ನವದೆಹಲಿ: ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆಯೋಜನೆಗೊಂಡಿರುವ ಐಸಿಸಿ ಟಿ - 20 ವಿಶ್ವಕಪ್ಗಾಗಿ 15 ಸದಸ್ಯರನ್ನೊಳಗೊಂಡ ಭಾರತೀಯ ತಂಡ ಪ್ರಕಟಗೊಂಡಿದ್ದು, ವಿರಾಟ್ ಕೊಹ್ಲಿ ತಂಡವನ್ನ ಮುನ್ನಡೆಸಲಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಉಪಾಧ್ಯಕ್ಷ ರಾಜೀವ್ ಶುಕ್ಲಾ ಟಿ-20 ವಿಶ್ವಕಪ್ 2021ಕ್ಕೆ 'ಸಮತೋಲಿತ ತಂಡ'ವನ್ನು ಆಯ್ಕೆ ಮಾಡಲಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಅವರನ್ನು ತಂಡದ ಮಾರ್ಗದರ್ಶಕರನ್ನಾಗಿ ನೇಮಿಸುವುದು ಉತ್ತಮ ನಿರ್ಧಾರ. ಧೋನಿಯ ಅನುಭವವು ಬಹಳಷ್ಟು ಟೀಂ ಇಂಡಿಯಾಗೆ ಸಾಕಷ್ಟು ಸಹಾಯ ಮಾಡುತ್ತದೆ ಎಂದು ರಾಜೀವ್ ಶುಕ್ಲಾ ಹೇಳಿದ್ದಾರೆ.
ಇದನ್ನೂ ಓದಿ: ಬಾಕ್ಸಿಂಗ್ಗೆ ಕಮೆಂಟೆಟರ್ ಆಗಲಿರುವ ಅಮೆರಿಕದ ಮಾಜಿ ಅಧ್ಯಕ್ಷ ಟ್ರಂಪ್