವೇಗಿ ಕ್ಯಾಮರೂನ್ ಗ್ರೀನ್ ಅವರ ಒಂದು ಓವರ್‌ನಲ್ಲಿ ಸೂರ್ಯಕುಮಾರ್ ಯಾದವ್ ಬ್ಯಾಕ್ ಟು ಬ್ಯಾಕ್ ಸಿಕ್ಸರ್ ಬಾರಿಸುವ ಮೂಲಕ ಸಂಚಲನ ಮೂಡಿಸಿದರು.
-
6⃣6⃣6⃣6⃣
— BCCI (@BCCI) September 24, 2023 " class="align-text-top noRightClick twitterSection" data="
The crowd here in Indore has been treated with Signature SKY brilliance! 💥💥#TeamIndia | #INDvAUS | @IDFCFIRSTBank | @surya_14kumar pic.twitter.com/EpjsXzYrZN
">6⃣6⃣6⃣6⃣
— BCCI (@BCCI) September 24, 2023
The crowd here in Indore has been treated with Signature SKY brilliance! 💥💥#TeamIndia | #INDvAUS | @IDFCFIRSTBank | @surya_14kumar pic.twitter.com/EpjsXzYrZN6⃣6⃣6⃣6⃣
— BCCI (@BCCI) September 24, 2023
The crowd here in Indore has been treated with Signature SKY brilliance! 💥💥#TeamIndia | #INDvAUS | @IDFCFIRSTBank | @surya_14kumar pic.twitter.com/EpjsXzYrZN
44ನೇ ಓವರ್‌ನಲ್ಲಿ ಆಸ್ಟ್ರೇಲಿಯಾದ ಬೌಲರ್ ಕ್ಯಾಮರೂನ್ ಗ್ರೀನ್ ಬೌಲಿಂಗ್ ಮಾಡುತ್ತಿದ್ದರು. ಆಗ ಸೂರ್ಯಕುಮಾರ್ ಯಾದವ್ ಬ್ಯಾಟ್ ಮಾಡುತ್ತಿದ್ದರು. ಗ್ರೀನ್ ಅವರ ಮೊದಲ ಎಸೆತದಲ್ಲೇ ಸೂರ್ಯಕುಮಾರ್ ಯಾದವ್ ಫೈನ್ ಲೆಗ್ ಕಡೆಗೆ ಸಿಕ್ಸರ್ ಬಾರಿಸಿದರು. ಎರಡನೇ ಎಸೆತವನ್ನು ಸ್ಕೂಪ್-ಸ್ವೀಪ್ ಮಾಡಿದ ಅವರು ಬಾಲ್ ಅನ್ನು ಬೌಂಡರಿಯಿಂದ ಹೊರಗೆ ಕಳುಹಿಸಿದರು. ಮೂರನೇ ಎಸೆತದಲ್ಲಿ ಸೂರ್ಯಕುಮಾರ್ ಯಾದವ್ ಕವರ್ ಮೇಲೆ ಸಿಕ್ಸರ್ ಬಾರಿಸಿದರು. ಅವರು ಓವರ್‌ನ ನಾಲ್ಕನೇ ಎಸೆತವನ್ನು ಸ್ಕ್ವೇರ್ ಲೆಗ್ ಕಡೆಗೆ ಬಾಲ್ಗೆ ದಿಕ್ಕು ತೋರಿಸಿದರು.
ಸರಣಿಯ ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾದ ಬೌಲರ್‌ಗಳನ್ನು ಬೆಂಡೆತ್ತಿದ್ದ ಸೂರ್ಯಕುಮಾರ್ ಯಾದವ್ ಅಜೇಯ ಅರ್ಧಶತಕ ಬಾರಿಸಿದ್ದು ಗಮನಾರ್ಹ. 24 ಎಸೆತಗಳನ್ನು ಎದುರಿಸಿದ ಸೂರ್ಯ ಐವತ್ತು ರನ್ ಪೂರೈಸಿದ್ದರು. ಸೂರ್ಯ ಕುಮಾರ್ ಬ್ಯಾಟ್‌ನಿಂದ ಒಟ್ಟು ಮೂರು ಬೌಂಡರಿ ಹಾಗೂ ಐದು ಸಿಕ್ಸರ್‌ಗಳು ಬಂದಿವೆ. ಅಷ್ಟೇ ಅಲ್ಲ, ತಮ್ಮ ಈ ಭರ್ಜರಿ ಆಟದಿಂದ ಸೂರ್ಯ ಕುಮಾರ್ ತನ್ನ ಹೆಸರಿನಲ್ಲಿ ವಿಶ್ವದಾಖಲೆಯನ್ನೂ ಬರೆದಿದ್ದಾರೆ.
ಸೂರ್ಯ ಭಾರತದ ಪರ ಏಕದಿನ ಕ್ರಿಕೆಟ್‌ನಲ್ಲಿ ಅತಿವೇಗದ ಅರ್ಧಶತಕ ಗಳಿಸಿದ ಆರನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಅಜಿತ್ ಅಗರ್ಕರ್ 21 ಎಸೆತಗಳಲ್ಲಿ ಅರ್ಧಶತಕ ಗಳಿಸಿದ್ದರು. ಅವರ ನಂತರ ಕಪಿಲ್ ದೇವ್, ವೀರೇಂದ್ರ ಸೆಹ್ವಾಗ್, ರಾಹುಲ್ ದ್ರಾವಿಡ್ ಮತ್ತು ಯುವರಾಜ್ ಸಿಂಗ್ 22 ಎಸೆತಗಳಲ್ಲಿ ಅರ್ಧಶತಕ ಗಳಿಸಿದ್ದಾರೆ.
ಸೂರ್ಯಕುಮಾರ್ ಯಾದವ್ ಏಕದಿನದ 29 ಇನ್ನಿಂಗ್ಸ್ ಮೂಲಕ 659 ರನ್ ಗಳಿಸಿದ್ದಾರೆ. ಆದರೆ ಈ ವರ್ಷ ಸೂರ್ಯಕುಮಾರ್ ಯಾದವ್ 13 ಏಕದಿನ ಪಂದ್ಯಗಳಲ್ಲಿ 275 ರನ್ ಗಳಿಸಿದ್ದು, 12 ಇನ್ನಿಂಗ್ಸ್‌ಗಳಲ್ಲಿ ಕೇವಲ ಎರಡು ಅರ್ಧಶತಕಗಳನ್ನು ಗಳಿಸಿದ್ದಾರೆ.
ಇದನ್ನೂ ಓದಿ: ಏಷ್ಯನ್ ಗೇಮ್ಸ್, ಮಹಿಳಾ ಟಿ20 ಫೈನಲ್: ಶ್ರೀಲಂಕಾ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್, ಯಾರಿಗೆ ಚಿನ್ನ?