ಚೆನ್ನೈ: ಭಾರತೀಯ ಕ್ರಿಕೆಟ್ ಮಂಡಳಿ ಹಾಗೂ ತಮಿಳುನಾಡು ಕ್ರಿಕೆಟ್ ಅಸೋಸಿಯೇಷನ್ ಮಧ್ಯೆ ನಡೆದ ಮಾತುಕತೆ ಯಶಸ್ವಿಯಾಗಿದೆ. ಹೀಗಾಗಿ ಭಾರತ-ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯ ವೀಕ್ಷಣೆ ಮಾಡಲು ಶೇ. 50ರಷ್ಟು ಕ್ರೀಡಾಭಿಮಾನಿಗಳಿಗೆ ಅವಕಾಶ ನೀಡಲಾಗಿದೆ.
ಫೆ.13ರಂದು ಚೆನ್ನೈ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಎರಡನೇ ಟೆಸ್ಟ್ ಪಂದ್ಯ ನಡೆಯಲಿದ್ದು, ಈ ಪಂದ್ಯ ವೀಕ್ಷಣೆ ಮಾಡಲು ಅಭಿಮಾನಿಗಳಿಗೆ ಅನುವು ಮಾಡಿಕೊಡಲಾಗಿದೆ. ಇನ್ನು ಮೊದಲ ಟೆಸ್ಟ್ ಪಂದ್ಯ ವೀಕ್ಷಣೆ ಮಾಡಲು ಅನುಮತಿ ನೀಡಿಲ್ಲ. ಇನ್ನು ಮೂರನೇ ಹಾಗೂ ನಾಲ್ಕನೇ ಟೆಸ್ಟ್ ಪಂದ್ಯ ವೀಕ್ಷಣೆ ಮಾಡಲು ಈಗಾಗಲೇ ಅನುಮತಿ ನೀಡಲಾಗಿದೆ.
ಓದಿ: ಬಜೆಟ್ ಭಾಷಣದಲ್ಲಿ ಟೀಂ ಇಂಡಿಯಾ ಅದ್ಭುತ ಗೆಲುವಿನ ಉಲ್ಲೇಖ!
ಈಗಾಗಲೇ ತಮಿಳುನಾಡು ಸರ್ಕಾರ ಕ್ರಿಕೆಟ್ ಸೇರಿದಂತೆ ವಿವಿಧ ಕ್ರೀಡೆ ವೀಕ್ಷಣೆ ಮಾಡಲು ಶೇ.50ರಷ್ಟು ಮಂದಿಗೆ ಅವಕಾಶ ನೀಡಿ ಮಹತ್ವದ ಆದೇಶ ಹೊರಹಾಕಿದ್ದು, ಇದರ ಬೆನ್ನಲ್ಲೇ ಬಿಸಿಸಿಐ ತಮಿಳುನಾಡು ಕ್ರಿಕೆಟ್ ಮಂಡಳಿ ಜತೆ ಮಾತುಕತೆ ನಡೆಸಿತ್ತು. ಭಾರತ-ಇಂಗ್ಲೆಂಡ್ ನಡುವೆ ನಾಲ್ಕು ಟೆಸ್ಟ್ ಪಂದ್ಯ, ಐದು ಟಿ - 20 ಹಾಗೂ ಮೂರು ಏಕದಿನ ಪಂದ್ಯಗಳು ನಡೆಯಲಿದ್ದು, ಅದಕ್ಕಾಗಿ ಉಭಯ ತಂಡಗಳು ಈಗಾಗಲೇ ಚೆನ್ನೈನಲ್ಲಿ ಅಭ್ಯಾಸ ನಡೆಸುತ್ತಿವೆ.