ನವದೆಹಲಿ: ಅಬ್ಬರದ ಬ್ಯಾಟಿಂಗ್ ಪ್ರದರ್ಶನದ ಮೂಲಕ ಮಹಿಳಾ ಟಿ-20 ಕ್ರಿಕೆಟ್ನಲ್ಲಿ ಸಂಚಲನ ಮೂಡಿಸಿರುವ ಟೀಂ ಇಂಡಿಯಾ ಮಹಿಳಾ ಆಟಗಾರ್ತಿ ಶೆಫಾಲಿ ವರ್ಮಾ ಈಗ ಭಾರತ ಪರ ಏಕದಿನ ಮತ್ತು ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇವರು ಹೊಡಿಬಡಿ ಆಟಕ್ಕೆ ಹೆಸರುವಾಸಿಯಾಗಿದ್ದು ಏಕದಿನ ಮತ್ತು ಟೆಸ್ಟ್ ಫಾರ್ಮೆಟ್ನಲ್ಲೂ ತಮ್ಮ ಫಾರ್ಮ್ ಮುಂದುವರೆಸಲು ಕಾತುರರಾಗಿದ್ದಾರೆ.
"ಭಾರತ ಮಹಿಳಾ ತಂಡ ಏಳು ವರ್ಷದ ನಂತರ ಮೊದಲ ಟೆಸ್ಟ್ ಆಡುತ್ತಿದೆ. ನನಗೆ ಈ ತಂಡದಲ್ಲಿ ಅವಕಾಶ ನೀಡಿದ್ದು ಖುಷಿ ಕೊಟ್ಟಿದೆ. ಈ ಪಂದ್ಯದಲ್ಲಿ ನನ್ನಿಂದ ಎಷ್ಟು ಸಾಧ್ಯವೋ ಅಷ್ಟು ಪರಿಶ್ರಮದಿಂದ ಆಡುತ್ತೇನೆ. ಜೊತೆಗೆ ಹೆಚ್ಚು ಕಲಿಕೆಗೆ ಒತ್ತು ಕೊಡುತ್ತಾ, ತಂಡಕ್ಕೆ ಉತ್ತಮ ಕೊಡುಗೆ ನೀಡಲು ಪ್ರಯತ್ನಿಸುತ್ತೇನೆ" ಎಂದು ಅವರು ಹೇಳಿದ್ದಾರೆ.
"ಏಕದಿನ, ಟಿ -20, ಮತ್ತು ಟೆಸ್ಟ್ ಸ್ವರೂಪಗಳ ಕ್ರಿಕೆಟ್ ವಿಭಿನ್ನ ಅನುಭವಗಳನ್ನು ನೀಡುತ್ತದೆ. ನಾನು ಏಕದಿನ ಮತ್ತು ಟೆಸ್ಟ್ ಸ್ವರೂಪಗಳಿಂದ ಹೆಚ್ಚಿನದ್ದನ್ನು ಕಲಿಯಲು ಎದುರು ನೋಡುತ್ತಿದ್ದೇನೆ. ಮುಂಬರುವ ಇಂಗ್ಲೆಂಡ್ ಪ್ರವಾಸದಲ್ಲಿ ತಂಡಕ್ಕೆ ಉತ್ತಮ ಸ್ಕೋರ್ ಮಾಡುವುದು ನನ್ನ ಗುರಿ" ಎಂದು ಶೆಫಾಲಿ ತಿಳಿಸಿದರು.
ಟೆಸ್ಟ್ ಮತ್ತು ಏಕದಿನ ತಂಡ:
ಮಿಥಾಲಿ ರಾಜ್ (ನಾಯಕಿ), ಸ್ಮೃತಿ ಮಂಧಾನ, ಹರ್ಮನ್‌ಪ್ರೀತ್ ಕೌರ್ (ಉಪನಾಯಕಿ), ಪೂನಮ್ ರಾವುತ್, ಪ್ರಿಯಾ ಪೂನಿಯಾ, ದೀಪ್ತಿ ಶರ್ಮಾ, ಜೆಮಿಮಾ ರೊಡ್ರಿಗಸ್, ಶೆಫಾಲಿ ವರ್ಮಾ, ಸ್ನೇಹಾ ರಾಣಾ, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಇಂದ್ರಾಣಿ ರಾಯ್ (ವಿಕೆಟ್ ಕೀಪರ್), ಜೂಲನ್ ಗೋಸ್ವಾಮಿ, ಶಿಖಾ ಪಾಂಡೆ, ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ಪೂನಮ್ ಯಾದವ್, ಏಕ್ತಾ ಬಿಶ್ತ್, ರಾಧಾ ಯಾದವ್.
ಟಿ-20 ತಂಡ:
ಹರ್ಮನ್‌ಪ್ರೀತ್ ಕೌರ್ (ನಾಯಕಿ) ಸ್ಮೃತಿ ಮಂಧಾನ (ಉಪನಾಯಕಿ), ದೀಪ್ತಿ ಶರ್ಮಾ, ಜೆಮಿಮಾ ರೊಡ್ರಿಗಸ್, ಶೆಫಾಲಿ ವರ್ಮಾ, ರಿಚಾ ಘೋಷ್, ಹರ್ಲೀನ್ ಡಿಯೋಲ್, ಸ್ನೇಹಾ ರಾಣಾ, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಇಂದ್ರಾಣಿ ರಾಯ್ (ವಿಕೆಟ್ ಕೀಪರ್), ಶಿಖಾ ಪಾಂಡೆ, ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ಪೂನಮ್ ಯಾದವ್, ಏಕ್ತಾ ಬಿಶ್ತ್, ರಾಧಾ ಯಾದವ್, ಸಿಮ್ರಾನ್ ದಿಲ್ ಬಹದ್ದೂರ್