ನವದೆಹಲಿ: ಅಫ್ಘಾನಿಸ್ತಾನದಲ್ಲಿ ಉಂಟಾಗಿರವ ಪ್ರಕ್ಷುಬ್ಧತೆ ಕಡೆಗೆ ಎಲ್ಲರ ಗಮನ ಕೇಂದ್ರೀಕರಿಸಿದೆ. ಈನ ಸಂದರ್ಭದಲ್ಲಿ ಅಫ್ಘಾನಿಸ್ತಾನ ಕ್ರಿಕೆಟ್ ತಂಡ ಯುಎಇನಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ನಲ್ಲಿ ಆಡಲಿದೆಯೇ ಎಂಬ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ. ಆದರೆ, ಇದಕ್ಕೆ ಸ್ಪಷ್ಟನೆ ನೀಡಿರುವ ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ, ತಮ್ಮ ತಂಡ ಟೂರ್ನಿಗಾಗಿ ಸಿದ್ಧವಾಗುತ್ತಿದೆ ಎಂದು ತಿಳಿಸಿದೆ.
ಅಫ್ಘಾನ್ ತಂಡ ಟಿ-20 ವಿಶ್ವಕಪ್ನಲ್ಲಿ ಸ್ಪರ್ಧಿಸುವ ವಿಚಾರದಲ್ಲಿ ಯಾವುದೇ ಅನುಮಾನವಿಲ್ಲ. ಬೋರ್ಡ್ ಇವೆಂಟ್ಗಾಗಿ ಸ್ಪರ್ಧಿಸುವುದಕ್ಕೆ ಸಿದ್ಧತೆಯಲ್ಲಿ ತೊಡಗಿದ್ದೇವೆ. ಇದರ ಭಾಗವಾಗಿ ವೆಸ್ಟ್ ಇಂಡೀಸ್ ಮತ್ತು ಆಸ್ಟ್ರೇಲಿಯಾದೊಂದಿಗೆ ತ್ರಿಕೋನ ಸರಣಿಯನ್ನಾಡಲಿದೆ ಎಂದು ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿಯ ಮಾಧ್ಯಮ ವ್ಯವಸ್ಥಾಪಕ ಹಿಕ್ಮತ್ ಹಸನ್ ಎಎನ್ಐಗೆ ತಿಳಿಸಿದ್ದಾರೆ.
ಕೆಲವೇ ದಿನಗಳಲ್ಲಿ ಆಟಗಾರರೆಲ್ಲರೂ ತರಬೇತಿಗಾಗಿ ಕಾಬೂಲ್ಗೆ ಮರಳಲಿದ್ದಾರೆ. ಆಸ್ಟ್ರೇಲಿಯಾ ಮತ್ತು ವಿಂಡೀಸ್ ಜೊತೆಗಿನ ತ್ರಿಕೋನ ಸರಣಿ ಆಯೋಜನೆ ಮಾಡಲು ನಾವು ಸ್ಥಳಗಳನ್ನು ಎದುರು ನೋಡುತ್ತಿದ್ದೇವೆ. ಶ್ರೀಲಂಕಾ ಮತ್ತು ಮಲೇಷ್ಯಾ ದೇಶಗಳ ಜೊತೆಗೆ ಮಾತನಾಡುತ್ತಿದ್ದೇವೆ. ಹೇಗಾಗುತ್ತದೆ ಎಂಬುದನ್ನು ಕಾದು ನೋಡೋಣ ಎಂದು ತಿಳಿಸಿದ್ದಾರೆ.
ಈಗಾಗಲೇ ಪಾಕಿಸ್ತಾನ ಜೊತೆಗೆ ಹಂಬಂಟೋಟದಲ್ಲಿ ಸರಣಿ ನಡೆಯಲಿದೆ. ಜೊತೆಗೆ ಆಟಗಾರರಿಗೆ ಟಿ-20 ವಿಶ್ವಕಪ್ಗೆ ಅನುಕೂಲವಾಗಲೆಂದು ದೇಶಿ ಟಿ-20 ಟೂರ್ನಮೆಂಟ್ ನಡೆಸಲು ನಾವು ತಯಾರಿ ನಡೆಸುತ್ತಿದ್ದೇವೆ ಎಂದು ಹಸನ್ ಹೇಳಿದ್ದಾರೆ.
ಇದನ್ನು ಓದಿ:ಅಫ್ಘಾನಿಸ್ತಾನ ಬಿಕ್ಕಟ್ಟಿನಿಂದ ಐಪಿಎಲ್ ಮೇಲೆ ಪರಿಣಾಮ; ಇಬ್ಬರು ಸ್ಟಾರ್ ಆಟಗಾರರಿಗೆ ಸಿಗುತ್ತಾ ಅವಕಾಶ?