ಲಂಡನ್: ಇಂಗ್ಲೆಂಡ್‌ನ ಸೀಮಿತ ಓವರ್‌ಗಳ ಲೆಗ್ ಸ್ಪಿನ್ನರ್ ಆದಿಲ್ ರಶೀದ್ ಇನ್ನೂ ಟೆಸ್ಟ್ ಪಂದ್ಯದ ಬೌಲರ್ ಆಗಬೇಕೆಂಬ ಆಕಾಂಕ್ಷೆ ಹೊಂದಿದ್ದಾರೆ ಎಂದು ರಾಷ್ಟ್ರೀಯ ಸೆಲೆಕ್ಟರ್ ಎಡ್ ಸ್ಮಿತ್ ಹೇಳಿದ್ದಾರೆ.
ರಶೀದ್ ಇಂಗ್ಲೆಂಡ್‌ನ ವೈಟ್-ಬಾಲ್ ತಂಡಗಳಲ್ಲಿ ನಿಯಮಿತರಾಗಿದ್ದು, ಇತ್ತೀಚೆಗೆ ಏಕದಿನ ಸ್ವರೂಪದಲ್ಲಿ 150 ವಿಕೆಟ್ ಪಡೆದಿದ್ದಾರೆ. ಆದರೆ 2019ರ ಜನವರಿಯಲ್ಲಿ ವೆಸ್ಟ್ ಇಂಡೀಸ್‌ನಲ್ಲಿ ನಡೆದ ಟೆಸ್ಟ್ ಪಂದ್ಯದ ನಂತರ ಮತ್ತೆ ಟೆಸ್ಟ್ ಪಂದ್ಯಗಳಲ್ಲಿ ಕಾಣಿಸಿಕೊಂಡಿಲ್ಲ.
ಆದಿಲ್ ಭುಜದ ಗಾಯದಿಂದ ಚೇತರಿಸಿಕೊಂಡಿದ್ದಾರೆ ಎಂದು ಸ್ಮಿತ್ ಹೇಳಿದ್ದಾರೆ. ವೈಟ್-ಬಾಲ್ ಕ್ರಿಕೆಟ್‌ನಲ್ಲಿ ಅವರು ಉತ್ತಮ ಪ್ರದರ್ಶನ ನೀಡಿದ್ದಾರೆ. ಅವರ ಕೌಶಲ್ಯ ಮತ್ತು ಪಾಂಡಿತ್ಯವನ್ನು ನಾವೆಲ್ಲರೂ ನೋಡಿದ್ದೇವೆ. ಅವರು ಇಂಗ್ಲೆಂಡ್ ಪರ ಎಲ್ಲಾ ಸ್ವರೂಪದ ಕ್ರಿಕೆಟ್ ಆಡುವ ಆಕಾಂಕ್ಷೆ ಹೊಂದಿದ್ದಾರೆ ಎಂದು ಹೇಳಿದ್ದಾರೆ.
ರಶೀದ್ ಕೊನೆಯ ಬಾರಿಗೆ ಐರ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಇಂಗ್ಲೆಂಡ್ ಪರವಾಗಿ ಕಾಣಿಸಿಕೊಂಡಿದ್ದರು. ಅದೇ ಪಂದ್ಯದಲ್ಲಿ ಐದು ವಿಕೆಟ್ ಪಡೆದಿದ್ದರು. ಆಗಸ್ಟ್ 28ರಿಂದ ಪಾಕಿಸ್ತಾನ ವಿರುದ್ಧ ನಡೆಯಲಿರುವ ಟಿ-20 ಸರಣಿಯಲ್ಲಿ ಆದಿಲ್ ರಶೀದ್ ಮತ್ತೆ ಮೈದಾನಕ್ಕಿಳಿಯಲಿದ್ದಾರೆ.