ಮುಂಬೈ (ಮಹಾರಾಷ್ಟ್ರ): 75ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ಆಜಾದಿ ಕಾ ಅಮೃತ ಮಹೋತ್ಸವ ಹಿನ್ನೆಲೆ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮತ್ತು ಟೀಂ ಇಂಡಿಯಾದ ಕ್ರಿಕೆಟರ್ ವಿರಾಟ್ ಕೊಹ್ಲಿ ದೇಶದ ಜನರಿಗೆ ಶುಭಾಶಯ ಕೋರಿದ್ದಾರೆ. ಮುಂಬೈನ ತಮ್ಮ ನಿವಾಸದಲ್ಲಿ ರಾಷ್ಟ್ರಧ್ವಜವನ್ನು ಪ್ರದರ್ಶಿಸಿ ಅವರು ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಾಥ್ ನೀಡಿದರು.
ಈ ವಿಶೇಷ ಘಳಿಗೆಯ ಫೋಟೋಗಳನ್ನು ಅನುಷ್ಕಾ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ. ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ರಾಷ್ಟ್ರಧ್ವಜದ ಮುಂದೆ ಕ್ಯಾಮರಾಗೆ ಪೋಸ್ ನೀಡಿರುವುದನ್ನು ನಾವು ಕಾಣಬಹುದು. ದೇಶದಲ್ಲಿ ಇಂದು 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಪ್ರಪಂಚದಾದ್ಯಂತ ಇರುವ ಎಲ್ಲ ಭಾರತೀಯರಿಗೆ ಸ್ವಾತಂತ್ರ್ಯ ದಿನದ ಶುಭಾಶಯಗಳು. ಜೈ ಹಿಂದ್ ಎಂದು ಶೀರ್ಷಿಕೆ ನೀಡಿದ್ದಾರೆ.
ವಿಶೇಷ ಸಂದರ್ಭದ ಹಿನ್ನೆಲೆಯಲ್ಲಿ ತಾರೆ ಅನುಷ್ಕಾ ಚಿಕಂಕರಿ ಕಸೂತಿ ಕುರ್ತಾ ಧರಿಸಿದ್ದರೆ, ಕೊಹ್ಲಿ ಕಪ್ಪು ಟೀ ಶರ್ಟ್ ಧರಿಸಿ ಕ್ಯಾಶುಯಲ್ ಲುಕ್ನಲ್ಲಿ ಕಾಣಿಸಿಕೊಂಡರು. ಪತ್ನಿಯ ಪೋಸ್ಟ್ಗೆ ಪತಿ ಕೊಹ್ಲಿ ಕೂಡ ಎಲ್ಲರಿಗೂ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದ್ದಾರೆ. ಸ್ವಾತಂತ್ರ್ಯ ಬಂದು 75 ವರ್ಷಗಳಾದವು. ಭಾರತೀಯನಾಗಿರುವುದಕ್ಕೆ ನಾನು ಹೆಮ್ಮೆಪಡುತ್ತೇನೆ. ಎಲ್ಲರಿಗೂ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ಜೈ ಹಿಂದ್ ಎಂದು ಅವರು ಕೂಡ ಬರೆದುಕೊಂಡಿದ್ದಾರೆ.
ಇದನ್ನೂ ಓದಿ: ಆಂಟಿಲಿಯಾ ಪ್ರಕರಣದ ಬಳಿಕ ಮತ್ತೆ ಅಂಬಾನಿ ಕುಟುಂಬಕ್ಕೆ ಬೆದರಿಕೆ ಕರೆ