ಕೋಲ್ಕತ್ತಾ: ಬಾಂಗ್ಲಾದೇಶದ ಅಟಗಾರರ ಸಮಸ್ಯೆ ತೀರ ದೊಡ್ಡದೇನಲ್ಲ ಅವರು ಭಾರತಕ್ಕೆ ಬರುತ್ತಾರೆಂದು ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮುಂದಿನ ತಿಂಗಳು ಭಾರತ ಪ್ರವಾಸ ಕೈಗೊಳ್ಳಬೇಕಿದ್ದ ಬಾಂಗ್ಲಾ ಕ್ರಿಕೆಟ್ ಆಟಗಾರರು ಏಕಾಏಕಿ ಮುಷ್ಕರ ಕೈಗೊಂಡಿದ್ದು, ಭಾರತಕ್ಕೆ ಬರುವುದು ಅನುಮಾನ ಎಂಬ ಮಾತುಗಳು ಕೇಳಿ ಬಂದಿವೆ. ಈ ಬಗ್ಗೆ ಮಾತನಾಡಿದ್ದ ಬಾಂಗ್ಲಾ ಕ್ರಿಕೆಟಿಗ ಶಕೀಬ್ ಅಲ್ ಹಸನ್ ಹನ್ನೊಂದು ಅಂಶಗಳ ಬೇಡಿಕೆ ಈಡೇರಿಸುವವರೆಗೆ ಯಾವುದೇ ಕ್ರಿಕೆಟ್ ಚಟುವಟಿಕೆಗಳಲ್ಲೂ ತಾವು ಭಾಗಿಯಾಗುವುದಿಲ್ಲ ಎಂದು ಹೇಳಿದ್ದರು.
11 ಬೇಡಿಕೆ ಮುಂದಿಟ್ಟ ಬಾಂಗ್ಲಾ ಆಟಗಾರರು... ಭಾರತ ಪ್ರವಾಸ ಅನುಮಾನ..!
ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಚುನಾಯಿತರಾಗಿರುವ ಸೌರವ್ ಗಂಗೂಲಿ ಈ ಬಗ್ಗೆ ಮಾತನಾಡಿದ್ದು, ಅದು ಬಾಂಗ್ಲಾದೇಶದ ಆಂತರಿಕ ವಿಚಾರ, ಆದ್ರೆ ಅದನ್ನ ಬಗೆಹರಿಸಿಕೊಂಡು ಭಾರತಕ್ಕೆ ಬರುತ್ತಾರೆ ಎಂದು ಗಂಗೂಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕ್ರಿಕೆಟಿಗರ ಬೇಡಿಕೆ, ಅವರ ವಿಚಾರ ನನ್ನ ಅಡಿಯಲ್ಲಿ ಬರುವುದಿಲ್ಲ. ಈ ಬಗ್ಗೆ ನಾನು ಬಾಂಗ್ಲಾ ಕ್ರಿಕೆಟ್ ಬೋರ್ಡ್ ಜೊತೆ ಮಾತನಾಡುತ್ತೇನೆ ಎಂದು ಗಂಗೂಲಿ ತಿಳಿಸಿದ್ದಾರೆ.