ದುಬೈ : ನೂತನ ನಾಯಕ ರೋಹಿತ್ ಶರ್ಮಾ ನೇತೃತ್ವದಲ್ಲಿ ಸತತ 3 ಟಿ20 ಸರಣಿಗಳಲ್ಲಿ ಕ್ಲೀನ್ ಸ್ವೀಪ್ ಸಾಧಿಸಿದ ಭಾರತ ತಂಡ 2021-22ನೇ ಆವೃತ್ತಿಯನ್ನು ನಂಬರ್ 1 ತಂಡವಾಗಿ ಮುಗಿಸಿದೆ. ಟೆಸ್ಟ್ ಕ್ರಿಕೆಟ್ನಲ್ಲಿ 2 ಮತ್ತು ಏಕದಿನ ಕ್ರಿಕೆಟ್ನಲ್ಲಿ 4ನೇ ಸ್ಥಾನ ಪಡೆದಿದೆ.
ರೋಹಿತ್ ಶರ್ಮಾ ನೇತೃತ್ವದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್, ವೆಸ್ಟ್ ಇಂಡೀಸ್ ಮತ್ತು ಶ್ರೀಲಂಕಾ ವಿರುದ್ಧ 3 ಟಿ20 ಸರಣಿಗಳನ್ನು ಕ್ಲೀನ್ ಸ್ವೀಪ್ ಸಾಧಿಸಿತ್ತು. ಹಾಗಾಗಿ, 270 ರೇಟಿಂಗ್ ಅಂಕ ಪಡೆದು ಅಗ್ರಸ್ಥಾನ ಉಳಿಸಿಕೊಂಡಿದೆ. 2ನೇ ಸ್ಥಾನದಲ್ಲಿ ಇಂಗ್ಲೆಂಡ್(265) ಮತ್ತು 3ನೇ ಸ್ಥಾನದಲ್ಲಿ ಪಾಕಿಸ್ತಾನ (261) ತಂಡವಿದೆ.
ಮೇ 4, 2022ರ ಆವೃತ್ತಿಯ ಅಂತಿಮ ದಿನವಾಗಿದೆ. ನ್ಯೂಜಿಲ್ಯಾಂಡ್ ಏಕದಿನ ಕ್ರಿಕೆಟ್ನಲ್ಲಿ ನಂಬರ್ 1 ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ 2 ಮತ್ತು 3ನೇ ಸ್ಥಾನ ಪಡೆದಿವೆ. ಟೆಸ್ಟ್ ಶ್ರೇಯಾಂಕದಲ್ಲಿ ಮುಂದೂಡಲ್ಪಟ್ಟಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಸರಣಿ ಕಳೆದ ಆವೃತ್ತಿಗೆ ಒಳಪಟ್ಟಿದ್ದರೂ, ಆಸ್ಟ್ರೇಲಿಯಾ 2ನೇ ಸ್ಥಾನದಲ್ಲಿರುವ ಭಾರತ ತಂಡಕ್ಕಿಂತ 9 ಅಂಕ ಮುಂದಿರುವ ಕಾರಣ ನಂಬರ್ 1 ತಂಡವಾಗಿ ಘೋಷಿಸಲಾಗಿದೆ.
ಪಾಕಿಸ್ತಾನ ತಂಡ ಇಂಗ್ಲೆಂಡ್ ತಂಡವನ್ನು ಹಿಂದಿಕ್ಕಿ ಇಂದು ಬಿಡುಗಡೆಯಾದ ವಾರ್ಷಿಕ ಶ್ರೇಯಾಂಕ ಪಟ್ಟಿಯಲ್ಲಿ 5ನೇ ಸ್ಥಾನವನ್ನು ಅಲಂಕರಿಸಿದೆ. 3 ಮತ್ತು 4ರಲ್ಲಿ ನ್ಯೂಜಿಲ್ಯಾಂಡ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳಿವೆ.
ಇದನ್ನೂ ಓದಿ:ಅಹಮದಾಬಾದ್ನಲ್ಲಿ ಐಪಿಎಲ್ ಫೈನಲ್... ಪುಣೆಯಲ್ಲಿ ವುಮೆನ್ಸ್ ಟಿ-20 ಚಾಲೆಂಜ್