ETV Bharat / sports

ICC World Cup Cricket 2023: ಒಂದಲ್ಲ ಆರು ಪಂದ್ಯಗಳ ವೇಳಾಪಟ್ಟಿ ಬದಲಾವಣೆಗೆ ಬಿಸಿಸಿಐ ಚಿಂತನೆ!? - ಚೆನ್ನೈನಲ್ಲಿ ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ

ICC World Cup Cricket 2023: ಭಾರತ ಪಾಕಿಸ್ತಾನ ಮಾತ್ರವಲ್ಲದೇ ಹಲವು ಪಂದ್ಯಗಳ ದಿನಾಂಕವನ್ನು ಬದಲಾಯಿಸಬಹುದು ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಈಗಾಗಲೇ ಸೂಚಿಸಿದ್ದರು. ಇದಕ್ಕಾಗಿ ಐಸಿಸಿ ಅನುಮೋದನೆಗೆ ಕಾಯಲಾಗುತ್ತಿದೆ.

BCCI 6 matches schedule Change ICC World Cup Cricket 2023  Board of Control for Cricket in India  BCCI  icc world cup cricket 2023  BCCI Secretary Jay Shah  ICC World Cup Cricket 2023  ಆರು ಪಂದ್ಯಗಳ ವೇಳಾಪಟ್ಟಿ ಬದಲಾವಣೆಗೆ ಬಿಸಿಸಿಐ ಚಿಂತನೆ  ಹಲವು ಪಂದ್ಯಗಳ ದಿನಾಂಕ  ಬಿಸಿಸಿಐ ಕಾರ್ಯದರ್ಶಿ ಜಯ್ ಶಾ  ಭಾರತದಲ್ಲಿ ನಡೆಯಲಿರುವ ಐಸಿಸಿ ವಿಶ್ವಕಪ್ ಕ್ರಿಕೆಟ್ 2023  6 ಪಂದ್ಯಗಳ ವೇಳಾಪಟ್ಟಿಯಲ್ಲಿ ಬದಲಾವಣೆ  ಕ್ರೀಡೆಗೆ ಸಂಬಂಧಿಸಿದ ಜನರಿಂದ ಪಡೆದ ಮಾಹಿತಿ  ಚೆನ್ನೈನಲ್ಲಿ ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ  ಇಂಗ್ಲೆಂಡ್ ಮತ್ತು ಅಫ್ಘಾನಿಸ್ತಾನ
ಒಂದಲ್ಲ ಆರು ಪಂದ್ಯಗಳ ವೇಳಾಪಟ್ಟಿ ಬದಲಾವಣೆಗೆ ಬಿಸಿಸಿಐ ಚಿಂತನೆ!?
author img

By

Published : Aug 3, 2023, 2:20 PM IST

ನವದೆಹಲಿ: ಭಾರತದಲ್ಲಿ ನಡೆಯಲಿರುವ ಐಸಿಸಿ ವಿಶ್ವಕಪ್ ಕ್ರಿಕೆಟ್ 2023ರಲ್ಲಿ (ICC World Cup Cricket 2023) ಒಂದಲ್ಲ ಎರಡಲ್ಲ 6 ಪಂದ್ಯಗಳ ವೇಳಾಪಟ್ಟಿಯಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ. ಇದರಲ್ಲಿ ಪಾಕಿಸ್ತಾನ ತಂಡ ಆಡುವ ಎರಡು ಪಂದ್ಯಗಳು ಸೇರಿವೆ. ಇದಲ್ಲದೇ ಇನ್ನು ಕೆಲವು ಪಂದ್ಯಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡುವ ಬಗ್ಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಮಾತನಾಡುತ್ತಿದೆ. ಈ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಈಗಾಗಲೇ ಖಚಿತಪಡಿಸಿದ್ದರು.

