ನವದೆಹಲಿ: ಮಾನಿಸಿಕ ಖಿನ್ನತೆಯಿಂದ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ಅನಿರ್ದಿಷ್ಟಾವಧಿಗೆ ದೂರ ಉಳಿದಿದ್ದ ಆಸ್ಟ್ರೇಲಿಯಾದ ಗ್ಲೇನ್ ಮ್ಯಾಕ್ಸ್ವೆಲ್ ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಮರಳಿದ್ದಾರೆ.
2019ರ ಕೊನೆಯಲ್ಲಿ ಮಾನಸಿಕವಾಗಿ ಖಿನ್ನತೆಯಿಂದ ಬಳಲುತ್ತಿದ್ದ ಮ್ಯಾಕ್ಸ್ವೆಲ್ ತವರಿನಲ್ಲಿ ಶ್ರೀಲಂಕಾ ವಿರುದ್ಧ ಟಿ-20 ಸರಣಿ ನಡೆಯುತ್ತಿದ್ದಾಗಲೇ ಆಸ್ಟ್ರೇಲಿಯಾ ತಂಡದಿಂದ ಹೊರಗುಳಿದಿದ್ದರು. ನಂತರ ಬಿಗ್ಬ್ಯಾಶ್ ಲೀಗ್ಗೆ ಮರಳಿದ್ದ ಆಸೀಸ್ ಸ್ಟಾರ್ ಆಲ್ರೌಂಡರ್ ಇದೀಗ ಮತ್ತೆ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿದ್ದಾರೆ.
31 ವರ್ಷದ ಮ್ಯಾಕ್ಸ್ವೆಲ್ 2020ರ ಬಿಗ್ಬ್ಯಾಶ್ ಲೀಗ್ನಲ್ಲಿ ಎಲ್ಲ ತಂಡಗಳ ಕೋಚ್ಗಳ ಆಯ್ಕೆ ಮಾಡಿದ ಅತ್ಯುತ್ತಮ ಬಿಗ್ಬ್ಯಾಶ್ ತಂಡಕ್ಕೆ ನಾಯಕನಾಗಿ ಆಯ್ಕೆಯಾಗಿದ್ದರು. ಅಲ್ಲದೇ ಟೂರ್ನಿಯಲ್ಲಿ ಮೆಲ್ಬೋರ್ನ್ ಸ್ಟಾರ್ ತಂಡದ ಪರ 389 ರನ್ ಹಾಗೂ 8 ವಿಕೆಟ್ ಪಡೆದು ಉತ್ತಮ ಆಲ್ರೌಂಡರ್ ಎನಿಸಿಕೊಂಡಿದ್ದಾರೆ. ನಾಯಕನಾಗಿ ತಮ್ಮ ತಂಡವನ್ನು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವಂತೆ ನೋಡಿಕೊಂಡಿದ್ದಾರೆ. ಇದೀಗ ಚಾಲೆಂಜರ್ ಹಂತ ತಲುಪಿರುವ ಅವರ ತಂಡ ಸಿಡ್ನಿ ಥಂಡರ್ಸ್ ತಂಡದ ವಿರುದ್ಧ ಗುರುವಾರ ಚಾಲೆಂಜರ್ಸ್ ಪಂದ್ಯದಲ್ಲಿ ಎದುರಿಸಲಿದೆ.
ಮ್ಯಾಕ್ಸ್ವೆಲ್ ಆಸ್ಟ್ರೇಲಿಯಾ ಪರ 7 ಟೆಸ್ಟ್, 110 ಏಕದಿನ ಪಂದ್ಯ ಹಾಗೂ 61 ಟಿ-20 ಪಂದ್ಯಗಳನ್ನಾಡಿದ್ದಾರೆ. ಏಕದಿನ ಕ್ರಿಕೆಟ್ನಲ್ಲಿ 2,877, ಟಿ-20ಯಲ್ಲಿ 1576 ರನ್ಗಳಿಸಿದ್ದಾರೆ.