ನವದೆಹಲಿ: ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ನ ನಾಲ್ಕನೇ ದಿನದಾಟಕ್ಕೂ ಮುನ್ನ ಭಾರತೀಯ ಆಟಗಾರರು ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಲಾರ್ಡ್ಸ್ನಲ್ಲಿ 75ನೇ ಸ್ವಾತಂತ್ರ್ಯೋತ್ಸವ ಆಚರಿಸಿದರು.
ಭಾರತೀಯ ಆಟಗಾರರು ಹಾಗೂ ಸಹಾಯಕ ಸಿಬ್ಬಂದಿ ರಾಷ್ಟ್ರಧ್ವಜ ಹಾರಿಸಿ, ರಾಷ್ಟ್ರಗೀತೆಯನ್ನು ಹಾಡಿದರು. ಕಾರ್ಯಕ್ರಮದ ವಿಡಿಯೋವನ್ನು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.
-
On the occasion of India's Independence Day, #TeamIndia members came together to hoist the flag 🇮🇳 🙌 pic.twitter.com/TuypNY5hjU
— BCCI (@BCCI) August 15, 2021 " class="align-text-top noRightClick twitterSection" data="
">On the occasion of India's Independence Day, #TeamIndia members came together to hoist the flag 🇮🇳 🙌 pic.twitter.com/TuypNY5hjU
— BCCI (@BCCI) August 15, 2021On the occasion of India's Independence Day, #TeamIndia members came together to hoist the flag 🇮🇳 🙌 pic.twitter.com/TuypNY5hjU
— BCCI (@BCCI) August 15, 2021
"75ನೇ ಸ್ವಾತಂತ್ರ್ರೋತ್ಸವದ ಪ್ರಯುಕ್ತ ಭಾರತ ತಂಡದ ಸದಸ್ಯರು ಒಟ್ಟಾಗಿ ಸೇರಿ ಧ್ವಜರೋಹಣ ಮಾಡಿದ್ದಾರೆ" ಎಂದು ಬಿಸಿಸಿಐ ಟ್ವೀಟ್‌ನಲ್ಲಿ ಬರೆದುಕೊಂಡಿದೆ.
ಈ ಟೆಸ್ಟ್ ಪಂದ್ಯದಲ್ಲಿ ಭಾರತ ಮೊದಲ ಇನ್ನಿಂಗ್ಸ್ನಲ್ಲಿ 364 ರನ್ಗಳಿಸಿದರೆ ಇದಕ್ಕುತ್ತರವಾಗಿ ಇಂಗ್ಲೆಂಡ್ ನಾಯಕ ಜೋ ರೂಟ್ ಅವರ ಅಜೇಯ 180 ರನ್ಗಳ ನೆರವಿನಿಂದ 391 ರನ್ಗಳಿಸಿ 27 ರನ್ಗಳ ಇನ್ನಿಂಗ್ಸ್ ಮುನ್ನಡೆ ಪಡೆದುಕೊಂಡಿದೆ.
ಬೃಹತ್ ಮೊತ್ತದತ್ತ ದಾಪುಗಾಲಿಟ್ಟಿದ್ದ ಆಂಗ್ಲರನ್ನು ಮೊಹಮ್ಮದ್ ಸಿರಾಜ್ 4 ವಿಕೆಟ್ ಪಡೆದು ನಿಯಂತ್ರಿಸಿದರು. ಇವರಿಗೆ ಸಾಥ್ ನೀಡಿದ ಮೊಹಮ್ಮದ್ ಶಮಿ 2 ಮತ್ತು ಇಶಾಂತ್ ಶರ್ಮಾ 3 ವಿಕೆಟ್ ಪಡೆದರು.
ಇದನ್ನೂ ಓದಿ:ಟೆಸ್ಟ್ನಲ್ಲಿ ಜೋ ರೂಟ್ 9000 ರನ್.. ಈ ಸಾಧನೆ ಮಾಡಿದ 2ನೇ ಇಂಗ್ಲಿಷ್ ದಾಂಡಿಗ..