ಮೆಲ್ಬೋರ್ನ್(ಆಸ್ಟ್ರೇಲಿಯಾ): ಶ್ರೀಲಂಕಾ ವಿರುದ್ಧ ಆರಂಭಗೊಳ್ಳಲಿರುವ ಟಿ-20 ಕ್ರಿಕೆಟ್ ಸರಣಿಗೆ ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಘೋಷಣೆಯಾಗಿದೆ. ಮುಂಬರುವ ವಿಶ್ವಕಪ್ ಗಮನದಲ್ಲಿಟ್ಟುಕೊಂಡು ಸ್ಫೋಟಕ ಬ್ಯಾಟರ್ ಡೇವಿಡ್ ವಾರ್ನರ್ ಹಾಗೂ ಮಾಜಿ ಕ್ಯಾಪ್ಟನ್ ಸ್ಟೀವ್ ಸ್ಮಿತ್ಗೆ ಅವಕಾಶ ನೀಡಲಾಗಿದೆ. ಕೊಲಂಬೊದ ಎಸ್. ಪ್ರೇಮದಾಸ್ ಮೈದಾನದಲ್ಲಿ ಎಲ್ಲ ಪಂದ್ಯಗಳು ನಡೆಯಲಿವೆ.
ಈ ಹಿಂದೆ ಫೆಬ್ರವರಿ ತಿಂಗಳಲ್ಲಿ ಶ್ರೀಲಂಕಾ ಹಾಗೂ ಪಾಕಿಸ್ತಾನದ ವಿರುದ್ಧದ ಟಿ-20 ಸರಣಿಯಿಂದ ಹೊರಗುಳಿದಿದ್ದ ವಾರ್ನರ್ ಹಾಗೂ ಸ್ಮಿತ್ ಇದೀಗ ತಂಡಕ್ಕೆ ಕಮ್ಬ್ಯಾಕ್ ಮಾಡಿದ್ದಾರೆ. ಉಳಿದಂತೆ 2021ರ ವಿಶ್ವಕಪ್ನಲ್ಲಿ ಕಣಕ್ಕಿಳಿದಿದ್ದ 11 ಪ್ಲೇಯರ್ಗಳಿಗೆ ಮಣೆ ಹಾಕಲಾಗಿದೆ.
ಕಳೆದ ಕೆಲ ದಿನಗಳ ಹಿಂದೆ ಮುಕ್ತಾಯಗೊಂಡಿರುವ ಐಪಿಎಲ್ನಲ್ಲಿ ಡೇವಿಡ್ ವಾರ್ನರ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಬ್ಯಾಟ್ ಬೀಸಿದ್ದರು. 12 ಪಂದ್ಯಗಳಿಂದ 432ರನ್ಗಳಿಕೆ ಮಾಡಿದ್ದ ವಾರ್ನರ್, ಇದೀಗ ತಂಡಕ್ಕೆ ಮರಳಿದ್ದಾರೆ. ಆದರೆ, ಕಳೆದ ಕೆಲ ತಿಂಗಳಿಂದ ಟಿ-20 ಕ್ರಿಕೆಟ್ನಿಂದ ಹೊರಗುಳಿದಿದ್ದ ಸ್ಮಿತ್ ಈ ಸಲ ಚಾನ್ಸ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ: 34ನೇ ವಸಂತಕ್ಕೆ ಕಾಲಿಟ್ಟ ರಹಾನೆ.. ವಿಭಿನ್ನ ರೀತಿಯಲ್ಲಿ ವಿಶ್ ಮಾಡಿದ ಸೆಹ್ವಾಗ್
ಪ್ರಮುಖವಾಗಿ ಶ್ರೀಲಂಕಾ ಸರಣಿಯಲ್ಲಿ ವೇಗದ ಬೌಲರ್ ಪ್ಯಾಟ್ ಕಮ್ಮಿನ್ಸ್ ಹಾಗೂ ಆ್ಯಡಂ ಜಂಪಾ ಹೊರಗುಳಿದಿದ್ದಾರೆ. ಇವರ ಸ್ಥಾನಕ್ಕೆ ಕೇನ್ ರಿಚರ್ಡ್ಸನ್ ಹಾಗೂ ಆಷ್ಟನ್ ಆಗರ್ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ನಾಳೆಯ ಪಂದ್ಯದಲ್ಲಿ ವಾರ್ನರ್ ಹಾಗೂ ಸ್ಮಿತ್ ಕಣಕ್ಕಿಳಿಯಲಿದ್ದಾರೆ.
ಆಸ್ಟ್ರೇಲಿಯಾ ತಂಡ ಇಂತಿದೆ: ಆರನ್ ಫಿಂಚ್(ಕ್ಯಾಪ್ಟನ್), ಸೇನ್ ಅಬಾಟ್, ಆಷ್ಟನ್ ಅಗರ್,ಜೋಸ್ ಹ್ಯಾಜಲ್ವುಡ್, ಜೋಸ್ ಇಂಗ್ಲಿಸ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್ವೆಲ್, ರಿಚರ್ಡ್ಸನ್, ಕೇನ್ ರಿಚರ್ಡ್ಸನ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೋಯ್ನಿಸ್, ಮಿಚೆನ್ ಸ್ವೆಪ್ಸನ್, ಡೇವಿಡ್ ವಾರ್ನರ್, ಮ್ಯಾಥ್ ವಾರ್ನರ್
ನಾಳೆಯ ಪಂದ್ಯಕ್ಕೆ ತಂಡ : ಆರನ್ ಫಿಂಚ್ (ಕ್ಯಾಪ್ಟನ್), ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್ವೆಲ್, ಸ್ಟೀವ್ ಸ್ಮಿತ್, ಮಾರ್ಕಸ್ ಸ್ಟೊಯ್ನಿಸ್, ಮ್ಯಾಥ್ಯೂ ವೇಡ್, ಆಷ್ಟನ್ ಅಗರ್, ಮಿಚೆಲ್ ಸ್ಟಾರ್ಕ್, ಕೇನ್ ರಿಚರ್ಡ್ಸನ್, ಜೋಸ್ ಹ್ಯಾಜಲ್ವುಡ್