ETV Bharat / sports

ಟಿ20 ಕ್ರಿಕೆಟ್​ನಲ್ಲಿ ರೋಹಿತ್ ಶರ್ಮಾ ದಾಖಲೆ ಸರಿಗಟ್ಟಿದ ವಿರಾಟ್ ಕೊಹ್ಲಿ

author img

By

Published : Dec 9, 2020, 9:17 PM IST

Updated : Dec 9, 2020, 10:28 PM IST

ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ಅರ್ಧಶತಕ ಬಾರಿಸಿದ ವಿರಾಟ್ ಕೊಹ್ಲಿ, ಹಿಟ್‌ಮ್ಯಾನ್‌ ರೋಹಿತ್ ಶರ್ಮಾ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ..

Skipper Virat Kohli Equals Rohit Sharma in T20I Record
ರೋಹಿತ್ ಶರ್ಮಾ ದಾಖಲೆ ಸರಿಗಟ್ಟಿದ ವಿರಾಟ್ ಕೊಹ್ಲಿ

ಸಿಡ್ನಿ(ಆಸ್ಟ್ರೇಲಿಯಾ): ಆಸೀಸ್ ವಿರುದ್ಧದ ಸರಣಿಯಲ್ಲಿ ಹಲವು ದಾಖಲೆ ಬರೆದಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಅಂತಿಮ ಟಿ20 ಪಂದ್ಯದಲ್ಲಿ ಮತ್ತೊಂದು ದಾಖಲೆ ಬರೆದಿದ್ದಾರೆ.

ಮೂರನೇ ಟಿ20 ಪಂದ್ಯದಲ್ಲಿ ಅರ್ಧಶತಕ ಬಾರಿಸಿದ ವಿರಾಟ್, ರೋಹಿತ್ ಶರ್ಮಾ ಅವರ 50ಕ್ಕೂ ಹೆಚ್ಚು ರನ್​ಗಳ ದಾಖಲೆಯನ್ನು ಸರಿಗಟ್ಟಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ 25 ಬಾರಿ 50ಕ್ಕಿಂತ ಹೆಚ್ಚು ರನ್​ ಸಿಡಿಸಿದ್ದಾರೆ.

Skipper Virat Kohli Equals Rohit Sharma in T20I Record
ವಿರಾಟ್ ಕೊಹ್ಲಿ

ರೋಹಿತ್ ಶರ್ಮಾ 25 ಬಾರಿ 50ಕ್ಕಿಂತ ಹೆಚ್ಚು ರನ್ ಗಳಿಸಲು 100 ಇನ್ನಿಂಗ್ಸ್​ ತೆಗೆದುಕೊಂಡಿದ್ರೆ, ವಿರಾಟ್ ಕೊಹ್ಲಿ 79 ಇನ್ನಿಂಗ್ಸ್​ಗಳಲ್ಲೇ 25 ಬಾರಿ 50ಕ್ಕಿಂತ ಹೆಚ್ಚು ರನ್ ಸಿಡಿಸಿ ರೋಹಿತ್ ದಾಖಲೆ ಸರಿಗಟ್ಟಿದ್ದಾರೆ. ಆಸೀಸ್‌ ತಂಡದ ಸ್ಫೋಟಕ ಆಟಗಾರ ಡೇವಿಡ್ ವಾರ್ನರ್ 19 ಬಾರಿ 50ಕ್ಕಿಂತ ಹೆಚ್ಚು ರನ್ ಸಿಡಿಸಿ 3ನೇ ಸ್ಥಾನದಲ್ಲಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ಮಂಗಳವಾರ ನಡೆದ ಅಂತಿಮ ಟಿ-20 ಪಂದ್ಯದಲ್ಲಿ ಟೀಂ ಇಂಡಿಯಾ 12 ರನ್​ಗಳಿಂದ ಸೋಲು ಕಂಡರೂ ಮೊದಲೆರಡು ಪಂದ್ಯಗಳಲ್ಲಿ ಜಯ ಸಾಧಿಸಿದ್ದರಿಂದ 2-1 ಅಂತರದಲ್ಲಿ ಸರಣಿ ಗೆದ್ದುಕೊಂಡಿದೆ.

Last Updated : Dec 9, 2020, 10:28 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.