ಬಹುನಿರೀಕ್ಷಿತ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯಕ್ಕೆ ಭಾರತ ತಂಡವನ್ನು ಬಿಸಿಸಿಐ ಇಂದು ಪ್ರಕಟಿಸಿದೆ. ನಾಯಕ ರೋಹಿತ್ ಶರ್ಮಾ ನೇತೃತ್ವದಲ್ಲಿ ಬಲಿಷ್ಠ ತಂಡವನ್ನು ಕಣಕ್ಕಿಳಿಸಲಿದೆ. 15 ತಿಂಗಳ ಬಳಿಕ ಅಜಿಂಕ್ಯಾ ರಹಾನೆ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಬೆನ್ನುನೋವಿನ ಕಾರಣಕ್ಕಾಗಿ ಶ್ರೇಯಸ್ ಅಯ್ಯರ್ ತಂಡದಿಂದ ಹೊರಬಿದ್ದಿದ್ದಾರೆ.
ಕಳೆದ ಬಾರಿಯ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಪ್ರಶಸ್ತಿ ತಪ್ಪಿಸಿಕೊಂಡಿದ್ದ ಭಾರತ ಮತ್ತೆ ಫೈನಲ್ಗೇರಿದೆ. ಈ ಬಾರಿ ಪ್ರಶಸ್ತಿ ಜಯಿಸುವ ಹುಮ್ಮಸ್ಸಿನನಲ್ಲಿರುವ ತಂಡಕ್ಕೆ ಆಸ್ಟ್ರೇಲಿಯಾ ಎದುರಾಳಿಯಾಗಿದೆ. ಕಳೆದ ಬಾರಿ ನ್ಯೂಜಿಲ್ಯಾಂಡ್ ತಂಡವನ್ನು ಎದುರಿಸಿ ಸೋಲು ಕಂಡಿತ್ತು.
ರೋಹಿತ್ ಶರ್ಮಾ ತಂಡದ ನಾಯಕತ್ವ ವಹಿಸಿದ್ದರೆ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಶುಭಮನ್ಗಿಲ್, ಚೇತೇಶ್ವರ ಪೂಜಾರಾ ಬ್ಯಾಟಿಂಗ್ ಬೆನ್ನೆಲುಬಾದರೆ, ಸ್ಪಿನ್ ವಿಭಾಗದಲ್ಲಿ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಇದ್ದಾರೆ. ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ ಮತ್ತು ಜಯದೇವ್ ಉನದ್ಕತ್ ವೇಗದ ಬೌಲಿಂಗ್ ಶಕ್ತಿಯಾಗಿದ್ದಾರೆ.
-
BREAKING: India name their squad for the World Test Championship Final.#WTC23 | Details 👇
— ICC (@ICC) April 25, 2023 " class="align-text-top noRightClick twitterSection" data="
">BREAKING: India name their squad for the World Test Championship Final.#WTC23 | Details 👇
— ICC (@ICC) April 25, 2023BREAKING: India name their squad for the World Test Championship Final.#WTC23 | Details 👇
— ICC (@ICC) April 25, 2023
15 ತಿಂಗಳ ಬಳಿಕ ವಾಪಸ್: ಭಾರತ ತಂಡದ ಉಪನಾಯಕರಾಗಿದ್ದ ಅಜಿಂಕ್ಯಾ ರಹಾನೆ ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಯ ವೇಳೆ ನೀಡಿದ ನೀರಸ ಪ್ರದರ್ಶನದ ಬಳಿಕ ತಂಡದಿಂದ ಹೊರಬಿದ್ದಿದ್ದರು. ಅದಾದ ಬಳಿಕ ಅವರು ಒಂದೂವರೆ ವರ್ಷದಿಂದ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದರು. ಐಪಿಎಲ್ನಲ್ಲಿ ಭರ್ಜರಿ ಪ್ರದರ್ಶನ ತೋರುತ್ತಿದ್ದು, ತಂಡಕ್ಕೆ ಮರು ಸೇರ್ಪಡೆಯಾಗಿದ್ದಾರೆ. ರಹಾನೆ 2021 ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ನ್ಯೂಜಿಲ್ಯಾಂಡ್ ವಿರುದ್ಧದ ಎರಡು ಇನಿಂಗ್ಸ್ನಲ್ಲಿ 49 ಮತ್ತು 15 ರನ್ ಗಳಿಸಿದ್ದರು.
