ಸಿಡ್ನಿ : ಭಾರತದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಒಂದು ವರ್ಷದ ಹಿಂದೆ ಬೆನ್ನಿನ ಶಸ್ತ್ರಚಿಕಿತ್ಸೆಯಿಂದ ಮರಳಿದ ನಂತರ ಮೊದಲ ಬಾರಿಗೆ ಬೌಲಿಂಗ್ ಮಾಡಿದ್ದಾರೆ.
-
Hardik strikes!
— BCCI (@BCCI) November 29, 2020 " class="align-text-top noRightClick twitterSection" data="
Steve Smith departs after a brilliant 104.
Live - https://t.co/fkh0ST0JTx #AUSvIND pic.twitter.com/Yhg8GHZLBQ
">Hardik strikes!
— BCCI (@BCCI) November 29, 2020
Steve Smith departs after a brilliant 104.
Live - https://t.co/fkh0ST0JTx #AUSvIND pic.twitter.com/Yhg8GHZLBQHardik strikes!
— BCCI (@BCCI) November 29, 2020
Steve Smith departs after a brilliant 104.
Live - https://t.co/fkh0ST0JTx #AUSvIND pic.twitter.com/Yhg8GHZLBQ
ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಏಕದಿನ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ 4 ಓವರ್ ಬೌಲಿಂಗ್ ನಡೆಸಿ 24 ರನ್ ಬಿಟ್ಟುಕೊಟ್ಟು ಸ್ಟೀವ್ ಸ್ಮಿತ್ ವಿಕೆಟ್ ಪಡೆದುಕೊಂಡಿದ್ದಾರೆ.
2019ರ ಸೆಪ್ಟೆಂಬರ್‌ನಲ್ಲಿ ನಡೆದ ವಿಶ್ವಕಪ್ ಸೆಮಿ ಫೈನಲ್ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಕೊನೆಯ ಬಾರಿಗೆ ಬೌಲಿಂಗ್ ಮಾಡಿದ್ದರು. ಅದಾದ ಬಳಿಕ ಬೆನ್ನುನೋವಿಗೆ ತುತ್ತಾಗಿದ್ದ ಪಾಂಡ್ಯ, ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಬಳಿಕ ಬೌಲಿಂಗ್‌ನಿಂದ ದೂರ ಉಳಿದಿದ್ದರು.
ಮೊದಲ ಏಕದಿನ ಪಂದ್ಯದ ಬಳಿಕ ಮಾತನಾಡಿದ್ದ ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಬೌಲಿಂಗ್ ಮಾಡಲು ಸಂಪೂರ್ಣವಾಗಿ ಫಿಟ್ ಆಗಿಲ್ಲ ಎಂದಿದ್ದರು. ಆದರೆ, ಎರಡನೇ ಪಂದ್ಯದಲ್ಲಿ ಪಾಂಡ್ಯ ಬೌಲಿಂಗ್ ಮಾಡಿ ಮಿಂಚಿದ್ದಾರೆ.