ದುಬೈ: ಪಂಜಾಬ್ ಕಿಂಗ್ಸ್ ವಿರುದ್ಧ ಮಂಗಳವಾರ ನಡೆದ ಪಂದ್ಯದ ವೇಳೆ ನಿಧಾನಗತಿಯ ಬೌಲಿಂಗ್ ಕಾಯ್ದುಕೊಂಡಿದ್ದಕ್ಕಾಗಿ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್‌ಗೆ ಐಪಿಎಲ್ ಮಂಡಳಿ 12 ಲಕ್ಷ ರೂಪಾಯಿ ದಂಡ ವಿಧಿಸಿದೆ.
ನಿನ್ನೆ ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಮೊದಲು ಬ್ಯಾಟಿಂಗ್ ಮಾಡಿ 185 ರನ್ಗಳಿಸಿತ್ತು. 186 ರನ್ಗುರಿ ಬೆನ್ನತ್ತಿದ ಪಂಜಾಬ್ ತಂಡ 183 ರನ್ಗಳಿಸಲಷ್ಟೇ ಶಕ್ತವಾಗಿ 2 ರನ್ಗಳ ಸೋಲು ಕಂಡಿದೆ. ರೋಚಕವಾಗಿದ್ದ ಈ ಪಂದ್ಯದಲ್ಲಿ ರಾಜಸ್ಥಾನ್ ತನ್ನ ನಿಗದಿತ ಸಮಯದಲ್ಲಿ ಓವರ್ ಪೂರ್ಣಗೊಳಿಸುವುದರಲ್ಲಿ ಎಡವಿದ್ದು ನಾಯಕ ಸಾಮ್ಸನ್ಗೆ ದಂಡ ವಿಧಿಸಲಾಗಿದೆ.
'ಸೆಪ್ಟೆಂಬರ್ 21ರಂದು ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿ ಬೌಲಿಂಗ್ ಪ್ರದರ್ಶನ ತೋರಿರುವುದರಿಂದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸಾಮ್ಸನ್ ಅವರಿಗೆ ತಂಡ ವಿಧಿಸಲಾಗಿದೆ' ಎಂದು ಐಪಿಎಲ್ ಹೇಳಿಕೆ ಬಿಡುಗಡೆ ಮಾಡಿದೆ.
ಇದನ್ನೂ ಓದಿ: Ipl 2021 : ರಾಜಸ್ಥಾನ ರಾಯಲ್ಸ್ಗೆ ಪಂಜಾಬ್ ಕಿಂಗ್ಸ್ ವಿರುದ್ಧ ರೋಚಕ ಗೆಲುವು