ಮುಂಬೈ: ಭಾರತ ತಂಡ ಮೂರು ವರ್ಷಗಳಿಂದ ಕಾಪಾಡಿಕೊಂಡು ಬಂದಿದ್ದ ಅಗ್ರ ಸ್ಥಾನವನ್ನು ಆಸ್ಟ್ರೇಲಿಯಾ ತಂಡಕ್ಕೆ ಬಿಟ್ಟುಕೊಟ್ಟಿದೆ. ಈ ಮೂಲಕ ಆಸ್ಟ್ರೇಲಿಯಾ ಬ್ಯಾಟಿಂಗ್-ಬೌಲಿಂಗ್ ಜೊತೆಗೆ ಟೀಮ್ ಶ್ರೇಯಾಂಕದಲ್ಲೂ ಮೊದಲ ಸ್ಥಾನ ಪಡೆದುಕೊಂಡಿದೆ.
ಶುಕ್ರವಾರ ಬಿಡುಗಡೆಯಾಗಿದ್ದ ಐಸಿಸಿ ನೂತನ ಶ್ರೇಯಾಂಕ ಪಟ್ಟಿಯಲ್ಲಿ ಆಸ್ಟ್ರೇಲಿಯಾ(116) ಮೊದಲ ಸ್ಥಾನದಲ್ಲಿದ್ದರೆ, ಭಾರತ 3ನೇ ಸ್ಥಾನಕ್ಕೆ ಕುಸಿದಿದೆ. ನ್ಯೂಜಿಲ್ಯಾಂಡ್(115)ಮೂರನೇ ಸ್ಥಾನದಲ್ಲಿದೆ.
ಇನ್ನು ಬ್ಯಾಟ್ಸ್ಮನ್ ವಿಭಾಗದಲ್ಲಿ ಸ್ವಿವ್ ಸ್ಮಿತ್(911) ಮೊದಲ ಸ್ಥಾನ ಪಡೆದಿದ್ದರೆ, ವಿರಾಟ್ ಕೊಹ್ಲಿ (886) 2ನೇ ಶ್ರೇಯಾಂಕ ಹಾಗೂ ಮಾರ್ನಸ್ ಲಾಬುಶೇನ್ (827) ಮೂರನೇ ಸ್ಥಾನದಲ್ಲಿದ್ದಾರೆ.
ಬೌಲಿಂಗ್ ಶ್ರೇಯಾಂಕದಲ್ಲೂ ಆಸ್ಟ್ರೇಲಿಯಾದ ಪ್ಯಾಟ್ ಕಮ್ಮಿನ್ಸ್ (904) ಮೊದಲ ಸ್ಥಾನದಲ್ಲಿ ಮುಂದುವರಿಯುವ ಮೂಲಕ ಶ್ರೇಯಾಂಕ ಪಟ್ಟಿಯಲ್ಲಿ ಪಾರಮ್ಯ ಸಾಧಿಸಿದ್ದಾರೆ.
ಈ ಮೂಲಕ ಆಸ್ಟ್ರೇಲಿಯಾ ಬ್ಯಾಟಿಂಗ್, ಬೌಲಿಂಗ್ ಹಾಗೂ ತಂಡದ ವಿಭಾಗ ಮೂರು ವಿಭಾಗ ಐಸಿಸಿ ಟೆಸ್ಟ್ ರ್ಯಾಂಕಿಂಗ್ನಲ್ಲಿ ಅಗ್ರಸ್ಥಾನ ಪಡೆದಿದೆ. ಆದರೆ ಆಲ್ರೌಂಡರ್ ವಿಭಾಗದಲ್ಲಿ ಮಾತ್ರ ವೆಸ್ಟ್ ಇಂಡೀಸ್ನ ಜಾಸನ್ ಹೋಲ್ಡರ್ ಮೊದಲ ಸ್ಥಾನ ಉಳಿಸಿಕೊಂಡಿದ್ದಾರೆ.
ಟಿ20 ವಿಭಾಗದಲ್ಲೂ ಪಾಕಿಸ್ತಾನ(268) ತಂಡವನ್ನು ಹಿಂದಿಕ್ಕಿರುವ ಆಸ್ಟ್ರೇಲಿಯಾ(278) ನಂಬರ್ ಒನ್ ಸ್ಥಾನಕ್ಕೇರಿದೆ.