ಶ್ರೇಯಸ್ ಅಯ್ಯರ್ ಔಟ್: ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಬೆನ್ನುನೋವಿಗೆ ತುತ್ತಾಗಿದ್ದು, ಕಳೆದ ಕೆಲ ದಿನಗಳಿಂದ ಕ್ರಿಕೆಟ್ನಿಂದ ದೂರವುಳಿದಿದ್ದಾರೆ. ಚೇತರಿಸಿಕೊಳ್ಳಲು ಇನ್ನೂ ಸಮಯಬೇಕಿರುವ ಕಾರಣ ಅವರನ್ನು ತಂಡದಿಂದ ಕೈಬಿಡಲಾಗಿದೆ. ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪ್ರವೇಶ ನಿರ್ಧರಿಸುವ ಭಾರತದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಸರಣಿಯಲ್ಲಿ ಅಯ್ಯರ್ ಉತ್ತಮ ಪ್ರದರ್ಶನ ನೀಡಿದ್ದರು.
ಶ್ರೇಯಸ್ ಅಯ್ಯರ್ ಬದಲಾಗಿ ಟಿ20 ವಿಶ್ವ ನಂಬರ್ 1 ಆಟಗಾರ ಸೂರ್ಯಕುಮಾರ್ ಯಾದವ್ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದರು. ಆದರೆ, ಯಾದವ್ ಆಸೀಸ್ ವಿರುದ್ಧದ ಟೆಸ್ ಮತ್ತು ಏಕದಿನ ಸರಣಿಯಲ್ಲಿ ವಿಫಲವಾದ ಕಾರಣ ಅವರನ್ನು ತಂಡಕ್ಕೆ ಪರಿಗಣಿಸಿಲ್ಲ. ಇದಲ್ಲದೇ, ಗಾಯಾಳುವಾಗಿರುವ ಜಸ್ಪ್ರೀತ್ ಬೂಮ್ರಾ ಇನ್ನೂ ಗುಣಮುಖವಾಗಿಲ್ಲ.
-
Your 17-strong squad ready for a massive few months abroad 💪 pic.twitter.com/yjrSdG9kyn
— Cricket Australia (@CricketAus) April 19, 2023 " class="align-text-top noRightClick twitterSection" data="
">Your 17-strong squad ready for a massive few months abroad 💪 pic.twitter.com/yjrSdG9kyn
— Cricket Australia (@CricketAus) April 19, 2023Your 17-strong squad ready for a massive few months abroad 💪 pic.twitter.com/yjrSdG9kyn
— Cricket Australia (@CricketAus) April 19, 2023
ಆಸ್ಟ್ರೇಲಿಯಾ ತಂಡ ಈಗಾಗಲೇ ಫೈನಲ್ ಸೆಣಸಾಟಕ್ಕೆ 15 ಆಟಗಾರರ ತಂಡವನ್ನು ಪ್ರಕಟ ಮಾಡಿದೆ. ಜೂನ್ 7 ರಿಂದ ಲಂಡನ್‌ನ ಓವಲ್‌ನಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯ ನಡೆಯಲಿದೆ.
ಭಾರತ ಟೆಸ್ಟ್ ತಂಡ ಇಂತಿದೆ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ್, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಲ್ ರಾಹುಲ್, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್.
ಆಸ್ಟ್ರೇಲಿಯಾ ಟೆಸ್ಟ್ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಡೇವಿಡ್ ವಾರ್ನರ್, ಸ್ಟೀವನ್ ಸ್ಮಿತ್, ಸ್ಕಾಟ್ ಬೋಲ್ಯಾಂಡ್, ಮಾರ್ನಸ್ ಲಬುಶೇನ್, ಉಸ್ಮಾನ್ ಖವಾಜಾ, ಅಲೆಕ್ಸ್ ಕೇರಿ (ವಿಕೆಟ್ ಕೀಪರ್), ಟ್ರಾವಿಸ್ ಹೆಡ್, ಕ್ಯಾಮರೂನ್ ಗ್ರೀನ್, ಮಾರ್ಕಸ್ ಹ್ಯಾರಿಸ್, ಜೋಶ್ ಹೇಜಲ್‌ವುಡ್, ಜೋಶ್ ಇಂಗ್ಲಿಸ್, ನಾಥನ್ ಲಿಯಾನ್, ಮಿಚೆಲ್ ಮಾರ್ಷ್, ಟಾಡ್ ಮರ್ಫಿ, ಮ್ಯಾಟ್ ರೆನ್‌ಶಾ, ಮಿಚೆಲ್ ಸ್ಟಾರ್ಕ್.
ಓದಿ:ಜೂನ್ 7 ರಿಂದ ಓವಲ್‌ನಲ್ಲಿ ICC ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್