ಮೆಲ್ಬೋರ್ನ್: ಮುಂದಿನ ವರ್ಷ ಜನವರಿ 14ರಿಂದ ಟೀಂ ಇಂಡಿಯಾ ವಿರುದ್ಧ ಆರಂಭಗೊಳ್ಳಲಿರುವ ಏಕದಿನ ಕ್ರಿಕೆಟ್ ಸರಣಿಗಾಗಿ ಆಸ್ಟ್ರೇಲಿಯಾ ತಂಡ ಪ್ರಕಟಗೊಂಡಿದ್ದು, ಮಹತ್ವದ ಬದಲಾವಣೆ ಮಾಡಿ ಕ್ರಿಕೆಟ್ ಆಸ್ಟ್ರೇಲಿಯಾ ತಂಡ ಪ್ರಕಟಗೊಳಿಸಿದೆ.
ಭಾರತ-ಆಸ್ಟ್ರೇಲಿಯಾ ನಡುವೆ ಮೂರು ಏಕದಿನ ಪಂದ್ಯಗಳು ಮುಂಬೈ, ರಾಜಕೋಟ್ ಹಾಗೂ ಬೆಂಗಳೂರಿನಲ್ಲಿ ನಡೆಯಲಿದ್ದು, ಗ್ಲೇನ್ ಮ್ಯಾಕ್ಸವೆಲ್, ಸ್ಟೋನಿಸ್ ಹಾಗೂ ನಾಥನ್ ಲಾಯಿನ್ಗೆ ತಂಡದಲ್ಲಿ ಅವಕಾಶ ನೀಡಿಲ್ಲ. ಆದರೆ ಮಾರ್ನಸ್ ಲಾಬುಶೇನ್ ಏಕದಿನ ಟೂರ್ನಿಯಲ್ಲಿ ಅವಕಾಶ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. 14 ಸದಸ್ಯರನ್ನೊಳಗೊಂಡ ತಂಡ ಪ್ರಕಟಗೊಂಡಿದ್ದು ಡೇವಿಡ್ ವಾರ್ನರ್ ಹಾಗೂ ಸ್ಮಿತ್ ತಂಡದಲ್ಲಿ ಚಾನ್ಸ್ ಪಡೆದುಕೊಂಡಿದ್ದಾರೆ.
ಆ್ಯರೊನ್ ಫಿಂಚ್ ತಂಡವನ್ನ ಮುನ್ನಡೆಸಲಿದ್ದು, ತಂಡದ ಮುಖ್ಯ ಕೋಚ್ ಜಸ್ಟೀನ್ ಲ್ಯಾಂಗರ್ಗೆ ವಿಶ್ರಾಂತಿ ನೀಡಿರುವ ಕಾರಣ ಸಹಾಯಕ ಕೋಚ್ ಆಂಡ್ರ್ಯೂ ಮೆಕ್ಡೊನಾಲ್ಡ್ ಕೋಚಿಂಗ್ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಕಳೆದ ವರ್ಷ ವಿಶ್ವಕಪ್ ಸೆಮಿಫೈನಲ್ನಲ್ಲಿ ಆಸ್ಟ್ರೇಲಿಯಾ ತಂಡದ ಪರ ಕಣಕ್ಕಿಳಿದಿದ್ದ ಉಸ್ಮಾನ್ ಖವಾಜಾ, ಶಾನ್ ಮಾರ್ಷ್, ನಾಥನ್ ಕೌಲ್ಟರ್-ನೈಲ್, ಮ್ಯಾಕ್ಸ್ವೆಲ್, ಸ್ಟೋನಿಸ್ ಹಾಗೂ ನಾಥನ್ ಲಿಯಾನ್ಗೆ ಕೈಬಿಡಲಾಗಿದ್ದು, ಗಾಯಗೊಂಡಿರುವ ಬೆಹ್ರೆಂಡ್ರಾಫ್ ಸಹ ಹೊರಗುಳಿದಿದ್ದಾರೆ. 2014ರ ನಂತರ ಇದೇ ಮೊದಲ ಬಾರಿಗೆ ಆಲ್ರೌಂಡರ್ ಆಷ್ಟನ್ ಆಗರ್ ತಂಡದಲ್ಲಿ ಚಾನ್ಸ್ ಪಡೆದುಕೊಂಡಿದ್ದಾರೆ.
ಆಸ್ಟ್ರೇಲಿಯಾ ತಂಡ ಇಂತಿದೆ: ಆ್ಯರೊನ್ ಫಿಂಚ್, ಸೀನ್ ಅಬಾಟ್, ಆಷ್ಟನ್ ಅಗರ್, ಅಲೆಕ್ಸ್ ಕ್ಯಾರಿ, ಪ್ಯಾಟ್ ಕಮ್ಮಿನ್ಸ್, ಪೀಟರ್ ಹ್ಯಾಂಡ್ಸ್‌ಕಾಂಬ್, ಜೋಶ್ ಹ್ಯಾಜಲ್ವುಡ್,ಮಾರ್ನಸ್ ಲ್ಯಾಬುಸ್‌ಚಾಗ್ನೆ, ಕೇನ್ ರಿಚರ್ಡ್‌ಸನ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಆಷ್ಟನ್ ಟರ್ನರ್, ಡೇವಿಡ್ ವಾರ್ನರ್ ಹಾಗೂ ಆ್ಯಡಂ ಜಂಪಾ