ETV Bharat / sports

ಟೆಸ್ಟ್ ಪಂದ್ಯ: ಮತ್ತೆ ವೈಫಲ್ಯ ಅನುಭವಿಸಿದ ಪೃಥ್ವಿ ಶಾ, ದಿನದಾಟದ ಅಂತ್ಯಕ್ಕೆ 62 ರನ್​ಗಳ ಮುನ್ನಡೆ

author img

By

Published : Dec 18, 2020, 5:38 PM IST

ಅಹರ್ನಿಶಿ ಟೆಸ್ಟ್​ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಸೊನ್ನೆ ಸುತ್ತಿದ್ದ ಪೃಥ್ವಿ ಶಾ, ದ್ವಿತೀಯ ಇನ್ನಿಂಗ್ಸ್​ನಲ್ಲೂ ನೀರಸ ಪ್ರದರ್ಶನ ಮುಂದುವರೆಸಿದ್ದು, ಕಮ್ಮಿನ್ಸ್​ ಎಸೆತದಲ್ಲಿ ಕ್ಲೀನ್​ ಬೌಲ್ಡ್​ ಆಗಿ ನಿರಾಸೆ ಅನುಭವಿಸಿದ್ರು.

India lead by 62 runs
ಮತ್ತೆ ವೈಫಲ್ಯ ಅನುಭವಿಸಿದ ಪೃಥ್ವಿ ಶಾ

ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಅಹರ್ನಿಶಿ ಟೆಸ್ಟ್ ಪಂದ್ಯದ ಎರಡನೇ ದಿನದಾಟದ ಅಂತ್ಯಕ್ಕೆ ದ್ವಿತೀಯ ಇನ್ನಿಂಗ್ಸ್​ ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾ, ಆರಂಭಿಕ ಆಟಗಾರ ಪೃಥ್ವಿ ಶಾ ವಿಕೆಟ್ ಕಳೆದುಕೊಂಡು 62 ರನ್​ಗಳ ಮುನ್ನಡೆ ಸಾಧಿಸಿದೆ.

ಮೊದಲ ಇನ್ನಿಂಗ್ಸ್​ನಲ್ಲಿ ಕರಾರುವಕ್ಕಾದ ದಾಳಿ ನಡೆಸಿದ ಭಾರತೀಯ ಬೌಲರ್​ಗಳು 191 ರನ್​ಗಳಿಗೆ ಆಸ್ಟ್ರೇಲಿಯಾ ತಂಡವನ್ನು ಕಟ್ಟಿಹಾಕಿದ್ರು. ಎರಡನೇ ಇನ್ನಿಂಗ್ಸ್​ ಬ್ಯಾಟಿಂಗ್ ಆರಂಭಿಸಿದ ಭಾರತ ತಂಡಕ್ಕೆ ಆಘಾತ ಎದುರಾಗಿದೆ. ಮೊದಲ ಇನ್ನಿಂಗ್ಸ್​ನಲ್ಲಿ ಸೊನ್ನೆ ಸುತ್ತಿದ್ದ ಪೃಥ್ವಿ ಶಾ, ದ್ವಿತೀಯ ಇನ್ನಿಂಗ್ಸ್​ನಲ್ಲಿ ಕಮ್ಮಿನ್ಸ್​ ಎಸೆತದಲ್ಲಿ ಕ್ಲೀನ್​ ಬೌಲ್ಡ್​ ಆಗಿ ನಿರಾಸೆ ಅನುಭವಿಸಿದ್ರು.

Australia are all out for 191 🏏

Yadav dismisses Hazlewood for 8⃣ and Paine remains unbeaten on 73.

