ನವದೆಹಲಿ: ಕಳೆದ ಹಲವು ತಿಂಗಳುಗಳಿಂದ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಿಂದ ದೂರ ಉಳಿದಿದ್ದ ಟೀಂ ಇಂಡಿಯಾ, ನಾಳೆ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲನೇ ಹಣಾಹಣಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೆಣಸಲು ಸಿದ್ಧವಾಗಿದೆ.
ಬಹು ನಿರೀಕ್ಷಿತ ಸರಣಿಯನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ಕೂಡ ನಾಳೆ ಮೈದಾನಕ್ಕೆ ಆಗಮಿಸುತ್ತಿದ್ದಾರೆ. ಕಳೆದ ಬಾರಿ ಆಸ್ಟ್ರೇಲಿಯಾ ಪ್ರವಾಸದಲ್ಲಿ ಉತ್ತಮ ಪ್ರದರ್ಶನ ನೀಡಿ ಟ್ರೋಫಿ ಜಯಿಸಿದ್ದ ಕೊಹ್ಲಿ ಬಾಯ್ಸ್, ಈ ಬಾರಿಯೂ ಗೆಲುವಿನ ವಿಶ್ವಾಸದಲ್ಲಿದ್ದಾರೆ.
ಆದರೆ, ಟೀಂ ಇಂಡಿಯಾಗೆ ರೋಹಿತ್ ಶರ್ಮಾ ಅನುಪಸ್ಥಿತಿ ಕಾಡುತ್ತಿದೆ. ಕನ್ನಡಿಗರಾದ ಕೆ.ಎಲ್.ರಾಹುಲ್ ಅಥವಾ ಮಯಾಂಕ್ ಅಗರ್ವಾಲ್, ಶಿಖರ್ ಧವನ್ ಜೊತೆ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.
ನಾಳೆ ನಡೆಯುವ ಪಂದ್ಯದಲ್ಲಿ ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿಯಲಿದ್ದಾರೆ ಭಾರತ-ಆಸೀಸ್ ಆಟಗಾರರು
ಬ್ಯಾಟಿಂಗ್‍ನಲ್ಲಿ ವಿರಾಟ್ ಕೊಹ್ಲಿ, ಶಿಖರ್ ಧವನ್, ಕೆ.ಎಲ್.ರಾಹುಲ್, ಹಾರ್ದಿಕ್ ಪಾಂಡ್ಯರಂತಹ ಆಟಗಾರರಿದ್ದರೆ, ಇತ್ತ ಬೌಲಿಂಗ್ ಪಡೆ ಕೂಡ ಬಲಿಷ್ಠವಾಗಿದೆ. ಬೂಮ್ರಾ, ಮೊಹಮ್ಮದ್ ಶಮಿ, ರವೀಂದ್ರಾ ಜಡೇಜಾ, ಚಹಲ್, ಕುಲ್‍ದೀಪ್ ಯಾದವ್, ಸೈನಿ, ಶಾರ್ದೂಲ್ ಠಾಕೂರ್ ಆಸೀಸ್ ಆಟಗಾರರನ್ನು ಕಟ್ಟಿಹಾಕುವ ಸಾಮರ್ಥ್ಯ ಹೊಂದಿದ್ದಾರೆ.
ಕಿರಿಯ ಆಟಗಾರರಿಗೂ ಆಸೀಸ್ ವಿರುದ್ಧ ಕಣಕ್ಕಿಯಲು ಅವಕಾಶ ಸಿಗುವ ಸಾಧ್ಯತೆ ಇದ್ದು, ಶುಬ್ಮನ್‍ಗಿಲ್, ಸಂಜು ಸಾಮ್ಸನ್, ಶ್ರೇಯಸ್ ಐಯ್ಯರ್ ಉತ್ತಮ ಪ್ರದರ್ಶನ ನೀಡಿ ತಂಡದಲ್ಲಿ ಸ್ಥಾನ ಪಡೆಯುವ ಯೋಜನೆಯಲ್ಲಿದ್ದಾರೆ.
