ETV Bharat / sports

ODI Match: ವಿಂಡೀಸ್​ ವಿರುದ್ಧ 6 ವಿಕೆಟ್​ಗಳ ಜಯ ಸಾಧಿಸಿದ ಆಸ್ಟ್ರೇಲಿಯಾ - Australia Cricket News

ಆಸ್ಟ್ರೇಲಿಯಾ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೂರು ಪಂದ್ಯಗಳ ಸರಣಿಯ ನಿರ್ಣಾಯಕ ಆಟದಲ್ಲಿ ಆಸ್ಟ್ರೇಲಿಯಾ ತಂಡ ಆರು ವಿಕೆಟ್​ಗಳ ಗೆಲುವು ಸಾಧಿಸಿದೆ.

Australia beats West Indies
ಆಸ್ಟ್ರೇಲಿಯಾ ಮತ್ತು ವೆಸ್ಟ್ ಇಂಡೀಸ್
author img

By

Published : Jul 27, 2021, 11:47 AM IST

ಬ್ರಿಡ್ಜ್‌ಟೌನ್: ಮೂರು ಪಂದ್ಯಗಳ ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ವೆಸ್ಟ್ ಇಂಡೀಸ್ ವಿರುದ್ಧ ಆರು ವಿಕೆಟ್‌ಗಳ ಗೆಲುವು ಸಾಧಿಸಿದೆ. ಮ್ಯಾಥ್ಯೂ ವೇಡ್ ತಮ್ಮ 11ನೇ ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ್ದು, 52 ಎಸೆತಗಳಲ್ಲಿ 51 ರನ್​ ಗಳಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡದ ನಾಯಕ ಕಿರಾನ್​ ಪೊಲಾರ್ಡ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದರು. ಬಳಿಕ 31 ಓವರ್​ನಲ್ಲಿ ತನ್ನೆಲ್ಲಾ ವಿಕೆಟ್​ಗಳನ್ನು ಕಳೆದುಕೊಂಡು 152 ರನ್​ ಗಳಿಸಿ ಆಸ್ಟೇಲಿಯಾಗೆ 153 ರನ್​ಗಳ ಟಾರ್ಗೆಟ್​ ನೀಡಿದರು. ಇನ್ನು ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡ 4 ವಿಕೆಟ್​ ನಷ್ಟಕ್ಕೆ 153 ರನ್​ ಗಳಿಸಿ ಜಯ ಸಾಧಿಸಿತು.

ಕೊರೊನಾ ಪ್ರೋಟೋಕಾಲ್‌ಗಳ ಕಾರಣದಿಂದಾಗಿ ಎರಡನೇ ಪಂದ್ಯವನ್ನು ಎರಡು ದಿನಗಳವರೆಗೆ ಮುಂದೂಡಲಾಗಿತ್ತು. ಹೀಗಾಗಿ ಕಳೆದ ಶನಿವಾರ ತಂಡದ ಎಲ್ಲ ಸದಸ್ಯರು ಮತ್ತು ಸಿಬ್ಬಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ನೆಗೆಟಿವ್​ ವರದಿ ಬಂದಿದೆ. ಈ ಹಿನ್ನೆಲೆಯಲ್ಲಿ ಪಂದ್ಯ ನಡೆಸಲಾಗಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.