ETV Bharat / sports

ಐಪಿಎಲ್​ನಲ್ಲಿ ಅತಿ ಹೆಚ್ಚು ಪಂದ್ಯಶ್ರೇಷ್ಠ ಪ್ರಶಸ್ತಿ: ಯುನಿವರ್ಸಲ್ ಬಾಸ್​ ದಾಖಲೆ ಪುಡಿಗಟ್ಟಿದ ಮಿಸ್ಟರ್​ 360 - ಐಪಿಎಲ್​ನಲ್ಲಿ ಹೆಚ್ಚು ಪಂದ್ಯಶ್ರೇಷ್ಠ ಪ್ರಶಸ್ತಿ

13 ಆವೃತ್ತಿಗಳಿಂದಲೂ ಐಪಿಎಲ್​ನಲ್ಲಿ ಆಡುತ್ತಿರುವ ದಕ್ಷಿಣ ಆಫ್ರಿಕಾದ ಸ್ಟಾರ್​ ಬ್ಯಾಟ್ಸ್​ಮನ್​ಗೆ ತಮ್ಮ ಸ್ಫೋಟಕ ಇನ್ನಿಂಗ್ಸ್​ಗಾಗಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಈ ಮೂಲಕ ತಮ್ಮ 22 ನೇ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಬ್ಯಾಟ್ಸ್​ಮನ್ ಎನಿಸಿಕೊಂಡರು.

ಐಪಿಎಲ್​ನಲ್ಲಿ ಅತಿ ಹೆಚ್ಚು ಪಂದ್ಯಶ್ರೇಷ್ಠ ಪ್ರಶಸ್ತಿ

author img

By

Published : Oct 13, 2020, 6:06 PM IST

ಶಾರ್ಜಾ : ಕೋಲ್ಕತ್ತಾ ನೈಟ್​ ರೈಡರ್ಸ್​ ವಿರುದ್ಧದ ಪಂದ್ಯದಲ್ಲಿ ಸ್ಫೋಟಕ ಅರ್ಧಶತಕದ ಮೂಲಕ​ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಎಬಿಡಿ ವಿಲಿಯರ್ಸ್​ ಐಪಿಎಲ್​ ಇತಿಹಾಸದಲ್ಲಿ ಅತಿ ಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ.

ಸೋಮವಾರ ಕೋಲ್ಕತ್ತಾ ವಿರುದ್ದ ನಡೆದ ಪಂದ್ಯದಲ್ಲಿ ವಿಲಿಯರ್ಸ್​ ಕೇವಲ 33 ಎಸೆತಗಳಲ್ಲಿ 5 ಬೌಂಡರಿ ಹಾಗೂ 6 ಸಿಕ್ಸರ್​ಗಳ ಸಹಿತ 73 ರನ್​ಗಳಿಸಿ ತಂಡದ 194 ರನ್​ಗಳ ಬೃಹತ್ ಮೊತ್ತ ದಾಖಲಿಸಲು ನೆರವಾಗಿದ್ದರು. ಈ ಮೊತ್ತವನ್ನು ಬೆನ್ನತ್ತಿದ ಕೆಕೆಆರ್​ 112 ರನ್​ಗಳಿಸಿ 82 ರನ್​ಗಳ ಸೋಲೊಪ್ಪಿಕೊಂಡಿತು.

ಕಳೆದ 13 ಆವೃತ್ತಿಗಳಿಂದಲೂ ಐಪಿಎಲ್​ನಲ್ಲಿ ಆಡುತ್ತಿರುವ ದಕ್ಷಿಣ ಆಫ್ರಿಕಾದ ಸ್ಟಾರ್​ ಬ್ಯಾಟ್ಸ್​ಮನ್​ಗೆ ತಮ್ಮ ಸ್ಫೋಟಕ ಇನ್ನಿಂಗ್ಸ್​ಗಾಗಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಈ ಮೂಲಕ ತಮ್ಮ 22 ನೇ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಬ್ಯಾಟ್ಸ್​ಮನ್ ಎನಿಸಿಕೊಂಡರು.

ಈ ಮೂಲಕ ವಿಂಡೀಸ್ ದೈತ್ಯ ಹಾಗೂ ಆರ್​ಸಿಬಿ ತಂಡದ ಮಾಜಿ ಆಟಗಾರ ಕ್ರಿಸ್​ ಗೇಲ್​ರನ್ನು ಹಿಂದಿಕ್ಕಿ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಈ ಗೌರವಕ್ಕೆ ಪಾತ್ರರಾದ ಕ್ರಿಕೆಟಿಗ ಎಂಬ ಶ್ರೇಯಕ್ಕೆ ಪಾತ್ರರಾದರು. ಗೇಲ್​ 2011 ರಿಂದ 2019ರವರೆಗೆ 21ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಮುಂಬೈ ಇಂಡಿಯನ್ಸ್​ನ ರೋಹಿತ್ ಶರ್ಮಾ 18, ಭಾರತ ತಂಡದ ಮಾಜಿ ನಾಯಕ ಹಾಗೂ ಸಿಎಸ್​ಕೆ ನಾಯಕ ಎಂಎಸ್ ಧೋನಿ, ಶೇನ್ ವಾಟ್ಸನ್, ಡೇವಿಡ್​ ವಾರ್ನರ್, ಯೂಸುಫ್ ಪಠಾಣ್​ ತಲಾ 17 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.