ರೋಹಿತ್, ಇಶಾಂತ್ ಆಸ್ಟ್ರೇಲಿಯಾಕ್ಕೆ ಬಂದರೆ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ: ಕೊಹ್ಲಿ
ಇತ್ತ ಆ್ಯರೋನ್ ಫಿಂಚ್ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಲಿದ್ದು, ಪ್ಯಾಟ್ ಕಮಿನ್ಸ್ ಉಪ ನಾಯಕನಾಗಿ ಕಾರ್ಯನಿರ್ವಹಿಸಲಿದ್ದಾರೆ. ಆಸೀಸ್ ತಂಡ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ಬಲಿಷ್ಠವಾಗಿದೆ. ಡೇವಿಡ್ ವಾರ್ನರ್, ಆ್ಯರೋನ್ ಫಿಂಚ್, ಮಾರ್ಕಸ್ ಸ್ಟೋಯ್ನಿಸ್, ಗ್ಲೇನ್ ಮ್ಯಾಕ್ಸ್‌ವೆಲ್, ಸ್ಟೀವ್ ಸ್ಮಿತ್ ಬ್ಯಾಟಿಂಗ್‍ನಲ್ಲಿ ಬಲ ತುಂಬಿದ್ರೆ, ಮಿಚಲ್ ಸ್ಟ್ರಾಕ್, ಜೋಸ್ ಹೆಜಲ್‍ವುಡ್, ಆ್ಯಯಡಂ ಜಂಪಾ, ಪ್ಯಾಟ್ ಕಮಿನ್ಸ್ ಟೀಂ ಇಂಡಿಯಾ ಆಟಗಾರರನ್ನು ಕಟ್ಟಿಹಾಕುವ ಉತ್ಸಾಹದಲ್ಲಿದ್ದಾರೆ.
ಭಾರತ - ಆಸ್ಟ್ರೇಲಿಯಾ ಸರಣಿ: ಸಮಯ, ಸ್ಥಳ, ದಿನಾಂಕ, ತಂಡಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ
ಭಾರತ ಸಂಭಾವ್ಯ ತಂಡ: ವಿರಾಟ್ ಕೊಹ್ಲಿ (ಕ್ಯಾಪ್ಟನ್), ಶಿಖರ್ ಧವನ್, ಮಾಯಾಂಕ್ ಅಗರ್ವಾಲ್, ಶುಬ್ಮನ್ ಗಿಲ್, ಶ್ರೇಯಸ್ ಐಯ್ಯರ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ಕೆ.ಎಲ್.ರಾಹುಲ್( ವಿ.ಕೀ. ಮತ್ತು ಉ.ನಾಯಕ), ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ನವದೀಪ್ ಸೈನಿ, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಯುಜ್ವೇಂದ್ರ ಚಹಾಲ್, ಶಾರ್ದುಲ್ ಠಾಕೂರ್.
ಆಸ್ಟ್ರೇಲಿಯಾ ತಂಡ: ಆ್ಯರೋನ್ ಫಿಂಚ್(ನಾಯಕ), ಸೀನ್ ಅಬ್ಬೋಟ್, ಆಸ್ಟನ್ ಅಗರ್, ಅಲೆಕ್ಸ್ ಕ್ಯಾರಿ, ಪ್ಯಾಟ್ ಕಮಿನ್ಸ್(ಉಪನಾಯಕ), ಕ್ಯಾಮರೋನ್ ಗ್ರೀನ್, ಜೋಶ್ ಹೇಜಲ್‌ವುಡ್, ಮೊಯಿಸ್ ಹೆನ್ರಿಕೇಸ್, ಮಾರ್ನಸ್ ಲಾಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ಡೇನಿಯಲ್ ಸ್ಯಾಮ್ಸ್, ಕೇನ್ ರಿಚರ್ಡ್‌ಸನ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೋಯ್ನಿಸ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆ್ಯಡಂ ಜಂಪಾ.