India lead by 53 runs at the halfway point 🙌#AUSvIND SCORECARD 👉 https://t.co/Q10dx0IFfv pic.twitter.com/3RHitnLflZ

— ICC (@ICC) December 18, 2020 ">

ದಿನದಾಟದ ಅಂತ್ಯಕ್ಕೆ ಭಾರತ 1 ವಿಕೆಟ್ ಕಳೆದುಕೊಂಡು 9 ರನ್ ​ಗಳಿಸಿದೆ. 5 ರನ್ ​ಗಳಿಸಿರುವ ಮಯಾಂಕ್ ಅಗರ್ವಾಲ್ ಮತ್ತು ಖಾತೆ ತೆರೆಯದ ಜಸ್ಪ್ರೀತ್ ಬುಮ್ರಾ ಮೂರನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಮೊದಲ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ 244 ರನ್​ಗಳಿಗೆ ಆಲ್​ಔಟ್​ ಆದ್ರೆ, ಭಾರತೀಯ ಬೌಲರ್​ಗಳ ದಾಳಿಗೆ ತತ್ತರಿಸಿದ ಆಸೀಸ್ 191 ರನ್​ಗಳಿಗೆ ಸರ್ವಪತನ ಕಂಡಿತು.​​

ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಅಹರ್ನಿಶಿ ಟೆಸ್ಟ್ ಪಂದ್ಯದ ಎರಡನೇ ದಿನದಾಟದ ಅಂತ್ಯಕ್ಕೆ ದ್ವಿತೀಯ ಇನ್ನಿಂಗ್ಸ್​ ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾ, ಆರಂಭಿಕ ಆಟಗಾರ ಪೃಥ್ವಿ ಶಾ ವಿಕೆಟ್ ಕಳೆದುಕೊಂಡು 62 ರನ್​ಗಳ ಮುನ್ನಡೆ ಸಾಧಿಸಿದೆ.

ಮೊದಲ ಇನ್ನಿಂಗ್ಸ್​ನಲ್ಲಿ ಕರಾರುವಕ್ಕಾದ ದಾಳಿ ನಡೆಸಿದ ಭಾರತೀಯ ಬೌಲರ್​ಗಳು 191 ರನ್​ಗಳಿಗೆ ಆಸ್ಟ್ರೇಲಿಯಾ ತಂಡವನ್ನು ಕಟ್ಟಿಹಾಕಿದ್ರು. ಎರಡನೇ ಇನ್ನಿಂಗ್ಸ್​ ಬ್ಯಾಟಿಂಗ್ ಆರಂಭಿಸಿದ ಭಾರತ ತಂಡಕ್ಕೆ ಆಘಾತ ಎದುರಾಗಿದೆ. ಮೊದಲ ಇನ್ನಿಂಗ್ಸ್​ನಲ್ಲಿ ಸೊನ್ನೆ ಸುತ್ತಿದ್ದ ಪೃಥ್ವಿ ಶಾ, ದ್ವಿತೀಯ ಇನ್ನಿಂಗ್ಸ್​ನಲ್ಲಿ ಕಮ್ಮಿನ್ಸ್​ ಎಸೆತದಲ್ಲಿ ಕ್ಲೀನ್​ ಬೌಲ್ಡ್​ ಆಗಿ ನಿರಾಸೆ ಅನುಭವಿಸಿದ್ರು.

ದಿನದಾಟದ ಅಂತ್ಯಕ್ಕೆ ಭಾರತ 1 ವಿಕೆಟ್ ಕಳೆದುಕೊಂಡು 9 ರನ್ ​ಗಳಿಸಿದೆ. 5 ರನ್ ​ಗಳಿಸಿರುವ ಮಯಾಂಕ್ ಅಗರ್ವಾಲ್ ಮತ್ತು ಖಾತೆ ತೆರೆಯದ ಜಸ್ಪ್ರೀತ್ ಬುಮ್ರಾ ಮೂರನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಮೊದಲ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ 244 ರನ್​ಗಳಿಗೆ ಆಲ್​ಔಟ್​ ಆದ್ರೆ, ಭಾರತೀಯ ಬೌಲರ್​ಗಳ ದಾಳಿಗೆ ತತ್ತರಿಸಿದ ಆಸೀಸ್ 191 ರನ್​ಗಳಿಗೆ ಸರ್ವಪತನ ಕಂಡಿತು.​​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.