ಹೈದರಾಬಾದ್: ಐಸಿಸಿ ಟಿ-20 ವಿಶ್ವಕಪ್ ಟೂರ್ನಾಮೆಂಟ್ಗೋಸ್ಕರ ಈಗಾಗಲೇ ಟೀಂ ಇಂಡಿಯಾ ಪ್ರಕಟಗೊಂಡಿದೆ. ಆದರೆ, ಕೆಲ ಪ್ಲೇಯರ್ಸ್ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡದ ಕಾರಣ ಅವರ ಬದಲಿಗೆ ಬೇರೆ ಆಟಗಾರರಿಗೆ ಅವಕಾಶ ನೀಡಬೇಕೆಂಬ ಮಾತು ಕೇಳಿ ಬರುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಟೀಂ ಇಂಡಿಯಾ ಮಾಜಿ ಆಟಗಾರ ಅಗರ್ಕರ್ ಮಾತನಾಡಿದ್ದಾರೆ.
ವಿಶ್ವಕಪ್ಗೋಸ್ಕರ ಈಗಾಗಲೇ ಘೋಷಣೆಯಾಗಿರುವ ತಂಡದಲ್ಲಿ ಯಾವುದೇ ಬದಲಾವಣೆ ಮಾಡಬಾರದು ಎಂಬುದು ನನ್ನ ಅಭಿಪ್ರಾಯ. ತಂಡದ ಕೆಲ ಪ್ಲೇಯರ್ಸ್ ಹೇಳಿಕೊಳ್ಳುವಂತಹ ಪ್ರದರ್ಶನ ನೀಡುತ್ತಿಲ್ಲ ನಿಜ. ಆದರೆ, ಇದು ಕೇವಲ ಒಂದು ಅಥವಾ ಎರಡು ಇನ್ನಿಂಗ್ಸ್ಗೆ ಸಿಮೀತವಾಗಿರುತ್ತದೆ. ಬ್ಯಾಟರ್ ಆಗಲಿ ಬೌಲರ್ ಆಗಲಿ ಖಂಡಿತವಾಗಿ ಉತ್ತಮ ಪ್ರದರ್ಶನ ಮೂಡಿ ಬರುತ್ತದೆ. ಐಪಿಎಲ್ ಮುಗಿಯುವವರೆಗೂ ಅವಕಾಶವಿದ್ದು, ಕಳಪೆ ಫಾರ್ಮ್ನಲ್ಲಿರುವ ಪ್ಲೇಯರ್ಸ್ ಖಂಡಿತವಾಗಿ ಕಮ್ಬ್ಯಾಕ್ ಮಾಡಲಿದ್ದಾರೆ ಎಂದರು.
ಇದನ್ನೂ ಓದಿರಿ: ಪಂಜಾಬ್ ಕಿಂಗ್ಸ್ ತಂಡಕ್ಕೆ ಪ್ಲೇ ಆಫ್ ಪ್ರವೇಶಿಸುವ ಅವಕಾಶ ಇನ್ನೂ ಇದೆ!
ಆಯ್ಕೆ ಸಮಿತಿ ಈಗಾಗಲೇ ಘೋಷಣೆ ಮಾಡಿರುವ ತಂಡದಲ್ಲಿ ಯಾವುದೇ ಬದಲಾವಣೆ ಮಾಡಬಾರದು. ಈಗಾಗಲೇ ಅವರ ಮೇಲೆ ಭರವಸೆ ಇಟ್ಟು ನೀವೂ ತಂಡ ಘೋಷಣೆ ಮಾಡಿದ್ದೀರಿ. ಒಂದು ವೇಳೆ ಬದಲಾವಣೆ ಮಾಡಿದ್ರೆ ಜನರು ನಿಮ್ಮ ಮೇಲಿನ ನಂಬಿಕೆ ಕಳೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.
ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿರುವ ಅನೇಕ ಪ್ಲೇಯರ್ಸ್ ಸದ್ಯ ನಡೆಯುತ್ತಿರುವ ಐಪಿಎಲ್ನಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡುತ್ತಿಲ್ಲ. ಹೀಗಾಗಿ ಆ ಆಟಗಾರರ ಬದಲಿಗೆ ಉತ್ತಮ ಪ್ರದರ್ಶನ ನೀಡಿರುವ ಪ್ಲೇಯರ್ಸ್ಗೆ ಮಣೆ ಹಾಕಬೇಕು ಎಂಬ ಮಾತು ಕೇಳಿ ಬರಲು ಶುರುವಾಗಿದೆ. ವಿಶ್ವಕಪ್ಗೋಸ್ಕರ ಟೀಂ ಇಂಡಿಯಾ ಪ್ರಕಟಗೊಂಡಿದ್ದು, ವಿರಾಟ್ ಕೊಹ್ಲಿ ನೇತೃತ್ವದ ಬಳಗ ಪಾಕ್ ವಿರುದ್ಧ ಮೈದಾನಕ್ಕಿಳಿಯುವ ಮೂಲಕ ಅಭಿಯಾನ ಆರಂಭ ಮಾಡಲಿದೆ.
ವಿಶ್ವಕಪ್ಗಾಗಿ ಟೀಂ ಇಂಡಿಯಾ ತಂಡ
ವಿರಾಟ್ ಕೊಹ್ಲಿ(ಕ್ಯಾಪ್ಟನ್), ರೋಹಿತ್ ಶರ್ಮಾ(ಉ.ನಾಯಕ), ಕೆ.ಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ಭುವನೇಶ್ವರ್ ಕುಮಾರ್, ರಾಹುಲ್ ಚಹರ್, ವರುಣ್, ಮೊಹಮ್ಮದ್ ಶಮಿ, ಅಕ್ಸರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಆರ್. ಜಡೇಜಾ, ಇಶಾನ್ ಕಿಶನ್
ಮೀಸಲು ಆಟಗಾರರು: ಶ್ರೇಯಸ್ ಅಯ್ಯರ್, ದೀಪಕ್ ಚಹರ್, ಶಾರ್ದೂಲ್ ಠಾಕೂರ್