ಮ್ಯಾಂಚೆಸ್ಟರ್: ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಿಂದ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಬ್ಯಾಟ್ಸ್ಮನ್ ಸ್ಟೀವ್ ಸ್ಮಿತ್ ವಿಶ್ರಾಂತಿ ಪಡೆದುಕೊಂಡಿದ್ದಾರೆ. ನೆಟ್ಸ್ನಲ್ಲಿ ಅಭ್ಯಾಸ ನಡೆಸುತ್ತಿದ್ದ ವೇಳೆ ಅವರ ತಲೆಗೆ ಚೆಂಡು ಬಡಿದಿದೆ.
ಇಂದು ಇಂಗ್ಲೆಂಡ್-ಆಸ್ಟ್ರೇಲಿಯಾ ತಂಡಗಳ ನಡುವೆ ಮೊದಲ ಏಕದಿನ ಪಂದ್ಯ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಅವರು ಭಾಗಿಯಾಗಿಲ್ಲ. ನೆಟ್ಸ್ನಲ್ಲಿ ಅಭ್ಯಾಸ ನಡೆಸುತ್ತಿದ್ದ ವೇಳೆ ಸಿಬ್ಬಂದಿ ಥ್ರೋ ಡೌನ್ ಬಳಿಸಿ ಚೆಂಡು ಎಸೆಯುತ್ತಿದ್ದ ವೇಳೆ ಅವರ ತಲೆಗೆ ಚೆಂಡು ಬಡೆದಿದೆ. ಹೀಗಾಗಿ ಮೆನ್ನೆಚ್ಚರಿಕೆ ಕ್ರಮವಾಗಿ ಅವರಿಗೆ ವಿಶ್ರಾಂತಿ ನೀಡಲಾಗಿದೆ.
ಎರಡನೇ ಏಕದಿನ ಪಂದ್ಯ ಭಾನುವಾರ ನಡೆಯಲಿದ್ದು, ಅದರಲ್ಲಿ ಸ್ಮಿತ್ ಭಾಗಿಯಾಗುವ ಸಾಧ್ಯತೆ ದಟ್ಟವಾಗಿದೆ. ಏಕದಿನ ಕ್ರಿಕೆಟ್ ವಿಶ್ವಕಪ್ ಮುಕ್ತಾಯಗೊಂಡ ಬಳಿಕ ಇದೇ ಮೊದಲ ಬಾರಿಗೆ ಉಭಯ ದೇಶಗಳು ಏಕದಿನ ಸರಣಿಯಲ್ಲಿ ಮುಖಾಮುಖಿಯಾಗಿವೆ. ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಕ್ಷೇತ್ರರಕ್ಷಣೆ ಆಯ್ಕೆ ಮಾಡಿಕೊಂಡಿದೆ.