ಮಾಧ್ಯಮ ಮೂಲಗಳು ಮತ್ತು ಕ್ರೀಡೆಗೆ ಸಂಬಂಧಿಸಿದ ಜನರಿಂದ ಪಡೆದ ಮಾಹಿತಿಯಲ್ಲಿ, ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಸೇರಿದಂತೆ ಆರಕ್ಕೂ ಹೆಚ್ಚು ಪಂದ್ಯಗಳ ವೇಳಾಪಟ್ಟಿಯಲ್ಲಿ ಬದಲಾವಣೆಯ ಬಗ್ಗೆ ಮಾತನಾಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಅಕ್ಟೋಬರ್ 15 ರಂದು ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಈಗ ಒಂದು ದಿನ ಮುಂಚಿತವಾಗಿ ಅಕ್ಟೋಬರ್ 14 ರಂದು ನಡೆಯಲಿದೆ. ಇದಕ್ಕೆ ಪಾಕಿಸ್ತಾನದಿಂದಲೂ ಗ್ರೀನ್ ಸಿಗ್ನಲ್ ಸಿಗುವ ನಿರೀಕ್ಷೆ ಇದೆ. ಆದರೂ ಪಂದ್ಯದ ಸ್ಥಳವನ್ನು ಬದಲಾಯಿಸಲಾಗುವುದಿಲ್ಲ. ಇದಲ್ಲದೇ ಅಕ್ಟೋಬರ್ 12 ರಂದು ನಡೆಯಬೇಕಿದ್ದ ಪಾಕಿಸ್ತಾನದ ಪಂದ್ಯವು ಅಕ್ಟೋಬರ್ 10 ರಂದು ಹೈದರಾಬಾದ್‌ನಲ್ಲಿ ನಡೆಯುವ ಸಾಧ್ಯತೆಯಿದೆ. ಆದರೆ ಬಿಸಿಸಿಐ ಸ್ಥಳ ಬದಲಾವಣೆ ಕುರಿತು ಎಲ್ಲಿಯೂ ಉಲ್ಲೇಖಿಸಿಲ್ಲ. ಕೇವಲ ದಿನಾಂಕದ ಬದಲಾವಣೆಯ ಬಗ್ಗೆ ಮಾತನಾಡಲಾಗುತ್ತಿದೆ.

ಇದಲ್ಲದೇ ಅಕ್ಟೋಬರ್ 11 ರಂದು ಚೆನ್ನೈನಲ್ಲಿ ನ್ಯೂಜಿಲ್ಯಾಂಡ್​ ಮತ್ತು ಬಾಂಗ್ಲಾದೇಶದೊಂದಿಗೆ ಪಂದ್ಯಗಳಿವೆ ಎಂದು ಹೇಳಲಾಗುತ್ತಿದೆ. ಎರಡನೇ ದಿನ ದೆಹಲಿಯಲ್ಲಿ ಇಂಗ್ಲೆಂಡ್ ಮತ್ತು ಅಫ್ಘಾನಿಸ್ತಾನ ನಡುವಿನ ಪಂದ್ಯವೂ ಇದೆ. ಇಂತಹ ಪರಿಸ್ಥಿತಿಯಲ್ಲಿ ಒಂದನ್ನು ಬದಲಾಯಿಸುವ ಮಾತು ಕೇಳಿ ಬರುತ್ತಿದೆ. ಈ ಬಗ್ಗೆ ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ. ಬಿಸಿಸಿಐನ ಪ್ರಸ್ತಾವನೆಯನ್ನು ಐಸಿಸಿ ತನ್ನ ಪರವಾಗಿ ದೃಢೀಕರಿಸಬೇಕಾಗಿದೆ. ಅದರ ನಂತರವೇ ಹೊಸ ವೇಳಾಪಟ್ಟಿ ಲಭ್ಯವಾಗಲಿದೆ.

ಭಾರತದಲ್ಲಿ 5 ಅಕ್ಟೋಬರ್ 2023 ರಿಂದ ನವೆಂಬರ್ 19 ರವರೆಗೆ ವಿಶ್ವಕಪ್​ ಪಂದ್ಯಗಳು ನಡೆಯಲಿದೆ. ಮೊದಲ ಹಾಗೂ ಅಂತಿಮ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಟೂರ್ನಿಯ ಮೊದಲ ಪಂದ್ಯ ಇಂಗ್ಲೆಂಡ್ ಮತ್ತು ನ್ಯೂಜಿಲ್ಯಾಂಡ್​ ಮಧ್ಯೆ ನಡೆಯಲಿದ್ದು, ಇದಕ್ಕಾಗಿ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ಸಜ್ಜುಗೊಳ್ಳುತ್ತಿದೆ. ನವೆಂಬರ್ 19 ರಂದು ಅದೇ ಮೈದಾನದಲ್ಲಿ ಫೈನಲ್ ಪಂದ್ಯವೂ ನಡೆಯಲಿದೆ. ಇದಲ್ಲದೆ ಎರಡು ಸೆಮಿಫೈನಲ್ ಪಂದ್ಯಗಳು ಕ್ರಮವಾಗಿ ಮುಂಬೈ ಮತ್ತು ಕೋಲ್ಕತ್ತಾದಲ್ಲಿ ನವೆಂಬರ್ 15 ಮತ್ತು 16 ರಂದು ನಡೆಯಲಿವೆ.

ಓದಿ: World Cup: ಭಾರತದ ವಿರುದ್ಧ ಆಡಲು ಒಪ್ಪಿಕೊಂಡ ಪಾಕಿಸ್ತಾನ.. ಅಕ್ಟೋಬರ್​ 15ರ ಬದಲು 14ಕ್ಕೆ ಮೊದಲ ಪಂದ್ಯ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.